Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 7 ಮಾರ್ಚ್

ಆರ್ಥೊಡಾಕ್ಸ್ ಪಂಚಾಂಗ · ಫೆಬ್ರವರಿ 22 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 7 ಮಾರ್ಚ್ 2027

ಭಾನುವಾರ · ಸ್ವರ 7

ಹಬ್ಬಗಳು ಮತ್ತು ಸಂತರು

ಮಾಂಸ ತ್ಯಾಗದ ಭಾನುವಾರ

ಕಡೆಯ ನ್ಯಾಯತೀರ್ಪಿನ ಭಾನುವಾರ

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಉದಯಕಾಲದ ಏಳನೆಯ ಸುವಾರ್ತೆ

ಯೋಹಾ 20:1–10

1ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ಉರುಳಿ ಹೋಗಿರುವುದನ್ನು ಕಂಡಳು. 2ಆಗ ಆಕೆಯು ಸೀಮೋನ್ ಪೇತ್ರನ ಬಳಿಗೂ ಮತ್ತು ಯೇಸುವಿಗೆ ಪ್ರಿಯನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು” ಹೇಳಿದಳು 3ಆಗ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಹೊರಟು ಸಮಾಧಿಯ ಕಡೆಗೆ ಹೋದರು. 4ಅವರಿಬ್ಬರೂ ಜೊತೆಯಾಗಿ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ವೇಗವಾಗಿ ಓಡಿ ಮೊದಲೇ ಸಮಾಧಿಗೆ ಬಂದನು. 5ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಹೋಗಲಿಲ್ಲ. 6ಸೀಮೋನ್ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ, ಆ ನಾರುಬಟ್ಟೆಗಳು ಬಿದ್ದಿರುವುದನ್ನೂ 7ಆತನ ತಲೆಯ ಮೇಲಿದ್ದ ಕೈವಸ್ತ್ರವು, ಆ ನಾರು ಬಟ್ಟೆಗಳೊಂದಿಗೆ ಇರದೇ, ಸುತ್ತಿ ಒಂದು ಕಡೆಯಲ್ಲಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ನೋಡಿದನು. 8ಆಗ ಸಮಾಧಿಯ ಬಳಿಗೆ ಮೊದಲು ಬಂದಿದ್ದ ಆ ಮತ್ತೊಬ್ಬ ಶಿಷ್ಯನು ಸಹ ಒಳಗೆ ಹೋಗಿ ಬಗ್ಗಿ ನೋಡಿ ನಂಬಿದನು. 9ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬುದಾಗಿ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ. 10ತರುವಾಯ ಆ ಶಿಷ್ಯರು ಪುನಃ ತಮ್ಮ ಮನೆಗೆ ಹೋದರು.

ಪತ್ರಿಕೆ

1 ಕೊರಿ 8:8–9:2

8ಆದರೆ ನಾವು ತಿನ್ನುವ ಆಹಾರವು ದೇವರನ್ನು ಮೆಚ್ಚಿಸುವುದಿಲ್ಲ. ತಿನ್ನದಿರುವುದರಿಂದ ನಷ್ಟವೂ ಇಲ್ಲ, ತಿನ್ನುವುದರಿಂದ ಲಾಭವೂ ಇಲ್ಲ. 9ಆದರೆ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲಹೀನನಾದವನಿಗೆ ಅಡ್ಡಿಯಾಗದಂತೆ ಎಚ್ಚರವಾಗಿರಿ. 10ಜ್ಞಾನಿಯಾದ ನೀನೇ ವಿಗ್ರಹಾಲಯದಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲವಾದ ಮನಸ್ಸಾಕ್ಷಿಯುಳ್ಳ ಸಹೋದರನು ಕಂಡರೆ ಅವನೂ ಕೂಡ ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದಕ್ಕೆ ಧೈರ್ಯಗೊಂಡನಲ್ಲವೇ. 11ಹೀಗೆ ಈ ನಿನ್ನ ಜ್ಞಾನದಿಂದ ಆ ಬಲಹೀನ ಸಹೋದರನು ನಾಶವಾಗುತ್ತಾನೆ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣ ಕೊಟ್ಟನಲ್ಲವೇ. 12ಹೀಗಿರಲಾಗಿ ನೀವು ಸಹೋದರರ ವಿರುದ್ಧ ಪಾಪ ಮಾಡಿ ಅವರ ದುರ್ಬಲವಾದ ಮನಸ್ಸಾಕ್ಷಿಯನ್ನು ನೋಯಿಸಿದರೆ ನೀವು ಕ್ರಿಸ್ತನ ವಿರುದ್ಧ ಪಾಪಮಾಡುವವರಾಗುತ್ತೀರಿ. 13ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ. 9:1ನಾನು ಸ್ವತಂತ್ರನಲ್ಲವೋ? ನಾನು ಅಪೊಸ್ತಲನಲ್ಲವೋ? ನಮ್ಮ ಕರ್ತನಾದ ಯೇಸುವನ್ನು ನಾನು ಕಂಡವನಲ್ಲವೇ? ನಾನು ಕರ್ತನಲ್ಲಿ ಮಾಡಿದ ಸೇವೆಯ ಪ್ರತಿಫಲವು ನೀವೇ ಅಲ್ಲವೇ? 2ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗಾದರೋ ಅಪೊಸ್ತಲನಾಗಿದ್ದೇನೆ. ನಾನು ಕರ್ತನ ಅಪೊಸ್ತಲನಾಗಿದ್ದೇನೆಂಬುದಕ್ಕೆ ನೀವೇ ನನ್ನ ಮುದ್ರೆಯಾಗಿದ್ದಿರಿ.

ಸುವಾರ್ತೆ

ಮತ್ತಾ 25:31–46

31“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು; 32ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು. 33ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು. 34ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ. 35ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ; 36ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು. 37ಅದಕ್ಕೆ ಉತ್ತರವಾಗಿ ನೀತಿವಂತರು, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು? 38ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು? 39ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು’ ಎಂದು ಕೇಳುವರು. 40ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು. 41ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ. 42ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ. 43ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು. 44ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು. 45ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು. 46ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 22 ಫೆಬ್ರವರಿ ಎಂದರೆ ನಾಗರಿಕ ಪಂಚಾಂಗದ 7 ಮಾರ್ಚ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು