ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 9 ಮಾರ್ಚ್
ಆರ್ಥೊಡಾಕ್ಸ್ ಪಂಚಾಂಗ · ಫೆಬ್ರವರಿ 24 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 9 ಮಾರ್ಚ್ 2027
ಮಂಗಳವಾರ · ಗಿಣ್ಣಿನ ವಾರ · ಸ್ವರ 7
ಹಬ್ಬಗಳು ಮತ್ತು ಸಂತರು
ಗಿಣ್ಣಿನ ವಾರದ ಮಂಗಳವಾರ
ಗಿಣ್ಣಿನ ವಾರ
ಮಾಂಸವಿಲ್ಲ; ಹಾಲಿನ ಪದಾರ್ಥ, ಮೊಟ್ಟೆ ಮತ್ತು ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಸಂಧ್ಯಾ ಪ್ರಾರ್ಥನೆ: ವಾಚನ (ಮುಂದೂತ)
ಈ ಅನುವಾದದಲ್ಲಿ ಇಲ್ಲ
ಉದಯಕಾಲದ ಪ್ರಾರ್ಥನೆ: ಸುವಾರ್ತೆ (ಮುಂದೂತ)
17ಈ ಸುದ್ದಿಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು. 18ಯೋಹಾನನ ಶಿಷ್ಯರು ನಡೆದ ಸಂಗತಿಗಳನ್ನೆಲ್ಲಾ ಆತನಿಗೆ ತಿಳಿಸಲು, 19ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವನು ನೀನೋ ಅಥವಾ ನಾವು ಬೇರೊಬ್ಬನಿಗಾಗಿ ಕಾಯಬೇಕೋ?” ಎಂದು ಕರ್ತನನ್ನು ಕೇಳಲು ಹೇಳಿಕಳುಹಿಸಿದನು. 20ಅವರು ಯೇಸುವಿನ ಬಳಿಗೆ ಬಂದು, “‘ಬರಬೇಕಾದವನು ನೀನೋ ಅಥವಾ ನಾವು ಮತ್ತೊಬ್ಬನ ಬರುವಿಕೆಗಾಗಿ ಕಾಯಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕನಾದ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಅಂದರು. 21ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಕಾಯಿಲೆ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು. 22ಹೀಗಿರಲು ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ. 23ನನ್ನ ವಿಷಯದಲ್ಲಿ ಸಂಶಯಪಡದವನೇ ಧನ್ಯನು” ಎಂದು ಹೇಳಿದನು. 24ಯೋಹಾನನ ಶಿಷ್ಯರು ಹಿಂತಿರುಗಿ ಹೋಗಲು ಆತನು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ಏನು ನೋಡಬೇಕೆಂದು ಮರುಭೂಮಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? 25ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿ ಭೋಗದಲ್ಲಿ ಬಾಳುವವರು ಅರಮನೆಗಳಲ್ಲಿ ಇರುತ್ತಾರಷ್ಟೆ. 26ಹಾಗಾದರೆ ನೀವು ಏನು ನೋಡಬೇಕೆಂದು ಹೋಗಿದ್ದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದಿರಿ ಎಂದು ನಿಮಗೆ ಹೇಳುತ್ತೇನೆ. 27‘ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಮಾಡುವನು,’ ಎಂದು ಯಾರ ವಿಷಯವಾಗಿ ಬರೆದದೆಯೋ, ಆ ಪುರುಷನು ಅವನೇ. 28ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಯೋಹಾನನಿಗಿಂತ ಮಹಾಪುರುಷನು ಒಬ್ಬನೂ ಹುಟ್ಟಿಲ್ಲ, ಅದರೂ ದೇವರ ರಾಜ್ಯದಲ್ಲಿ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು” ನಿಮಗೆ ಹೇಳುತ್ತೇನೆ. 29ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡ ಜನರೆಲ್ಲರೂ, ಸುಂಕದವರೂ ಸಹ ಆತನ ಉಪದೇಶವನ್ನು ಕೇಳಿದಾಗ, ದೇವರು ನೀತಿವಂತನೆಂದು ಒಪ್ಪಿಕೊಂಡರು. 30ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.
ಪತ್ರಿಕೆ
1ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ, 2ನಿಮಗೆ ಕರುಣೆಯೂ, ಶಾಂತಿಯೂ, ಪ್ರೀತಿಯೂ ಹೆಚ್ಚಾಗಿ ದೊರೆಯಲಿ. 3ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು. 4ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ. 5ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು. 6ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ. 7ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ. 8ಹೀಗಿದ್ದರೂ ಈ ಜನರು ಅದೇ ರೀತಿಯಾಗಿ ಸ್ವಪ್ನಾವಸ್ಥೆಯಲ್ಲಿರುವವರಂತೆ ತಮ್ಮ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ. ಮಹಾ ಪದವಿಯವರನ್ನು ದೂಷಿಸುತ್ತಾರೆ. 9ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, “ಕರ್ತನು ನಿನ್ನನ್ನು ಗದರಿಸಲಿ” ಎಂದನು. 10ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
ಪತ್ರಿಕೆ (ಮುಂದೂತ)
6ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು. 7ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ. 8ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ. 9ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ. 10ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ. 11ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ. 12ಹೀಗೆ ನಮ್ಮಲ್ಲಿ ಮರಣವು ನಿಮ್ಮಲ್ಲಿ ಜೀವವು ವ್ಯಾಪಿಸುತ್ತಿದೆ. 13“ನಾನು ನಂಬಿದೆನು. ಆದ್ದರಿಂದ ಮಾತನಾಡಿದೆನು.” ಎಂಬ ಶಾಸ್ತ್ರೋಕ್ತಿಯಲ್ಲಿ ಕಾಣುವಹಾಗೆ ನಂಬಿಕೆಯ ಅದೇ ಆತ್ಮನು ನಮ್ಮಲ್ಲಿರುವುದರಿಂದ ನಾವು ನಂಬಿದವರಾಗಿ ಮಾತನಾಡುತ್ತೇವೆ. 14ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ. 15ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹು ಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವುದರಿಂದ ದೇವರ ಮಹಿಮೆಗೆ ಅಧಿಕವಾದ ಸ್ತುತಿ ಸ್ತೋತ್ರಗಳು ಉಂಟಾಗುವುದು.
ಸುವಾರ್ತೆ
39ತರುವಾಯ ಆತನು ಪ್ರತಿದಿನದಂತೆ ಹೊರಟು ಎಣ್ಣೆಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು. 40ಆತನು ಆ ಕ್ಲುಪ್ತ ಸ್ಥಳಕ್ಕೆ ಬಂದಾಗ ಅವರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು. 41ಆ ಮೇಲೆ ಆತನು ಅವರನ್ನು ಬಿಟ್ಟು ಕಲ್ಲೆಸೆತದಷ್ಟು ದೂರ ಹೋಗಿ, ಮೊಣಕಾಲೂರಿ, 42“ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು. ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ” ಪ್ರಾರ್ಥಿಸಿದನು. 45ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು, ಅವರು ದುಃಖದಿಂದ ಬಳಲಿಹೋದವರಾಗಿ ನಿದ್ರೆಹತ್ತಿರುವುದನ್ನು ಕಂಡು, 46ಅವರಿಗೆ, “ನೀವು ನಿದ್ರೆಮಾಡುವುದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು. 47ಆತನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನೆಂಬುವನು ಆ ಜನರ ಗುಂಪಿನ ಮುಂದೆ ನಡೆಯುತ್ತಾ, ಯೇಸುವಿಗೆ ಮುದ್ದಿಡುವುದಕ್ಕಾಗಿ ಆತನ ಬಳಿಗೆ ಬರಲು, 48ಯೇಸು ಅವನಿಗೆ, “ಯೂದನೇ, ಮುದ್ದಿಟ್ಟು ಮನುಷ್ಯಕುಮಾರನನ್ನು ಹಿಡಿದುಕೊಡುತ್ತೀಯಾ?” ಎಂದು ಕೇಳಿದನು. 49ಆತನ ಸುತ್ತಲಿದ್ದವರು ಘಟನೆಯ ಸೂಕ್ಷ್ಮತೆಯನ್ನು ತಿಳಿದು ತಕ್ಷಣ, “ಕರ್ತನೇ, ನಾವು ಕತ್ತಿಯಿಂದ ಹೊಡೆಯೋಣವೋ?” ಎಂದು ಕೇಳಿದರು. 50ಅಷ್ಟರಲ್ಲಿ ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಕತ್ತಿಯಿಂದ ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿ ಹಾಕಿದನು. 51ಆದರೆ ಯೇಸು, “ಇಷ್ಟಕ್ಕೇ ಬಿಡಿರಿ” ಎಂದು ಹೇಳಿ ಆ ಆಳಿನ ಕಿವಿಯನ್ನು ಮುಟ್ಟಿ ವಾಸಿಮಾಡಿದನು. 52ಬಳಿಕ ಯೇಸು ತನ್ನನ್ನು ಹಿಡಿಯುವುದಕ್ಕೆ ಬಂದ ಮುಖ್ಯಯಾಜಕರಿಗೂ, ದೇವಾಲಯದ ಕಾವಲಿನ ದಳವಾಯಿಗಳಿಗೂ, ಸಭೆಯ ಹಿರಿಯರಿಗೂ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರುವಿರಾ? 53ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ. ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ” ಎಂದು ಹೇಳಿದನು. 54ಅವರು ಆತನನ್ನು ಹಿಡಿದು ಮಹಾಯಾಜಕನ ಮನೆಯೊಳಕ್ಕೆ ಕರೆದುಕೊಂಡು ಹೋದರು. ಪೇತ್ರನು ದೂರದಿಂದ ಅವರನ್ನು ಹಿಂಬಾಲಿಸುತ್ತಿದ್ದನು. 55ಅಂಗಳದ ನಡುವೆ ಅವರು ಬೆಂಕಿ ಹೊತ್ತಿಸಿ ಒಟ್ಟಾಗಿ ಕುಳಿತುಕೊಂಡಿರಲು ಅವರ ನಡುವೆ ಪೇತ್ರನೂ ಕುಳಿತುಕೊಂಡನು. 56ಅವನು ಬೆಳಕಿಗೆ ಮುಖವಾಗಿ ಕುಳಿತಿರುವಾಗ ಒಬ್ಬ ದಾಸಿಯು ಅವನನ್ನು ಕಂಡು, ಅವನನ್ನು ದೃಷ್ಟಿಸಿ ನೋಡಿ, “ಇವನು ಸಹ ಅವನ ಸಂಗಡ ಇದ್ದವನು” ಅಂದಳು. 57ಆದರೆ ಅವನು, “ನಾನು ಅವನನ್ನು ಅರಿಯೆನಮ್ಮಾ” ಎಂದು ಹೇಳಿದನು. 58ಸ್ವಲ್ಪಹೊತ್ತಿನ ಮೇಲೆ ಮತ್ತೊಬ್ಬನು ಬಂದು ಅವನನ್ನು ಕಂಡು, “ನೀನೂ ಸಹ ಅವರಲ್ಲಿ ಒಬ್ಬನು” ಅನ್ನಲು ಪೇತ್ರನು, “ನಾನಲ್ಲಪ್ಪಾ” ಅಂದನು. 59ಹೆಚ್ಚು ಕಡಿಮೆ ಒಂದು ಘಂಟೆ ಹೊತ್ತಿನ ಮೇಲೆ ಇನ್ನೊಬ್ಬನು, “ನಿಶ್ಚಯವಾಗಿ ಇವನು ಸಹ ಅವನ ಸಂಗಡ ಇದ್ದವನು, ಇವನು ಗಲಿಲಾಯದವನಷ್ಟೆ” ಎಂದು ದೃಢವಾಗಿ ಹೇಳಿದನು. 60ಆದರೆ ಪೇತ್ರನು, “ನೀನು ಹೇಳುವುದೇನೋ ನಾನರಿಯೆನಪ್ಪಾ” ಅಂದನು. ಅವನು ಈ ಮಾತನ್ನು ಆಡುತ್ತಿರುವಾಗಲೇ ಕೋಳಿ ಕೂಗಿತು. 61ಕರ್ತನು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು, “ಈಹೊತ್ತು ಕೋಳಿ ಕೂಗುವುದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ” ಎಂದು ಕರ್ತನು ನುಡಿದ ಮಾತನ್ನು ನೆನಪಿಸಿಕೊಂಡು, 62ಹೊರಗೆ ಹೋಗಿ ತುಂಬಾ ವ್ಯಥೆಪಟ್ಟು ಅತ್ತನು. 63ಆ ಮೇಲೆ ಯೇಸುವನ್ನು ಹಿಡಿದವರು ಆತನನ್ನು ಪರಿಹಾಸ್ಯಮಾಡುತ್ತಾ, ಆತನಿಗೆ ಮುಸುಕುಹಾಕಿ ಹೊಡೆದು, “ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು” ಎಂದು ಆತನನ್ನು ಕೇಳಿದರು. 65ಆತನ ಕುರಿತು ಇನ್ನೂ ಅನೇಕ ದೂಷಣೆಯ ಮಾತುಗಳನ್ನಾಡಿದರು. 66ಬೆಳಗಾಗುವಾಗ ಯೆಹೂದ್ಯರ ಹಿರೀಸಭೆಯವರು, ಮುಖ್ಯಯಾಜಕರು ಮತ್ತು ಶಾಸ್ತ್ರಿಗಳು ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು, 67“ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಅಂದರು. ಆತನು ಅವರಿಗೆ, “ನಾನು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ. 68ನಾನು ನಿಮ್ಮನ್ನು ಏನಾದರೂ ಕೇಳಿದರೆ ನೀವು ಉತ್ತರಕೊಡುವುದಿಲ್ಲ. 69ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು” ಎಂದು ಹೇಳಿದನು. 70ಆಗ ಎಲ್ಲರು, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಲು ಆತನು ಅವರಿಗೆ, “ನನ್ನನ್ನು ಕುರಿತು ದೇವಕುಮಾರನೆಂದು ನೀವೇ ಹೇಳಿದ್ದೀರಿ” ಎಂದು ಹೇಳಿದನು. 71ಅದಕ್ಕೆ ಅವರು, “ನಮಗೆ ಸಾಕ್ಷಿ ಇನ್ನು ಯಾತಕ್ಕೆ ಬೇಕು? ನಾವೇ ಇವನ ಬಾಯಿಂದ ಕೇಳಿದೆವಲ್ಲಾ” ಅಂದರು. 23:1ಅಲ್ಲಿ ಕೂಡಿದ್ದವರೆಲ್ಲರೂ ಎದ್ದು ಆತನನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋಗಿ,
ಸುವಾರ್ತೆ (ಮುಂದೂತ)
2ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ, 3“ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು. 4ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಾಣುವವುಗಳನ್ನು ಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ; 5ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ. 6ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು” ಎಂದು ಹೇಳಿದನು. 7ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? 8ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ. 9ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವುದಕ್ಕೋ? ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದೀರಿ ಎಂದು ನಿಮಗೆ ಹೇಳುತ್ತೇನೆ. 10‘ಇಗೋ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವೆನು. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಪಡಿಸುವನು’ ಎಂದು ಯಾರ ವಿಷಯವಾಗಿ ಬರೆದದೆಯೋ ಆತನು ಇವನೇ. 11ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 12ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ. 13ಎಲ್ಲಾ ಪ್ರವಾದಿಗಳೂ, ಧರ್ಮಶಾಸ್ತ್ರವು ಯೋಹಾನನ ತನಕ ಪ್ರವಾದಿಸಿದರು. 14ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ. 15ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 24 ಫೆಬ್ರವರಿ ಎಂದರೆ ನಾಗರಿಕ ಪಂಚಾಂಗದ 9 ಮಾರ್ಚ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು