ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 23 ಫೆಬ್ರವರಿ
ಆರ್ಥೊಡಾಕ್ಸ್ ಪಂಚಾಂಗ · ಫೆಬ್ರವರಿ 10 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 23 ಫೆಬ್ರವರಿ 2027
ಮಂಗಳವಾರ · ಸುಂಕದವನ ಮತ್ತು ಫರಿಸಾಯನ ವಾರ · ಸ್ವರ 5
ಹಬ್ಬಗಳು ಮತ್ತು ಸಂತರು
Hieromartyr Charalampus, Bishop of Magnesia in Thessaly, and the Martyrs Porphyrius, Baptus and 3 Women Martyrs († 202)
ಉಪವಾಸವಿಲ್ಲದ ವಾರ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
9ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ. 10ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು. 11ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ. 12ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು. 13ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ. 14ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ. 15ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು. 16ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು. ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು. 17ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ. 18ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ. 19ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ. 20ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. 21ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು. 22“ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.
ಸುವಾರ್ತೆ
14“ಇದಲ್ಲದೆ ವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ. 15ಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ. 16ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗಿ ಹೋಗದಿರಲಿ. 17“ಆದರೆ ಆ ದಿನಗಳಲ್ಲಿ ಗರ್ಭಿಣಿಯರಿಗೂ, ಹಾಲು ಕುಡಿಸುವ ತಾಯಂದಿರಿಗೂ ಆಗುವ ಕಷ್ಟ ಎಷ್ಟೆಂದು ಹೇಳಲಿ! 18ಆ ದಿನಗಳು ಸಂಕಟದ ದಿನಗಳಾಗಿರುವುದರಿಂದ ಇದೆಲ್ಲಾ ಚಳಿಗಾಲದಲ್ಲಿ ಆಗಬಾರದೆಂದು ಪ್ರಾರ್ಥನೆ ಮಾಡಿರಿ. 19ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದೂ ಇಲ್ಲ. 20ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ. 21“ಆಗ ಯಾರಾದರೂ ನಿಮಗೆ, ಇಗೋ, ಕ್ರಿಸ್ತನು ಇಲ್ಲಿದ್ದಾನೆ! ಅಗೋ, ಆತನು ಅಲ್ಲಿದ್ದಾನೆ! ಎಂದು ಹೇಳಿದರೆ ನಂಬಬೇಡಿರಿ. 22ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. 23ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ” ಹೇಳಿದ್ದೇನೆ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 10 ಫೆಬ್ರವರಿ ಎಂದರೆ ನಾಗರಿಕ ಪಂಚಾಂಗದ 23 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು