Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 23 ಫೆಬ್ರವರಿ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 23 ಫೆಬ್ರವರಿ 2027

ಮಂಗಳವಾರ · ತಪಸ್ಸು ಕಾಲದ ಎರಡನೆಯ ವಾರ

ಹಬ್ಬಗಳು ಮತ್ತು ಸಂತರು

ತಪಸ್ಸು ಕಾಲದ ಎರಡನೆಯ ವಾರದ ಮಂಗಳವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ನೇರಳೆ

ಸಂತ ಪೊಲಿಕಾರ್ಪ್, ಧರ್ಮಾಧ್ಯಕ್ಷ ಮತ್ತು ಹುತಾತ್ಮ · ಸ್ಮರಣೋಲ್ಲೇಖ

ದಿನದ ವಾಚನಗಳು

ಮೊದಲನೆಯ ವಾಚನ

ಯೆಶಾ 1:10, 16–20

10ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ. 16ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ, 17ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.” 18“ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು. 19ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ. 20ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.

ಪ್ರತಿವಚನ ಕೀರ್ತನೆ

ಕೀರ್ತ 50:8–9, 16–17, 21, 23

8ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ. 9ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ. 16ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ? 17ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ. 21ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು. 23ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”

ಸುವಾರ್ತೆ

ಮತ್ತಾ 23:1–12

1ತರುವಾಯ ಯೇಸು ಜನರ ಗುಂಪಿಗೂ ಹಾಗು ತನ್ನ ಶಿಷ್ಯರಿಗೂ ಹೇಳಿದ್ದೇನೆಂದರೆ, 2“ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ; 3ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ. 4ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು ಮುಟ್ಟಲೊಲ್ಲರು. 5ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ. 6ಇದಲ್ಲದೆ ಔತಣ ಉತ್ಸವಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು; 7ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ ‘ಗುರುಗಳೆನ್ನಿಸಿಕೊಳ್ಳುವುದು,’ ಇವುಗಳೇ ಅವರಿಗೆ ಇಷ್ಟ. 8ಆದರೆ ನೀವು ‘ಬೋಧಕರೆನ್ನಿಸಿಕೊಳ್ಳಬೇಡಿರಿ;’ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು. 9ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ 10ಮತ್ತು ‘ಗುರುವೆಂದು’ ಅನ್ನಿಸಿಕೊಳ್ಳಬೇಡಿರಿ; ಏಕೆಂದರೆ, ಕ್ರಿಸ್ತನೊಬ್ಬನೇ ನಿಮಗಿರುವ ಗುರುವು 11ಆದರೆ ನಿಮ್ಮಲ್ಲಿ ಹೆಚ್ಚಿನವನು ನಿಮ್ಮ ಸೇವಕನಾಗಿರಬೇಕು. 12ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು