Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 12 ಮಾರ್ಚ್

ಆರ್ಥೊಡಾಕ್ಸ್ ಪಂಚಾಂಗ · ಫೆಬ್ರವರಿ 27 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 12 ಮಾರ್ಚ್ 2027

ಶುಕ್ರವಾರ · ಗಿಣ್ಣಿನ ವಾರ · ಸ್ವರ 7

ಹಬ್ಬಗಳು ಮತ್ತು ಸಂತರು

ಗಿಣ್ಣಿನ ವಾರದ ಶುಕ್ರವಾರ

ಗಿಣ್ಣಿನ ವಾರ

ಮಾಂಸವಿಲ್ಲ; ಹಾಲಿನ ಪದಾರ್ಥ, ಮೊಟ್ಟೆ ಮತ್ತು ಮೀನಿಗೆ ಅನುಮತಿ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಆರನೆಯ ತಾಸು

ಜೆಕ 8:7–17

7ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮದಿಕ್ಕಿನ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು, 8ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.” 9ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ! 10ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ, ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿ ಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರೇಪಿಸುತ್ತಿದ್ದರು. 11ಇಂದಿನಿಂದಲೋ ಈ ಜನಶೇಷದವರ ವಿಷಯದಲ್ಲಿ ನಾನು ಪೂರ್ವಕಾಲದಲ್ಲಿ ಇದ್ದಂತೆ ಇರುವುದಿಲ್ಲ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. 12“ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು. 13ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಆಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!” 14ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನಗೆ ಸಿಟ್ಟೆಬ್ಬಿಸಿದಾಗ ನಿಮಗೆ ಕೇಡುಮಾಡಬೇಕೆಂದು ನಾನು ಕರುಣೆಯಿಲ್ಲದೆ ಸಂಕಲ್ಪಸಿದಂತೆ 15ಈ ಕಾಲದಲ್ಲಿಯೂ ಯೆರೂಸಲೇಮಿಗೂ, ಯೆಹೂದ ಕುಲಕ್ಕೂ ಮೇಲುಮಾಡಬೇಕೆಂದು ಹೊಸ ಸಂಕಲ್ಪ ಮಾಡಿಕೊಂಡಿದ್ದೇನೆ; ಹೆದರಬೇಡಿರಿ. ಇದು ಸೇನಾಧೀಶ್ವರನಾದ ಯೆಹೋವನ ನುಡಿ. 16“ನೀವು ಮಾಡಬೇಕಾದ ಕಾರ್ಯಗಳು ಇವೇ. ಪ್ರತಿಯೊಬ್ಬನೂ ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ, ಸಮಾಧಾನವಾದ ನ್ಯಾಯವನ್ನೂ ಸ್ಥಾಪಿಸಿರಿ; 17ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳು ಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ನಾನು ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.”

ಸಂಧ್ಯಾ ಪ್ರಾರ್ಥನೆ: ವಾಚನ

ಜೆಕ 8:19–23

19ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನು ಉಂಟುಮಾಡುವವು; ಹೀಗಿರಲು ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.’” 20ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು; 21ಒಂದು ಊರಿನವರು ಇನ್ನೊಂದು ಊರಿಗೆ ಹೋಗಿ, ‘ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ, ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ’ ಎಂದು ಹೇಳುವರು. 22ಹೀಗೆ ಬಹು ದೇಶಗಳವರೂ, ಬಲವಾದ ಜನಾಂಗಗಳವರೂ ಯೆರೂಸಲೇಮಿನಲ್ಲಿ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ ಬರುವರು.” 23ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 27 ಫೆಬ್ರವರಿ ಎಂದರೆ ನಾಗರಿಕ ಪಂಚಾಂಗದ 12 ಮಾರ್ಚ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು