ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 13 ಮಾರ್ಚ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 13 ಮಾರ್ಚ್ 2027
ಶನಿವಾರ · ತಪಸ್ಸು ಕಾಲದ ನಾಲ್ಕನೆಯ ವಾರ
ಹಬ್ಬಗಳು ಮತ್ತು ಸಂತರು
ತಪಸ್ಸು ಕಾಲದ ನಾಲ್ಕನೆಯ ವಾರದ ಶನಿವಾರ
ವಾರದ ದಿನ · ಆರಾಧನಾ ಬಣ್ಣ: ನೇರಳೆ
ದಿನದ ವಾಚನಗಳು
ಮೊದಲನೆಯ ವಾಚನ
18ಯೆಹೋವನು ತಿಳಿಸಿದ್ದರಿಂದ ಅವರ ಕುತಂತ್ರವು ನನಗೆ ಗೊತ್ತಾಯಿತು; ಆಗಲೇ ಅವರ ಕೃತ್ಯಗಳನ್ನು ನನಗೆ ತೋರಿಸಿದಿ. 19ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. “ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ” ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ. 20ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು.
ಪ್ರತಿವಚನ ಕೀರ್ತನೆ
1ಬೆನ್ಯಾಮೀನ್ ಕುಲದವನಾದ ಕೂಷನ ಮಾತುಗಳ ವಿಷಯದಲ್ಲಿ ದಾವೀದನು ಯೆಹೋವನಿಗಾಗಿ ಹಾಡಿದ ಗೀತೆ. ಯೆಹೋವನೇ, ನನ್ನ ದೇವರೇ, ನಿನ್ನ ಮೊರೆಹೊಕ್ಕಿದ್ದೇನೆ; ಬೆನ್ನಟ್ಟುವವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು. 2ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು, ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು. 8ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು. 9ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು. 10ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ; ಆತನು ಯಥಾರ್ಥರನ್ನು ಕಾಪಾಡುತ್ತಾನೆ. 11ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು; ಆತನು ಯಾವಾಗಲೂ ದುಷ್ಟರ ವಿಷಯದಲ್ಲಿ ಕೋಪವುಳ್ಳವನು.
ಸುವಾರ್ತೆ
40ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿದಾಗ “ನಿಜವಾಗಿಯೂ ಈತನು ಪ್ರವಾದಿಯಾಗಿದ್ದಾನೆ” ಎಂದರು. 41ಕೆಲವರು, “ಈತನು ಕ್ರಿಸ್ತನು” ಎಂದರು, ಆದರೆ ಇನ್ನೂ ಕೆಲವರು “ಕ್ರಿಸ್ತನು ಗಲಿಲಾಯದಿಂದ ಬರುವುದುಂಟೆ? 42ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು. 43ಹೀಗೆ ಆತನ ನಿಮಿತ್ತವಾಗಿ ಜನರಲ್ಲಿ ಭೇದ ಉಂಟಾಯಿತು. 44ಅವರಲ್ಲಿ ಕೆಲವರು ಆತನನ್ನು ಬಂಧಿಸಬೇಕೆಂದಿದ್ದರೂ ಆದರೆ ಯಾರು ಆತನ ಮೇಲೆ ಕೈ ಹಾಕಲಿಲ್ಲ. 45ಬಳಿಕ ಆ ದೇವಾಲಯದ ಕಾವಲುಗಾರರು, ಮುಖ್ಯಯಾಜಕರ ಮತ್ತು ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಕರೆತರಲಿಲ್ಲ?” ಎಂದು ಅವರನ್ನು ಕೇಳಿದ್ದಕ್ಕೆ, 46ಕಾವಲುಗಾರರು “ಈ ಮನುಷ್ಯನು ಮಾತನಾಡುವ ರೀತಿಯಲ್ಲಿ ಯಾರೂ ಎಂದೂ ಮಾತನಾಡಿದ್ದಿಲ್ಲ” ಎಂದು ಉತ್ತರ ಕೊಟ್ಟರು. 47ಆಗ ಫರಿಸಾಯರು ಅವರಿಗೆ “ನೀವೂ ಸಹ ಆತನ ಮಾತಿಗೆ ಮರುಳಾದೀರಾ? 48ಹಿರೀಸಭೆಯವರಲ್ಲಾಗಲಿ ಫರಿಸಾಯರಲ್ಲಾಗಲಿ ಯಾರಾದರೂ ಅವನನ್ನು ನಂಬಿದ್ದಾರೋ? 49ಧರ್ಮಶಾಸ್ತ್ರವನ್ನು ಅರಿಯದ ಈ ಹಿಂಡು ಶಾಪಗ್ರಸ್ತರೇ” ಎಂದು ಹೇಳಿದರು. 50ಮೊದಲು ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಅವರಲ್ಲಿ ಒಬ್ಬನಾಗಿದ್ದನು, 51ಅವನು ಅವರಿಗೆ “ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ಅವನ ವಿಷಯವಾಗಿ ಖಂಡನೆ ಮಾಡುವುದುಂಟೇ?” ಎಂದು ಹೇಳಿದ್ದಕ್ಕೆ, 52ಅವರು ಅವನಿಗೆ “ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,” ಎಂದರು. 53ಬಳಿಕ ಎಲ್ಲರೂ ತಮ್ಮ ತಮ್ಮ ಮನೆಗೆ ಹೋದರು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು