ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 5 ಮಾರ್ಚ್
ಆರ್ಥೊಡಾಕ್ಸ್ ಪಂಚಾಂಗ · ಫೆಬ್ರವರಿ 20 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 5 ಮಾರ್ಚ್ 2027
ಶುಕ್ರವಾರ · ಮಾಂಸ ತ್ಯಾಗದ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
ಮಾಂಸ ತ್ಯಾಗದ ವಾರದ ಶುಕ್ರವಾರ
ಉಪವಾಸದ ದಿನ
ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
1ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ; 2ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲ ನಮ್ಮೊಂದಿಗಿರುವಂಥ ಸತ್ಯದ ನಿಮಿತ್ತ, ನಾನು ನಿಮ್ಮನ್ನು ಸತ್ಯವಾಗಿ ಪ್ರೀತಿಸುತ್ತೇನೆ. ನಾನು ಮಾತ್ರವಲ್ಲದೆ, ಸತ್ಯವನ್ನು ಪ್ರೀತಿಸುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ. 3ತಂದೆಯಾದ ದೇವರಿಂದಲೂ, ದೇವರ ಮಗನಾಗಿರುವ ಯೇಸು ಕ್ರಿಸ್ತನಿಂದಲೂ, ಕೃಪೆಯೂ, ಕರುಣೆಯೂ, ಶಾಂತಿಯೂ, ಸತ್ಯವೂ, ಪ್ರೀತಿಯೂ ಸದಾಕಾಲ ನಮ್ಮೊಂದಿಗಿರಲಿ. 4ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ, ನಿಮ್ಮ ಮಕ್ಕಳಲ್ಲಿ ಕೆಲವರು, ಸತ್ಯವಂತರಾಗಿ ನಡೆಯುವುದನ್ನು ಕಂಡು ನಾನು ಬಹಳ ಸಂತೋಷಪಟ್ಟೆನು. 5ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿಮಗೆ ಬರೆಯದೆ, ಮೊದಲಿನಿಂದಲೂ ನಮಗೆ ಇದ್ದ ಆಜ್ಞೆಯನ್ನು ನಿಮಗೆ ಬರೆಯುವವನಾಗಿ; ನಾವು ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರೋಣ ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ. 6ದೇವರ ಆಜ್ಞೆಗಳನ್ನು ಅನುಸರಿಸಿ, ವಿಧೇಯರಾಗಿ ನಡೆಯುವುದೇ ಪ್ರೀತಿಯಾಗಿದೆ. ಪ್ರೀತಿಯಲ್ಲಿ ನಡೆಯಬೇಕೆಂಬುದೇ, ನೀವು ಮೊದಲಿನಿಂದಲೂ ಕೇಳಿದ ಆಜ್ಞೆಯಾಗಿದೆ. 7ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ. 8ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ. 9ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ. 10ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ. 11ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ. 12ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ, ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆದು ತಿಳಿಸುವುದಕ್ಕೆ ನನಗೆ ಇಷ್ಟವಿಲ್ಲ. ಆದರೆ, ನಾನು ನಿಮ್ಮ ಬಳಿಗೆ ಬಂದು, ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. ಆಗ, ನಿಮ್ಮ ಸಂತೋಷವು ಪರಿಪೂರ್ಣವಾಗುವುದು. 13ದೇವರು ಆರಿಸಿಕೊಂಡವರಾದ, ನಿಮ್ಮ ಸಹೋದರಿಯ ಮಕ್ಕಳು ನಿಮಗೆ ವಂದನೆ ಹೇಳುತ್ತಾರೆ.
ಸುವಾರ್ತೆ
22ಬಳಿಕ ಆತನನ್ನು ‘ಗೊಲ್ಗೊಥಾ’ ಎಂಬ ಸ್ಥಳಕ್ಕೆ ಕರೆದುಕೊಂಡು ಬಂದರು. ‘ಗೊಲ್ಗೊಥಾ’ ಅಂದರೆ “ತಲೆಬುರುಡೆಗಳು ಇರುವ ಸ್ಥಳ” ಎಂದರ್ಥ. 25ಆತನನ್ನು ಶಿಲುಬೆಗೆ ಹಾಕುವಾಗ ಬೆಳಿಗ್ಗೆ ಒಂಭತ್ತು ಗಂಟೆಯಾಗಿತ್ತು. 33ಹನ್ನೆರಡು ಗಂಟೆಯಿಂದ ಮೂರು ಗಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. 34ಮೂರು ಗಂಟೆಗೆ ಯೇಸು, “ಎಲೋಹಿ, ಎಲೋಹಿ, ಲಮಾಸಬಕ್ತಾನೀ?” ಅಂದರೆ “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದನು. 35ಹತ್ತಿರ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ನೋಡಿರಿ, ಆತನು ಎಲೀಯನನ್ನು ಕರೆಯುತ್ತಾನೆ” ಅಂದರು. 36ಆಗ ಒಬ್ಬನು ಓಡಿಹೋಗಿ ಸ್ಪಂಜಿನಿಂದ ಹುಳಿ ದ್ರಾಕ್ಷಾರಸವನ್ನು ತುಂಬಿ ಕೋಲಿನ ತುದಿಗೆ ಸಿಕ್ಕಿಸಿ, “ಇವನನ್ನು ಶಿಲುಬೆಯಿಂದ ಬಿಡುಗಡೆ ಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ಏನೋ ಕಾದು ನೋಡೋಣ” ಎಂದು ಹೇಳಿ ಅದನ್ನು ಕುಡಿಯುವುದಕ್ಕೆ ಆತನಿಗೆ ಕೊಟ್ಟನು. 37ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣ ಬಿಟ್ಟನು. 38ಆಗ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು. 39ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರಿಗೆ ನಿಂತು ನೋಡುತ್ತಿದ್ದ ಶತಾಧಿಪತಿಯು, “ನಿಜವಾಗಿ ಈ ಮನುಷ್ಯನು ದೇವಕುಮಾರನೇ” ಅಂದನು. 40ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆಮಾಡುತ್ತಿದ್ದವರಾದ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯನ ತಾಯಿಯಾದ ಮರಿಯಳು, ಸಲೋಮೆ ಎಂಬುವರು ಹಾಗೂ ಆತನ ಸಂಗಡ ಯೆರೂಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಇದ್ದರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 20 ಫೆಬ್ರವರಿ ಎಂದರೆ ನಾಗರಿಕ ಪಂಚಾಂಗದ 5 ಮಾರ್ಚ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು