ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 4 ಮಾರ್ಚ್
ಆರ್ಥೊಡಾಕ್ಸ್ ಪಂಚಾಂಗ · ಫೆಬ್ರವರಿ 19 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 4 ಮಾರ್ಚ್ 2027
ಗುರುವಾರ · ಮಾಂಸ ತ್ಯಾಗದ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
ಮಾಂಸ ತ್ಯಾಗದ ವಾರದ ಗುರುವಾರ
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
20ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು? 21ದೇವರನ್ನು ಪ್ರೀತಿಸುವವನು, ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ. 5:1ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ. 2ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ. 3ದೇವರ ಮೇಲಿನ ಪ್ರೀತಿ ಏನೆಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವುದೇ. ಆತನ ಆಜ್ಞೆಗಳು ಕಷ್ಟಕರವಾದವುಗಳಲ್ಲ. 4ಏಕೆಂದರೆ ದೇವರಿಂದ ಹುಟ್ಟಿದವನು ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದ್ದು ನಮ್ಮ ನಂಬಿಕೆಯೇ. 5ಯೇಸುಕ್ರಿಸ್ತನು ದೇವರ ಮಗನೆಂದು ಒಪ್ಪಿಕೊಂಡು ನಂಬಿದವರಲ್ಲದೆ ಮತ್ತಾರು ಲೋಕವನ್ನು ಜಯಿಸಿದವರಾಗಿದ್ದಾರೆ? 6ಈತನು ಅಂದರೆ ಯೇಸು ಕ್ರಿಸ್ತನು ನೀರಿನಿಂದಲೂ, ರಕ್ತದಿಂದಲೂ ಬಂದಾತನು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ, ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ. ಆತ್ಮವು ಸಾಕ್ಷಿಯನ್ನು ಕೊಡುತ್ತದೆ. ಏಕೆಂದರೆ ಆತ್ಮನು ಸತ್ಯಸ್ವರೂಪನೇ. 7ಇದಲ್ಲದೆ ಸಾಕ್ಷಿ ಕೊಡುವವರು ಮೂವರಿದ್ದಾರೆ. 8ಆತ್ಮ, ನೀರು, ರಕ್ತ ಎಂಬ ಮೂರು ಸಾಕ್ಷಿಗಳುಂಟು. ಈ ಮೂರು ಒಂದೇ ಅಭಿಪ್ರಾಯವನ್ನು ಒಪ್ಪಿಕೊಳ್ಳುತ್ತವೆ. 9ನಾವು ಮನುಷ್ಯರ ಸಾಕ್ಷಿಯನ್ನು ಒಪ್ಪಿಕೊಳ್ಳುತ್ತೇವಲ್ಲಾ, ಹಾಗೆ ದೇವರ ಸಾಕ್ಷಿಯು ಅದಕ್ಕಿಂತಲೂ ಶ್ರೇಷ್ಠವಾಗಿದೆ. ಏಕೆಂದರೆ ದೇವರು ಕೊಟ್ಟ ಸಾಕ್ಷಿಯು ತನ್ನ ಮಗನ ಕುರಿತದ್ದಾಗಿದೆ. 10ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ. ಹೇಗೆಂದರೆ ದೇವರು ತನ್ನ ಮಗನ ಪರವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ. 11ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ. 12ಯಾರು ದೇವರ ಮಗನನ್ನು ನಂಬುತ್ತಾರೋ ಅವರಲ್ಲಿ ಆ ಜೀವ ಉಂಟು, ಆದರೆ ಯಾರು ದೇವರ ಮಗನನ್ನು ನಂಬುವುದಿಲ್ಲವೋ ಅವರಲ್ಲಿ ಆ ಜೀವವಿಲ್ಲ. 13ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ಆ ನಿತ್ಯಜೀವ ಉಂಟೆಂಬುದು ಗೊತ್ತಾಗುವುದಕ್ಕಾಗಿ ನಿಮಗೆ ಈ ವಿಷಯಗಳನ್ನು ಬರೆದಿದ್ದೇನೆ. 14ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು. 15ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬುದು ನಮಗೆ ತಿಳಿದಿದ್ದರೆ, ನಾವು ಬೇಡಿದವುಗಳು ಆತನಿಂದ ನಮಗೆ ದೊರೆಯುತ್ತವೆಂಬುದು ನಮಗೆ ತಿಳಿಯುತ್ತದೆ. 16ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ. 17ನೀತಿಗೆ ವಿರುದ್ಧವಾದದ್ದೆಲ್ಲವೂ ಪಾಪವಾಗಿದೆ. ಆದರೂ ಮರಣಕರವಲ್ಲದ ಪಾಪವುಂಟು. 18ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ. 19ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ. 20ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ. 21ಪ್ರಿಯಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.
ಸುವಾರ್ತೆ
1ಬೆಳಗಾದ ಕೂಡಲೆ ಮುಖ್ಯಯಾಜಕರೂ, ಹಿರಿಯರೂ, ಶಾಸ್ತ್ರಿಗಳೂ, ಹಿರೀಸಭೆಯ ಸದಸ್ಯರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ಕರೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು. 2ಪಿಲಾತನು ಆತನನ್ನು, “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು ಆತನು, “ನೀನೇ ಹೇಳಿದ್ದೀ” ಎಂದು ಉತ್ತರಕೊಟ್ಟನು. 3ಮುಖ್ಯಯಾಜಕರು ಆತನ ಮೇಲೆ ತುಂಬಾ ದೂರು ಹೇಳುತ್ತಿದ್ದರು. 4ಆಗ ಪಿಲಾತನು ಪುನಃ ಯೇಸುವನ್ನು, “ನೀನು ಏನೂ ಉತ್ತರಕೊಡುವುದಿಲ್ಲವೇ? ಇವರು ನಿನ್ನ ಮೇಲೆ ತುಂಬಾ ದೂರುಗಳನ್ನು ಹೇಳುತ್ತಿದ್ದಾರೆ ನೋಡು” ಎಂದು ಹೇಳಿದನು. 5ಆದರೆ ಯೇಸು ಏನೂ ಉತ್ತರಕೊಡಲಿಲ್ಲ. ಅದನ್ನು ನೋಡಿ ಪಿಲಾತನು ಆಶ್ಚರ್ಯಪಟ್ಟನು. 6ಪ್ರತಿ ಪಸ್ಕಹಬ್ಬದಲ್ಲಿ ಜನರು ಬೇಡಿದ ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವುದು ಪಿಲಾತನ ಅಧಿಕಾರಕ್ಕೆ ಸೇರಿದ ಪದ್ಧತಿಯಾಗಿತ್ತು. 7ಅಲ್ಲಿ ಬರಬ್ಬನೆಂಬುವನೊಬ್ಬನಿದ್ದನು; ಇವನನ್ನು ದಂಗೆಯಲ್ಲಿ ಕೊಲೆ ಮಾಡಿದ ದಂಗೆಗಾರರೊಂದಿಗೆ ಬಂಧಿಸಿದ್ದರು. 8ಜನರು ಪಿಲಾತನ ಬಳಿಗೆ ಹೋಗಿ, ನೀನು ನಮಗೆ ಮಾಡುತ್ತಾ ಬಂದ ಪದ್ಧತಿಯ ಪ್ರಕಾರ ಮಾಡು ಎಂದು ಕೇಳಿಕೊಳ್ಳುತ್ತಿದ್ದರು. 9ಮುಖ್ಯಯಾಜಕರು ಅಸೂಯೆಯಿಂದ ಯೇಸುವನ್ನು ಒಪ್ಪಿಸಿಕೊಟ್ಟಿದ್ದಾರೆಂದು ಪಿಲಾತನು ಗ್ರಹಿಸಿಕೊಂಡು, “ನಾನು ಯೆಹೂದ್ಯರ ಅರಸನನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತಿರೋ?” ಎಂದು ಅವರನ್ನು ಕೇಳಿದನು. 11ಆದರೆ ಮುಖ್ಯಯಾಜಕರು, ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಬೇಡಿಕೊಳ್ಳಿರಿ ಎಂಬುದಾಗಿ ಜನರನ್ನು ಪ್ರೇರೇಪಿಸಿದರು. 12ಅದಕ್ಕೆ ಪಿಲಾತನು ತಿರುಗಿ ಅವರನ್ನು, “ಹಾಗಾದರೆ ನೀವು ಹೇಳುವ ಯೆಹೂದ್ಯರ ಅರಸನನ್ನು ನಾನೇನು ಮಾಡಲಿ?” ಎಂದು ಕೇಳಿದನು. 13ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಮತ್ತಷ್ಟು ಕೂಗಿಕೊಂಡರು. 14ಪಿಲಾತನು, “ಏಕೆ? ಇವನು ಏನು ಅಪರಾಧ ಮಾಡಿದ್ದಾನೆ?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಇನ್ನೂ ಹೆಚ್ಚಾಗಿ ಆರ್ಭಟಿಸಿ ಕೂಗಿಕೊಂಡರು. 15ಅದಕ್ಕೆ ಪಿಲಾತನು ಜನಸಮೂಹವನ್ನು ಮೆಚ್ಚಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ, ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 19 ಫೆಬ್ರವರಿ ಎಂದರೆ ನಾಗರಿಕ ಪಂಚಾಂಗದ 4 ಮಾರ್ಚ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು