Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 8 ಮಾರ್ಚ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 8 ಮಾರ್ಚ್ 2027

ಸೋಮವಾರ · ತಪಸ್ಸು ಕಾಲದ ನಾಲ್ಕನೆಯ ವಾರ

ಹಬ್ಬಗಳು ಮತ್ತು ಸಂತರು

ತಪಸ್ಸು ಕಾಲದ ನಾಲ್ಕನೆಯ ವಾರದ ಸೋಮವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ನೇರಳೆ

ದೇವರ ಸಂತ ಜಾನ್, ಸನ್ಯಾಸಿ · ಸ್ಮರಣೋಲ್ಲೇಖ

ದಿನದ ವಾಚನಗಳು

ಮೊದಲನೆಯ ವಾಚನ

ಯೆಶಾ 65:17–21

17“ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು. 18ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ; ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ, ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು. 19ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರಲ್ಲಿ ಹರ್ಷಗೊಳ್ಳುವೆನು. ರೋದನ ಶಬ್ದವೂ, ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು. 20ಕೆಲವು ದಿನ ಮಾತ್ರ ಬದುಕತಕ್ಕ ಕೂಸಾಗಲಿ, ವೃದ್ಧನಾಗಲಿ ಅಲ್ಲಿ ಇರುವುದಿಲ್ಲ; ಯುವಕನು ನೂರು ವರ್ಷದೊಳಗೆ ಸಾಯನು, ಪಾಪಿಷ್ಠನಿಗೂ ನೂರು ವರ್ಷದೊಳಗೆ ಶಾಪ ತಗಲದು. 21ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ದ್ರಾಕ್ಷಿಯ ತೋಟಗಳ ಫಲವನ್ನು ತಾವೇ ಅನುಭವಿಸುವರು.

ಪ್ರತಿವಚನ ಕೀರ್ತನೆ

ಕೀರ್ತ 30:1, 3–5, 10–12

1ದಾವೀದನ ಕೀರ್ತನೆ, ದೇವಾಲಯದ ಪ್ರತಿಷ್ಠೆಯಲ್ಲಿ ಹಾಡತಕ್ಕದ್ದು. ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ, ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು. 3ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ. 4ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ. 5ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, ಮುಂಜಾನೆ ಹರ್ಷಧ್ವನಿಯು ಕೇಳಿಸುವುದು. 10ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು; ಯೆಹೋವನೇ, ನನ್ನ ಸಹಾಯಕ್ಕೆ ಬಾ” ಎಂದು ಹೇಳಿದೆನು. 11ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ. 12ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.

ಸುವಾರ್ತೆ

ಯೋಹಾ 4:43–54

43ಎರಡು ದಿನಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು. 44ಏಕೆಂದರೆ ಪ್ರವಾದಿಗೆ ಸ್ವಂತದೇಶದಲ್ಲಿ ಗೌರವವಿಲ್ಲವೆಂದು ಯೇಸು ತಾನೇ ಹೇಳಿದ್ದನು. 45ಆತನು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಆತನನ್ನು ಸ್ವಾಗತಿಸಿದರು. ಯೆರೂಸಲೇಮಿನ ಪಸ್ಕಹಬ್ಬದ ಸಮಯದಲ್ಲಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ಅವರು ನೋಡಿದ್ದರು, ಏಕೆಂದರೆ, ಅವರೂ ಹಬ್ಬಕ್ಕೆ ಹೋಗಿದ್ದರು. 46ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು. 47ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿದುದ್ದರಿಂದ ಯೇಸುವಿನ ಬಳಿಗೆ ಹೋಗಿ, “ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು” ಎಂದು ಬೇಡಿಕೊಂಡನು. 48ಯೇಸು ಅವನಿಗೆ “ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ” ಎಂದು ಹೇಳಿದನು. 49ಆ ಅರಮನೆಯ ಅಧಿಕಾರಿಯು “ಆಯ್ಯಾ, ನನ್ನ ಮಗನು ಸಾಯುವುದಕ್ಕೆ ಮುಂಚೆ ನೀನು ಬರಬೇಕು” ಅನ್ನಲು 50ಯೇಸು ಅವನಿಗೆ “ಹೋಗು ನಿನ್ನ ಮಗನು ಬದುಕುತ್ತಾನೆ” ಎಂದು ಹೇಳಿದನು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟು ಹೋದನು. 51ಅವನು ಇನ್ನೂ ಘಟ್ಟಾ ಇಳಿದು ಹೋಗುತ್ತಿರುವಾಗಲೇ ಅವನ ಆಳುಗಳು ಅವನೆದುರಿಗೆ ಬಂದು ಅವನ ಮಗನು ಬದುಕಿರುವುದಾಗಿ ಅವನಿಗೆ ಹೇಳಿದರು. 52ಅವನು ಎಷ್ಟು ಘಂಟೆಯಲ್ಲಿ ಚೇತರಿಸಿಕೊಂಡನು ಎಂದು ಅವರನ್ನು ಕೇಳಿದಾಗ ಅವರು, “ನಿನ್ನೆ ಮಧ್ಯಾಹ್ನ ಒಂದು ಘಂಟೆಗೆ ಜ್ವರವು ಅವನನ್ನು ಬಿಟ್ಟಿತು” ಎಂದರು. 53ಆಗ “ನಿನ್ನ ಮಗನು ಬದುಕುತ್ತಾನೆ” ಎಂದು ಯೇಸು ತನಗೆ ಹೇಳಿದ ತಾಸಿನಲ್ಲಿಯೇ ಅದು ಸಂಭವಿಸಿತೆಂದು ಆ ತಂದೆಯು ತಿಳಿದುಕೊಂಡದ್ದರಿಂದ ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು. 54ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು