ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 7 ಮಾರ್ಚ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 7 ಮಾರ್ಚ್ 2027
ಭಾನುವಾರ · ತಪಸ್ಸು ಕಾಲದ ನಾಲ್ಕನೆಯ ವಾರ
ಹಬ್ಬಗಳು ಮತ್ತು ಸಂತರು
ತಪಸ್ಸು ಕಾಲದ ನಾಲ್ಕನೆಯ ಭಾನುವಾರ
ಭಾನುವಾರ · ಆರಾಧನಾ ಬಣ್ಣ: ಗುಲಾಬಿ
ದಿನದ ವಾಚನಗಳು
ಮೊದಲನೆಯ ವಾಚನ
14ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು. 15ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು. 16ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ. 19ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು. 20ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು. 21ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು. 22ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, 23ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು.
ಪ್ರತಿವಚನ ಕೀರ್ತನೆ
1ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು, ಚೀಯೋನನ್ನು ನೆನಪುಮಾಡಿಕೊಂಡು ಅತ್ತೆವು. 2ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗುಹಾಕಿದೆವು. 3ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ, “ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ” ಎಂದು ಹೇಳುತ್ತಿದ್ದರು. 4ನಾವು ಪರದೇಶದಲ್ಲಿ ಯೆಹೋವನ ಗೀತೆಗಳನ್ನು ಹಾಡುವುದು ಹೇಗೆ? 5ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈಯು ತನ್ನ ಕೌಶಲ್ಯವನ್ನು ಮರೆತು ಹೋಗಲಿ. 6ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ, ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ.
ಎರಡನೆಯ ವಾಚನ
4ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ, 5ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. 6ಆತನು ಕ್ರಿಸ್ತ ಯೇಸುವಿನಲ್ಲಿ ನಮ್ಮೊಂದಿಗಿರುವ ದಯೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು 7ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ. 8ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. 9ಈ ರಕ್ಷಣೆಯೂ ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ, ಆದ್ದರಿಂದ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ. 10ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.
ಸುವಾರ್ತೆ
14ಇದಲ್ಲದೆ ಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು. 15ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು. 16“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು. 17ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ. 18ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ. 19ಆ ತೀರ್ಪು ಏನೆಂದರೆ ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು. 20ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ. 21ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.”
ಇಂದಿನ ಸಂತರು
- ಸಂತರಾದ ಪೆರ್ಪೆತುವಾ ಮತ್ತು ಫೆಲಿಸಿಟಿ, ಹುತಾತ್ಮರು
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು