Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 26 ಫೆಬ್ರವರಿ

ಆರ್ಥೊಡಾಕ್ಸ್ ಪಂಚಾಂಗ · ಫೆಬ್ರವರಿ 13 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 26 ಫೆಬ್ರವರಿ 2027

ಶುಕ್ರವಾರ · ಸುಂಕದವನ ಮತ್ತು ಫರಿಸಾಯನ ವಾರ · ಸ್ವರ 5

ಹಬ್ಬಗಳು ಮತ್ತು ಸಂತರು

Venerable Martinian of Cæsarea in Palestine (c.422)

ಉಪವಾಸವಿಲ್ಲದ ವಾರ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

1 ಯೋಹಾ 2:7–17

7ಪ್ರಿಯರೇ, ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಆಜ್ಞೆಯಾಗಿದೆ. ಈ ಹಳೆಯ ಆಜ್ಞೆಯು ನೀವು ಕೇಳಿದ ವಾಕ್ಯವೇ. 8ಆದರೂ ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಂತೆಯೇ ಇರುವುದು. ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ. 9ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ. 10ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಪಾಪದಲ್ಲಿ ಎಡವಿಬೀಳುವಂಥದ್ದು ಯಾವುದೂ ಅವನಲ್ಲಿ ಇಲ್ಲ. 11ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು ಕತ್ತಲೆಯಲ್ಲಿ ನಡೆಯುತ್ತಿದ್ದಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡುಮಾಡಿರುವುದರಿಂದ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂದು ಅವನಿಗೆ ತಿಳಿಯದು. 12ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. 13ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ, ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. 14ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಾನು ನಿಮಗೆ ಬರೆದಿದ್ದೇನೆ. 15ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ. 16ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ. 17ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು.

ಸುವಾರ್ತೆ

ಮಾರ್ಕ 14:3–9

3ಆತನು ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು. 4ಆದರೆ ಕೆಲವರು ತಮ್ಮೊಳಗೆ ಕೋಪಗೊಂಡು, “ಈ ತೈಲವನ್ನು ಹೀಗೆ ವ್ಯರ್ಥಮಾಡಿದ್ದೇಕೆ? 5ಇದನ್ನು ಮುನ್ನೂರು ಬೆಳ್ಳಿನಾಣ್ಯಗಳಿಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದು ಹೇಳಿ ಆಕೆಯನ್ನು ದೂಷಿಸಿದರು. 6ಆದರೆ ಯೇಸು, “ಆಕೆಯನ್ನು ಬಿಟ್ಟುಬಿಡಿರಿ, ಆಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ. 7ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸು ಬಂದಾಗ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ. 8ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ಈ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ. 9ಸುವಾರ್ತೆಯು ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವುದೋ ಅಲ್ಲೆಲ್ಲಾ ಈಕೆಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 13 ಫೆಬ್ರವರಿ ಎಂದರೆ ನಾಗರಿಕ ಪಂಚಾಂಗದ 26 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು