Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 6 ಮಾರ್ಚ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 6 ಮಾರ್ಚ್ 2027

ಶನಿವಾರ · ತಪಸ್ಸು ಕಾಲದ ಮೂರನೆಯ ವಾರ

ಹಬ್ಬಗಳು ಮತ್ತು ಸಂತರು

ತಪಸ್ಸು ಕಾಲದ ಮೂರನೆಯ ವಾರದ ಶನಿವಾರ

ವಾರದ ದಿನ · ಆರಾಧನಾ ಬಣ್ಣ: ನೇರಳೆ

ದಿನದ ವಾಚನಗಳು

ಮೊದಲನೆಯ ವಾಚನ

ಹೋಶೇ 6:1–6

1ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು. 2ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು. 3ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು. 4ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ. 5ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ, ನನ್ನ ಬಾಯಿಯ ಮಾತುಗಳಿಂದ ಸಂಹರಿಸಿದ್ದೇನೆ; ನನ್ನ ನ್ಯಾಯದಂಡನೆಯು ಮಿಂಚಿನಂತೆ ಹೊರಡುವುದು. 6ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.

ಪ್ರತಿವಚನ ಕೀರ್ತನೆ

ಕೀರ್ತ 51:1–2, 16–19

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಬತ್ಷೆಬಳ ಬಳಿಗೆ ಹೋದ ಮೇಲೆ ಪ್ರವಾದಿಯಾದ ನಾತಾನನು ಎಚ್ಚರಿಸಿದಾಗ ರಚಿಸಿದ ಕೀರ್ತನೆ. ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು. 2ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು. 16ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸುತ್ತಿದ್ದೆನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ. 17ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ. 18ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು. 19ಆಗ ಜನರು ನ್ಯಾಯವಾದ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿ, ದೇವರೇ ನಿನಗೆ ಸಂತೋಷವನ್ನು ಉಂಟುಮಾಡುವರು. ನಿನ್ನ ಯಜ್ಞವೇದಿಯ ಮೇಲೆ ಹೋರಿಗಳನ್ನು ಸಮರ್ಪಿಸುವರು.

ಸುವಾರ್ತೆ

ಲೂಕ 18:9–14

9ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು. 10ಅದೇನೆಂದರೆ, “ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು. ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕದವನು. 11ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ. 12ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು. 13ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು. 14ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು