ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 3 ಮಾರ್ಚ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 3 ಮಾರ್ಚ್ 2027
ಬುಧವಾರ · ತಪಸ್ಸು ಕಾಲದ ಮೂರನೆಯ ವಾರ
ಹಬ್ಬಗಳು ಮತ್ತು ಸಂತರು
ತಪಸ್ಸು ಕಾಲದ ಮೂರನೆಯ ವಾರದ ಬುಧವಾರ
ವಾರದ ದಿನ · ಆರಾಧನಾ ಬಣ್ಣ: ನೇರಳೆ
ದಿನದ ವಾಚನಗಳು
ಮೊದಲನೆಯ ವಾಚನ
1ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು. 5ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ. 6ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು. 7ನಾವು ನಮ್ಮ ದೇವರಾದ ಯೆಹೋವನಿಗೆ ಮೊರೆಯಿಡುವಾಗೆಲ್ಲಾ ಆತನು ಸಮೀಪವಾಗಿಯೇ ಇದ್ದಾನಲ್ಲಾ; ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವನು? 8ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಇಂಥ ನ್ಯಾಯವಾದ ಆಜ್ಞಾವಿಧಿಗಳುಳ್ಳ ಈ ಧರ್ಮಶಾಸ್ತ್ರಕ್ಕೆ ಸಮಾನವಾದದ್ದು ಬೇರೆ ಯಾವ ಜನಾಂಗಕ್ಕೆ ಉಂಟು? 9ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.
ಪ್ರತಿವಚನ ಕೀರ್ತನೆ
12ಯೆರೂಸಲೇಮೇ, ಯೆಹೋವನನ್ನು ಕೀರ್ತಿಸು, ಚೀಯೋನೇ, ನಿನ್ನ ದೇವರನ್ನು ಸ್ತುತಿಸು. 13ಆತನು ನಿನ್ನ ಹೆಬ್ಬಾಗಿಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ, ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ. 15ತನ್ನ ನುಡಿಯನ್ನು ಭೂಲೋಕಕ್ಕೆ ಕಳುಹಿಸುತ್ತಾನೆ, ಆತನ ವಾಕ್ಯವು ಬಹು ವೇಗಶಾಲಿಯಾಗಿದೆ. 16ಉಣ್ಣೆಯಂತಿರುವ ಹಿಮವನ್ನು ಬೀಳಿಸುತ್ತಾನೆ, ಇಬ್ಬನಿಯನ್ನು ಬೂದಿಯಂತೆ ಹರವುತ್ತಾನೆ. 19ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ, ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ.
ಸುವಾರ್ತೆ
17“ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ. 18ನಿಮಗೆ ಸತ್ಯವಾಗಿ ಹೇಳುತ್ತೇನೆ, ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ. 19ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು