Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 1 ಮಾರ್ಚ್

ಆರ್ಥೊಡಾಕ್ಸ್ ಪಂಚಾಂಗ · ಫೆಬ್ರವರಿ 16 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 1 ಮಾರ್ಚ್ 2027

ಸೋಮವಾರ · ಮಾಂಸ ತ್ಯಾಗದ ವಾರ · ಸ್ವರ 6

ಹಬ್ಬಗಳು ಮತ್ತು ಸಂತರು

ಮಾಂಸ ತ್ಯಾಗದ ವಾರದ ಸೋಮವಾರ

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

1 ಯೋಹಾ 2:18–3:10

18ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಕ್ರಿಸ್ತವಿರೋಧಿಗಳು ಅನೇಕರಿದ್ದಾರೆ. ಆದ್ದರಿಂದ ಇದು ಅಂತ್ಯ ಕಾಲವಾಗಿದೆ ಎಂದು ನಾವು ಬಲ್ಲವರಾಗಿದ್ದೇವೆ. 19ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ. 20ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದೀರಿ ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ. 21ನೀವು ಸತ್ಯವನ್ನು ತಿಳಿಯದವರಲ್ಲ. ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವುದಿಲ್ಲವೆಂಬುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು. 22ಸುಳ್ಳುಗಾರನು ಯಾರು? ಯೇಸುವನ್ನು ಕ್ರಿಸ್ತನಲ್ಲ ಎಂದು ಅಲ್ಲಗಳೆಯುವವನು ಸುಳ್ಳುಗಾರನಾಗಿದ್ದಾಯೇ ಹೊರತು ಮತ್ತಾರು ಆಗಿರಲು ಸಾಧ್ಯ? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನು ಕ್ರಿಸ್ತವಿರೋಧಿಯಾಗಿದ್ದಾನೆ. 23ಯಾರು ದೇವರ ಮಗನನ್ನು ಅಲ್ಲಗಳೆಯುವನೋ ಅವನು ದೇವರಿಗೆ ಸೇರಿದವನಲ್ಲ. ಯಾರು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಯಾದ ದೇವರಿಗೆ ಸೇರಿದವನಾಗಿದ್ದಾನೆ. 24ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಾದ ದೇವರಲ್ಲಿಯೂ ನೆಲೆಗೊಂಡಿರುತ್ತೀರಿ. 25ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ. 26ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಿ ತಪ್ಪುದಾರಿಗೆ ಎಳೆಯುವವರ ಕುರಿತಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ. 27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ. 28ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ. 29ಆತನು ನೀತಿವಂತನಾಗಿದ್ದಾನೆಂಬುದು ನಿಮಗೆ ತಿಳಿದಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನೆಂದು ನೀವು ಬಲ್ಲವರಾಗಿರುತ್ತೀರಿ. 3:1ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ. 2ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು. 3ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ. 4ಪಾಪಮಾಡುವ ಪ್ರತಿಯೊಬ್ಬನೂ ಅಧರ್ಮವನ್ನು ಮಾಡುವವನಾಗಿದ್ದಾನೆ; ಪಾಪವು ಅಧರ್ಮವೇ. 5ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು. 6ಆತನಲ್ಲಿ ನೆಲೆಗೊಂಡಿರುವವನು ಪಾಪವನ್ನುಮಾಡುವುದಿಲ್ಲ; ಪಾಪಮಾಡುವವನು ಆತನನ್ನು ನೋಡಿಲ್ಲ, ತಿಳಿದೂ ಇಲ್ಲ; 7ಪ್ರಿಯರಾದ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ. 8ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು. 9ದೇವರಿಂದ ಹುಟ್ಟಿದವನು ಪಾಪಮಾಡುವುದಿಲ್ಲ. ಏಕೆಂದರೆ ದೇವರ ಸ್ವಭಾವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡಲಾರನು. 10ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.

ಸುವಾರ್ತೆ

ಮಾರ್ಕ 11:1–11

1ಅವರು ಯೆರೂಸಲೇಮಿಗೆ ಸಮೀಪಿಸಿ ಬೆತ್ಫಗೆ ಹಾಗೂ ಬೇಥಾನ್ಯದ ಬಳಿಯಲ್ಲಿರುವ ಎಣ್ಣೆಮರಗಳ ಗುಡ್ಡಕ್ಕೆ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, 2“ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಅದರೊಳಗೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ; ಇದುವರೆಗೂ ಅದರ ಮೇಲೆ ಯಾರೂ ಸವಾರಿ ಮಾಡಿಲ್ಲ; ಅದನ್ನು ಬಿಚ್ಚಿ ಇಲ್ಲಿಗೆ ತನ್ನಿರಿ. 3ಯಾರಾದರೂ ನಿಮ್ಮನ್ನು, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಇದು ಕರ್ತನಿಗೆ ಅಗತ್ಯವಾಗಿದೆ’ ಅನ್ನಿರಿ, ಅವರು ಬೇಗನೆ ಅದನ್ನು ಕಳುಹಿಸಿಕೊಡುವರು” ಎಂದು ಹೇಳಿ ಕಳುಹಿಸಿದನು. 4ಆ ಶಿಷ್ಯರು ಹೋಗಿ ಬೀದಿಯಲ್ಲಿ ಹೊರಗೆ ಬಾಗಿಲಿನ ಹತ್ತಿರ ಕತ್ತೆಮರಿಯನ್ನು ಕಟ್ಟಿರುವುದನ್ನು ಕಂಡು ಅದನ್ನು ಬಿಚ್ಚಿದರು. 5ಅಲ್ಲಿ ನಿಂತಿದ್ದವರಲ್ಲಿ ಕೆಲವರು, “ಈ ಕತ್ತೆಮರಿಯನ್ನು ಏಕೆ ಬಿಚ್ಚುತ್ತೀರಿ?” ಎಂದು ಅವರನ್ನು ಕೇಳಿದರು. 6ಅದಕ್ಕೆ ಯೇಸು ಹೇಳಿದಂತೆಯೇ ಅವರು ಹೇಳಿದರು ಆಗ ಜನರು ಅದನ್ನು ತೆಗೆದುಕೊಂಡು ಹೋಗಲು ಬಿಟ್ಟುಕೊಟ್ಟರು. 7ಶಿಷ್ಯರು ಆ ಕತ್ತೆಮರಿಯನ್ನು ಯೇಸುವಿನ ಬಳಿಗೆ ತಂದು ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಕಲು ಆತನು ಅದನ್ನು ಹತ್ತಿ ಕುಳಿತುಕೊಂಡನು. 8ಆಗ ಅನೇಕರು ತಮ್ಮ ಮೇಲಂಗಿಗಳನ್ನು ದಾರಿಯಲ್ಲಿ ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಳೆಯ ರೆಂಬೆಗಳನ್ನು ಕಡಿದು, ತಂದು ಹಾಸಿದರು. 9ಯೇಸುವಿನ ಹಿಂದೆ ಹಾಗೂ ಮುಂದೆ ಹೋಗುತ್ತಿದ್ದವರು: “ಹೊಸನ್ನ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; 10ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದವುಂಟಾಗಲಿ; ಮೇಲಣ ಲೋಕಗಳಲ್ಲಿ ಹೊಸನ್ನ” ಎಂದು ಆರ್ಭಟಿಸಿದರು. 11ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯದೊಳಗೆ ಹೋಗಿ ಸುತ್ತಲೂ ನೋಡಿದನು, ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಬೇಥಾನ್ಯಕ್ಕೆ ಹೊರಟು ಹೋದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 16 ಫೆಬ್ರವರಿ ಎಂದರೆ ನಾಗರಿಕ ಪಂಚಾಂಗದ 1 ಮಾರ್ಚ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು