Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 25 ಫೆಬ್ರವರಿ

ಆರ್ಥೊಡಾಕ್ಸ್ ಪಂಚಾಂಗ · ಫೆಬ್ರವರಿ 12 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 25 ಫೆಬ್ರವರಿ 2027

ಗುರುವಾರ · ಸುಂಕದವನ ಮತ್ತು ಫರಿಸಾಯನ ವಾರ · ಸ್ವರ 5

ಹಬ್ಬಗಳು ಮತ್ತು ಸಂತರು

Iveron Icon of the Mother of God (9th C)

ಉಪವಾಸವಿಲ್ಲದ ವಾರ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

1 ಯೋಹಾ 1:8–2:6

8ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ. 9ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು. 10ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡಿದಂತಾಗುತ್ತದೆ ಮತ್ತು ಆತನ ವಾಕ್ಯವು ನಮ್ಮಲ್ಲಿ ನೆಲೆಗೊಂಡಿರುವುದಿಲ್ಲ. 2:1ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ. 2ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ. 3ನಾವು ಆತನ ಆಜ್ಞೆಗಳನ್ನು ಅರಿತು ನಡೆಯುವುದರಿಂದಲೇ ಆತನನ್ನು ನಾವು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ. 4ಒಬ್ಬನು, “ನಾನು ಆತನನ್ನು ಬಲ್ಲೆನು” ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ. 5ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ. 6ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ.

ಸುವಾರ್ತೆ

ಮಾರ್ಕ 13:31–14:2

31ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.” 32“ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು. 33ಆ ಕಾಲವು ಯಾವಾಗ ಬರುವುದು ಎಂದು ನಿಮಗೆ ತಿಳಿಯದೆ ಇರುವುದರಿಂದ ನೀವು ಎಚ್ಚರವಾಗಿರಿ, ಜಾಗರೂಕರಾಗಿರಿ. 34ಅದು ಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ” ಎಂದು ನಾನು ನಿಮಗೆ ಹೇಳುತ್ತಿದ್ದೇನೆ. 35“ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ! 36ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುತ್ತಿರುವುದನ್ನು ಕಂಡಾನು. 37ನಾನು ನಿಮಗೆ ಹೇಳುತ್ತಿರುವುದನ್ನು ಎಲ್ಲರಿಗೂ ಹೇಳುತ್ತಿದ್ದೇನೆ; ಎಚ್ಚರವಾಗಿರಿ!” ಎಂದನು. 14:1ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು. 2“ಆದರೆ ಹಬ್ಬದ ಸಂದರ್ಭದಲ್ಲಿ ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ನಮ್ಮ ಮೇಲೆ ಜನರು ದಂಗೆ ಎದ್ದಾರು” ಎಂದು ಮಾತನಾಡಿಕೊಂಡರು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 12 ಫೆಬ್ರವರಿ ಎಂದರೆ ನಾಗರಿಕ ಪಂಚಾಂಗದ 25 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು