ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 6 ಮಾರ್ಚ್
ಆರ್ಥೊಡಾಕ್ಸ್ ಪಂಚಾಂಗ · ಫೆಬ್ರವರಿ 21 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 6 ಮಾರ್ಚ್ 2027
ಶನಿವಾರ · ಮಾಂಸ ತ್ಯಾಗದ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
ಮಾಂಸ ತ್ಯಾಗದ ವಾರದ ಶನಿವಾರ
ಮೃತರ ಸ್ಮರಣೆಯ ಶನಿವಾರ
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ (ಮೃತರು)
13ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ. 14ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ. 15ನಾವು ಕರ್ತನ ಮಾತಿನ ಆಧಾರದ ಮೇಲೆ ನಿಮಗೆ ಹೇಳುವುದೇನಂದರೆ, ಕರ್ತನು ಪುನರಾಗಮಿಸುವವರೆಗೆ ಜೀವದಿಂದುಳಿದಿರುವ ನಾವು ಮರಣ ಹೊಂದಿದವರಿಗಿಂತ ಮುಂದಾಗುವುದಿಲ್ಲ. 16ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು. 17ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.
ಪತ್ರಿಕೆ
23“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ. 24ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೇ ಪರಹಿತವನ್ನು ಚಿಂತಿಸಲಿ. 25ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ. 26“ಭೂಮಿಯು ಅದರಲ್ಲಿರುವ ಸಮಸ್ತವೂ ಕರ್ತನದಲ್ಲವೇ.” 27ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ. 28ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು” ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ.
ಸುವಾರ್ತೆ (ಮೃತರು)
24ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ. 25ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು. 26ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ. 27ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ. 28ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗ ಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ, 29ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು. 30“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.
ಸುವಾರ್ತೆ
8ಯೇಸು ಹೇಳಿದ್ದೇನಂದರೆ, “ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ. 9ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ” ಅಂದನು. 25“ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು. 26ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು. 27ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು. 33ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ. 34“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು. 35ಆ ದಿನವು ಭೂನಿವಾಸಿಗಳೆಲ್ಲರ ಮೇಲೆ ಬರುವುದು. 36ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 21 ಫೆಬ್ರವರಿ ಎಂದರೆ ನಾಗರಿಕ ಪಂಚಾಂಗದ 6 ಮಾರ್ಚ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು