Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 12 ಮಾರ್ಚ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 12 ಮಾರ್ಚ್ 2027

ಶುಕ್ರವಾರ · ತಪಸ್ಸು ಕಾಲದ ನಾಲ್ಕನೆಯ ವಾರ

ಹಬ್ಬಗಳು ಮತ್ತು ಸಂತರು

ತಪಸ್ಸು ಕಾಲದ ನಾಲ್ಕನೆಯ ವಾರದ ಶುಕ್ರವಾರ

ವಾರದ ದಿನ · ಆರಾಧನಾ ಬಣ್ಣ: ನೇರಳೆ

ಉಪವಾಸ ಮತ್ತು ಪ್ರಾಯಶ್ಚಿತ್ತ

ಮಾಂಸ ವರ್ಜನೆ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

ಈ ಅನುವಾದದಲ್ಲಿ ಇಲ್ಲ

ಪ್ರತಿವಚನ ಕೀರ್ತನೆ

ಕೀರ್ತ 34:16–20, 22

16ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು. 17ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ. 18ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ. 19ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ. 20ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ. 22ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ. ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ.

ಸುವಾರ್ತೆ

ಯೋಹಾ 7:1–2, 10, 25–30

1ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರ ಮಾಡಿದನು. ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದುದ್ದರಿಂದ ಆತನಿಗೆ ಯೂದಾಯದಲ್ಲಿ ಸಂಚರಿಸಲು ಮನಸ್ಸಾಗಲಿಲ್ಲ. 2ಆಗ ಯೆಹೂದ್ಯರ ಗುಡಾರಗಳ ಹಬ್ಬವು ಸಮೀಪವಾಗಿತ್ತು, 10ಆದರೆ ಆತನ ಸಹೋದರರು ಹೋದ ಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ, ರಹಸ್ಯವಾಗಿ ಹೋದನು. 25ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು “ಅವರು ಕೊಲ್ಲಬೇಕೆಂದು ಹುಡುಕುವುದು ಈತನನ್ನೇ ಅಲ್ಲವೇ? 26ನೋಡಿರಿ, ಈತನು ಬಹಿರಂಗವಾಗಿ ಮಾತನಾಡುತ್ತಿದ್ದಾನೆ ಮತ್ತು ಅವರು ಆತನಿಗೆ ಏನೂ ಹೇಳುತ್ತಿಲ್ಲ. ಬಹುಶಃ ಈತನೇ ನಿಜವಾದ ಕ್ರಿಸ್ತನೆಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೋ? 27ಆದರೆ ಇವನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು, ಕ್ರಿಸ್ತನು ಬರುವಾಗ ಆತನು ಎಲ್ಲಿಂದ ಬಂದವನೆಂದು ಒಬ್ಬರಿಗೂ ತಿಳಿಯುವುದಿಲ್ಲವೆಂದು ಮಾತನಾಡಿಕೊಳ್ಳುತ್ತಿದ್ದರು.” 28ಯೇಸುವು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ, ಆದರೂ ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದಾತನು ಸತ್ಯವಂತನು. ನೀವು ಆತನನ್ನು ಅರಿತವರಲ್ಲ. 29ಆದರೆ ನಾನು ಆತನನ್ನು ಬಲ್ಲೆನು ಏಕೆಂದರೆ, ನಾನು ಆತನ ಕಡೆಯಿಂದ ಬಂದವನು ಮತ್ತು ಆತನೇ ನನ್ನನ್ನು ಕಳುಹಿಸಿದನು” ಎಂದು ಕೂಗಿ ಹೇಳಿದನು. 30ಇದಕ್ಕಾಗಿ ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು