Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 24 ಫೆಬ್ರವರಿ

ಆರ್ಥೊಡಾಕ್ಸ್ ಪಂಚಾಂಗ · ಫೆಬ್ರವರಿ 11 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 24 ಫೆಬ್ರವರಿ 2027

ಬುಧವಾರ · ಸುಂಕದವನ ಮತ್ತು ಫರಿಸಾಯನ ವಾರ · ಸ್ವರ 5

ಹಬ್ಬಗಳು ಮತ್ತು ಸಂತರು

Hieromartyr Blaise, Bishop of Sebaste († c. 316)

ಉಪವಾಸವಿಲ್ಲದ ವಾರ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

2 ಪೇತ್ರ 3:1–18

1ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ. 2ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ. 3ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ, 4“ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪೂರ್ವಿಕರು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲಾ?” ಎಂದು ಪರಿಹಾಸ್ಯಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು. 5ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ. 6ಆ ನೀರಿನಿಂದಲೇ ಅಂದಿನ ಲೋಕವು ಜಲಪ್ರಳಯದಲ್ಲಿ ನಾಶವಾಯಿತು. 7ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ. 8ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ. 9ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ. 10ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು. 11ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು. 12ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು. 13ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು. 14ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ. 15ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ. 16ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ. 17ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ. 18ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.

ಸುವಾರ್ತೆ

ಮಾರ್ಕ 13:24–31

24ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ; “‘ಸೂರ್ಯನು ಕತ್ತಲಾಗಿ ಹೋಗುವನು. 25ಚಂದ್ರನು ತನ್ನ ಬೆಳಕು ಕೊಡದೆ ಇರುವನು. ನಕ್ಷತ್ರಗಳು ಆಕಾಶದಿಂದ ಬೀಳುವವು. ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.’ 26ಆಗ ಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು. 27ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.” 28“ಅಂಜೂರ ಮರವನ್ನು ನೋಡಿ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಕೊಂಬೆಗಳಲ್ಲಿ ಇನ್ನೂ ಎಳೆದಾಗಿ ಎಲೆಗಳು ಚಿಗುರುವಾಗ ಬೇಸಿಗೆಯು ಸಮೀಪಿಸಿತು ಎಂದು ಅರಿತುಕೊಳ್ಳುತ್ತಿರಲ್ಲಾ. 29ಹಾಗೆಯೇ ಇವೆಲ್ಲವೂ ಆಗುವುದನ್ನು ನೀವು ನೋಡುವಾಗ ಬಾಗಿಲ ಹತ್ತಿರದಲ್ಲಿಯೇ ಇದ್ದೆ ಎಂದು ತಿಳಿದುಕೊಳ್ಳಿರಿ. 30ಇದೆಲ್ಲವೂ ನೆರವೇರುವವರೆಗೂ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. 31ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.”

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 11 ಫೆಬ್ರವರಿ ಎಂದರೆ ನಾಗರಿಕ ಪಂಚಾಂಗದ 24 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು