Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 2 ಮಾರ್ಚ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 2 ಮಾರ್ಚ್ 2027

ಮಂಗಳವಾರ · ತಪಸ್ಸು ಕಾಲದ ಮೂರನೆಯ ವಾರ

ಹಬ್ಬಗಳು ಮತ್ತು ಸಂತರು

ತಪಸ್ಸು ಕಾಲದ ಮೂರನೆಯ ವಾರದ ಮಂಗಳವಾರ

ವಾರದ ದಿನ · ಆರಾಧನಾ ಬಣ್ಣ: ನೇರಳೆ

ದಿನದ ವಾಚನಗಳು

ಮೊದಲನೆಯ ವಾಚನ

ಈ ಅನುವಾದದಲ್ಲಿ ಇಲ್ಲ

ಪ್ರತಿವಚನ ಕೀರ್ತನೆ

ಕೀರ್ತ 25:4–9

4ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; ನೀನು ಒಪ್ಪುವ ದಾರಿಯನ್ನು ತೋರಿಸು. 5ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ. 6ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ. 7ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ. 8ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು. 9ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.

ಸುವಾರ್ತೆ

ಮತ್ತಾ 18:21–35

21ಆಗ ಪೇತ್ರನು ಆತನ ಬಳಿಗೆ ಬಂದು, “ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?” ಎಂದು ಕೇಳಿದನು. 22ಯೇಸು ಅವನಿಗೆ, “ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ. 23ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ. 24ಅವನು ಲೆಕ್ಕ ತೆಗೆದುಕೊಳ್ಳುವುದಕ್ಕೆ ಪ್ರಾರಂಭಮಾಡಿದಾಗ ಹತ್ತು ಸಾವಿರ ಬಂಗಾರದ ನಾಣ್ಯ ನೀಡಬೇಕಿದ್ದ ಸೇವಕನನ್ನು ಅವನ ಬಳಿಗೆ ಕರತಂದರು. 25ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು. 26ಆ ಸೇವಕನು ಮೊಣಕಾಲೂರಿ ತನ್ನ ತಲೆಯನ್ನು ಬಾಗಿ ಅವನಿಗೆ, ‘ಒಡೆಯನೇ, ನನ್ನ ಮೇಲೆ ತಾಳ್ಮೆಯಿರಲಿ, ನಿನ್ನದೆಲ್ಲವನ್ನೂ ನಾನು ಕೊಟ್ಟು ತೀರಿಸುತ್ತೇನೆಂದು’ ಹೇಳಿದನು. 27ಆ ಸೇವಕನ ಒಡೆಯನು ಕನಿಕರಪಟ್ಟು ಅವನನ್ನು ಬಿಡಿಸಿ ಆ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು. 28ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು. 29ಆದರೆ ಅವನ ಜೊತೆ ಸೇವಕನು ಮೊಣಕಾಲೂರಿ, ‘ನನ್ನ ಮೇಲೆ ತಾಳ್ಮೆಯಿರಲಿ ನಾನು ತೀರಿಸುತ್ತೇನೆ’ ಎಂದು ಬೇಡಿಕೊಂಡನು. 30ಆದರೆ ಅವನು ಒಪ್ಪದೆ ಹೊರಟುಹೋಗಿ ಆ ಸಾಲ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. 31ಅವನ ಜೊತೆ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ತಮ್ಮ ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ಆತನಿಗೆ ತಿಳಿಸಿದರು. 32ಆಗ ಅವನ ಒಡೆಯನು ಅವನನ್ನು ಕರಸಿ, ‘ಓ, ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲಾ ನಾನು ಮನ್ನಿಸಿಬಿಟ್ಟೆನಲ್ಲವೇ? 33ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೆ ಸೇವಕನನ್ನು ಕರುಣಿಸಬಾರದಾಗಿತ್ತೇ?’ ಎಂದು ಹೇಳಿ, 34ಒಡೆಯನು ಸಿಟ್ಟುಗೊಂಡು ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಅವನನ್ನು ಪೀಡಿಸುವವರ ಕೈಗೆ ಒಪ್ಪಿಸಿದನು. 35ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು” ಅಂದನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು