ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 24 ಫೆಬ್ರವರಿ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 24 ಫೆಬ್ರವರಿ 2027
ಬುಧವಾರ · ತಪಸ್ಸು ಕಾಲದ ಎರಡನೆಯ ವಾರ
ಹಬ್ಬಗಳು ಮತ್ತು ಸಂತರು
ತಪಸ್ಸು ಕಾಲದ ಎರಡನೆಯ ವಾರದ ಬುಧವಾರ
ವಾರದ ದಿನ · ಆರಾಧನಾ ಬಣ್ಣ: ನೇರಳೆ
ದಿನದ ವಾಚನಗಳು
ಮೊದಲನೆಯ ವಾಚನ
18ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು. 19ಯೆಹೋವನೇ, ನನ್ನ ಕಡೆಗೆ ಕಿವಿಗೊಡು, ನನ್ನೊಡನೆ ವ್ಯಾಜ್ಯವಾಡುವವರ ಮಾತನ್ನು ಕೇಳು. 20ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ.
ಪ್ರತಿವಚನ ಕೀರ್ತನೆ
4ಶತ್ರುಗಳು ನನಗೆ ರಹಸ್ಯವಾಗಿ ಹಾಕಿದ ಬಲೆಯೊಳಗೆ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು; 5ನೀನೇ ನನಗೆ ಆಧಾರವಲ್ಲವೇ; ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ. 13ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ. 14ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸವಿಟ್ಟಿದ್ದೇನೆ; ನೀನೇ ನನ್ನ ದೇವರೆಂದು ಹೇಳಿಕೊಂಡಿದ್ದೇನೆ. 15ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಂದ ನನ್ನನ್ನು ತಪ್ಪಿಸಿ ಕಾಪಾಡು.
ಸುವಾರ್ತೆ
17ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ದಾರಿಯಲ್ಲಿ ಹನ್ನೆರಡು ಮಂದಿ ಶಿಷ್ಯರನ್ನು ಏಕಾಂತವಾಗಿ ಪಕ್ಕಕ್ಕೆ ಕರೆದುಕೊಂಡು ಅವರಿಗೆ, 18“ನೋಡಿರಿ ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು. 19ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. 20ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ಯೇಸುವಿನ ಬಳಿಗೆ ಬಂದು; ಆತನಿಗೆ ಅಡ್ಡಬಿದ್ದು ಒಂದು ಉಪಕಾರ ಮಾಡಬೇಕೆಂದು ಬೇಡಿಕೊಂಡಳು. 21ಆತನು ಆಕೆಯನ್ನು, “ನಿನ್ನ ಅಪೇಕ್ಷೆ ಏನು?” ಎಂದು ಕೇಳಲು ಆಕೆ ಆತನಿಗೆ, “ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು” ಅಂದಳು. 22ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?” ಎಂದು ಕೇಳಿದನು. ಅವರು ಆತನಿಗೆ, “ನಮ್ಮಿಂದ ಆಗುವುದು” ಅಂದರು. 23ಆಗ ಆತನು ಅವರಿಗೆ, “ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು. 24ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು. 25ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನರ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮುಖ್ಯಾಧಿಕಾರಿಗಳು ಅವರ ಮೇಲೆ ಬಲಾತ್ಕಾರದಿಂದ ಅಧಿಕಾರ ನಡೆಸುತ್ತಾರೆ ಎಂದು ನಿಮಗೆ ಗೊತ್ತು. 26ಆದರೆ ನಿಮ್ಮಲ್ಲಿ ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ. 27ನಿಮ್ಮಲ್ಲಿ ಪ್ರಮುಖನಾಗಿರಲು ಬಯಸುವವನು ನಿಮ್ಮ ದಾಸನಾಗಿರಲಿ. 28ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು