ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 2 ಮಾರ್ಚ್
ಆರ್ಥೊಡಾಕ್ಸ್ ಪಂಚಾಂಗ · ಫೆಬ್ರವರಿ 17 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 2 ಮಾರ್ಚ್ 2027
ಮಂಗಳವಾರ · ಮಾಂಸ ತ್ಯಾಗದ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
ಮಾಂಸ ತ್ಯಾಗದ ವಾರದ ಮಂಗಳವಾರ
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
10ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ. 11ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಸಂದೇಶವಾಗಿದೆ. 12ಕೆಡುಕುನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಅವನು ಯಾಕೆ ತಮ್ಮನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟದ್ದು ಮತ್ತು ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ. 13ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ. 14ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ. 15ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ. 16ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. 17ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ? 18ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು. 19ನಾವು ಸತ್ಯಕ್ಕೆ ಸೇರಿದವರೆಂಬುದು ಇದರಿಂದಲೇ ನಮಗೆ ತಿಳಿಯುತ್ತದೆ, ನಮ್ಮ ಹೃದಯವು ದೇವರ ಸಮಕ್ಷಮದಲ್ಲಿ ದೋಷರಹಿತವಾಗಿರುತ್ತದೆ. 20ಏಕೆಂದರೆ ನಮ್ಮ ಹೃದಯವು ಯಾವ ವಿಷಯದಲ್ಲಾದರು ನಮ್ಮನ್ನು ದೋಷಿಗಳೆಂದು ನಿರ್ಣಯಿಸಿದರೆ, ದೇವರು ನಮ್ಮ ಹೃದಯವನ್ನು ಬಲ್ಲವನಾಗಿರುವುದರಿಂದ ನಮ್ಮ ಹೃದಯವನ್ನು ಆತನಲ್ಲಿ ದೃಢಪಡಿಸಬಹುದು.
ಸುವಾರ್ತೆ
10ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು. 11ಅವರು ಅದನ್ನು ಕೇಳಿ ಸಂತೋಷಪಟ್ಟು, ನಿನಗೆ ಹಣಕೊಡುತ್ತೇವೆ ಎಂದು ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ಹುಡುಕುತ್ತಿದ್ದನು. 12ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀನು ಪಸ್ಕದ ಭೋಜನ ಮಾಡಲು ನಾವು ಎಲ್ಲಿ ಸಿದ್ಧಮಾಡಬೇಕೆಂದು ಹೇಳು” ಎಂದು ಕೇಳಿದರು. 13ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, “ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ. 14ಅವನು ಯಾವ ಮನೆಯೊಳಗೆ ಹೋಗುವನೋ ಆ ಮನೆಯ ಯಜಮಾನನಿಗೆ, ‘ನಮ್ಮ ಗುರು, ತನ್ನ ಶಿಷ್ಯರ ಸಂಗಡ ಪಸ್ಕದ ಭೋಜನ ಮಾಡಲು ಕೊಠಡಿ ಎಲ್ಲಿದೆ?’ ಎಂಬುದಾಗಿ ಕೇಳುತ್ತಿದ್ದಾನೆ ಎಂದು ಹೇಳಿರಿ. 15“ಅವನು ಸಜ್ಜುಗೊಳಿಸಿ ಸಿದ್ಧಮಾಡಿರುವ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಭೋಜನಕ್ಕೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿ ಕೊಟ್ಟನು. 16ಶಿಷ್ಯರು ಹೊರಟು ಪಟ್ಟಣದೊಳಗೆ ಹೋಗಿ ಯೇಸು ತಮಗೆ ಹೇಳಿದಂತೆ ಎಲ್ಲವನ್ನು ಕಂಡು ಪಸ್ಕವನ್ನು ಸಿದ್ಧಮಾಡಿದರು. 17ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು. 18ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು. 19ಆಗ ಅವರು ಬಹು ದುಃಖದಿಂದ ಒಬ್ಬೊಬ್ಬರಾಗಿ ಆತನಿಗೆ “ನಾನಲ್ಲವಲ್ಲಾ?” ಎಂದು ಕೇಳತೊಡಗಿದರು. 20ಆತನು ಉತ್ತರವಾಗಿ ಅವರಿಗೆ “ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ನನ್ನ ಸಂಗಡ ಬಟ್ಟಲಲ್ಲಿ ರೊಟ್ಟಿಯನ್ನು ಅದ್ದುವವನೇ. 21ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಯಾರು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗಿತ್ತು” ಅಂದನು. 22ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ “ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ” ಎಂದನು. 23ತರುವಾಯ ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸುತ್ತಿ ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟನು. ಅವರೆಲ್ಲರೂ ಅದರಿಂದ ಕುಡಿದರು. 24ಯೇಸು ಅವರಿಗೆ, “ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವ ಒಡಂಬಡಿಕೆಯ ರಕ್ತ. 25ನಿಮಗೆ ಸತ್ಯವಾಗಿ ಹೇಳುತ್ತೇನೆ; ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ” ಎಂದನು. 26ಬಳಿಕ ಅವರು ಒಂದು ಕೀರ್ತನೆ ಹಾಡಿ ಎಣ್ಣೆಮರಗಳ ಗುಡ್ಡಕ್ಕೆ ಹೊರಟು ಹೋದರು. 27ಆಗ ಯೇಸು ಅವರಿಗೆ, “ನೀವೆಲ್ಲರೂ ನನ್ನನ್ನು ಬಿಟ್ಟು ಓಡಿಹೋಗುವಿರಿ. ಏಕೆಂದರೆ; “‘ನಾನು ಕುರುಬನನ್ನು ಹೊಡೆಯುವೆನು; ಕುರಿಗಳು ಚದರಿ ಹೋಗುವವು’ ಎಂದು ಬರೆದಿದೆಯಲ್ಲಾ ಅಂದನು. 28ಆದರೂ ನಾನು ಸತ್ತು ಜೀವಿತನಾಗಿ ಎದ್ದಮೇಲೆ ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುವೆನು” ಎಂದು ಹೇಳಿದನು. 29ಪೇತ್ರನು ಯೇಸುವಿಗೆ, “ಎಲ್ಲರೂ ಬಿಟ್ಟುಹೋದರೂ ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ” ಎಂದು ಹೇಳಿದನು. 30ಯೇಸುವು ಆತನಿಗೆ, “ಸತ್ಯವಾಗಿ ಹೇಳುತ್ತೇನೆ ಇಂದು ಈ ರಾತ್ರಿಯಲ್ಲಿಯೇ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ” ಎಂದನು. 31ಆದರೆ ಅವನು, “ನಾನು ನಿನ್ನ ಸಂಗಡ ಸಾಯಬೇಕಾಗಿ ಬಂದರೂ ನಿನ್ನನ್ನು ನಿರಾಕರಿಸುವುದೇ ಇಲ್ಲವೆಂದು” ಬಹು ಖಂಡಿತವಾಗಿ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು. 32ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಆತನು ತನ್ನ ಶಿಷ್ಯರಿಗೆ, “ನಾನು ಪ್ರಾರ್ಥನೆ ಮಾಡುವ ತನಕ, ನೀವು ಇಲ್ಲೇ ಕುಳಿತುಕೊಂಡಿರಿ” ಎಂದು ಹೇಳಿದನು. 33ಪೇತ್ರ, ಯಾಕೋಬ, ಯೋಹಾನರನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೋಗಿ ಬಹು ಬೆಚ್ಚಿಬೆರಗಾಗಿ ಮನಗುಂದಿದವನಾದನು. 34ಮತ್ತು ಆತನು ಅವರಿಗೆ “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ ನೀವು ಇಲ್ಲೇ ಕಾದುಕೊಂಡಿದ್ದು ಎಚ್ಚರವಾಗಿರಿ” ಎಂದು ಹೇಳಿದನು. 35ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿಹೋಗುವಂತೆ ಪ್ರಾರ್ಥಿಸಿದನು. 36“ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ” ಎಂದನು. 37ಆ ಮೇಲೆ ಆತನು ಬಂದು ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆಮಾಡುತ್ತಿರುವೆಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ? 38ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ದೇಹಕ್ಕೆ ಬಲ ಸಾಲದು” ಎಂದು ಹೇಳಿದನು. 39ಆ ಮೇಲೆ ಪುನಃ ಹೋಗಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು. 40ಯೇಸು ಹಿಂತಿರುಗಿ ಬಂದಾಗ ಅವರು ಪುನಃ ನಿದ್ರೆ ಮಾಡುವುದನ್ನು ಕಂಡನು ಯಾಕೆಂದರೆ ಅವರ ಕಣ್ಣುಗಳು ಭಾರವಾಗಿದ್ದವು. ಮತ್ತು ಆತನಿಗೆ ಏನು ಉತ್ತರ ಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ. 41ಆತನು ಮೂರನೆಯ ಸಾರಿ ಅವರ ಬಳಿಗೆ ಬಂದು, “ನೀವು ಇನ್ನು ನಿದ್ರಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಿರಾ? ಸಾಕು, ಆ ಗಳಿಗೆ ಸಮೀಪಿಸಿದೆ; ಮನುಷ್ಯಕುಮಾರನು ಪಾಪಿಗಳ ಕೈಗೆ ಒಪ್ಪಿಸಲ್ಪಡುತ್ತಾನೆ. 42ಏಳಿರಿ, ಹೋಗೋಣ. ಇಗೋ, ನನ್ನನ್ನು ಪಾಪಿಗಳ ಕೈಗೆ ಹಿಡಿದುಕೊಡುವವನು ಸಮೀಪಕ್ಕೆ ಬಂದಿದ್ದಾನೆ ನೋಡಿರಿ” ಎಂದು ಹೇಳಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 17 ಫೆಬ್ರವರಿ ಎಂದರೆ ನಾಗರಿಕ ಪಂಚಾಂಗದ 2 ಮಾರ್ಚ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು