ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 13 ಮಾರ್ಚ್
ಆರ್ಥೊಡಾಕ್ಸ್ ಪಂಚಾಂಗ · ಫೆಬ್ರವರಿ 28 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 13 ಮಾರ್ಚ್ 2027
ಶನಿವಾರ · ಗಿಣ್ಣಿನ ವಾರ · ಸ್ವರ 7
ಹಬ್ಬಗಳು ಮತ್ತು ಸಂತರು
ಗಿಣ್ಣಿನ ವಾರದ ಶನಿವಾರ
ಮರಣಹೊಂದಿದ ನೀತಿವಂತ ಸನ್ಯಾಸಿಗಳ ಸ್ಮರಣೆ
ಗಿಣ್ಣಿನ ವಾರ
ಮಾಂಸವಿಲ್ಲ; ಹಾಲಿನ ಪದಾರ್ಥ, ಮೊಟ್ಟೆ ಮತ್ತು ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ (ಮೃತರು)
22ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, 23ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ. 24ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ. 25ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ. 26ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ. 6:1ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. 2ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.
ಪತ್ರಿಕೆ
19ಆದ್ದರಿಂದ ನಾವು ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ. 20ದೇವರು ಕಟ್ಟಿದ್ದನ್ನು ನೀನು ಆಹಾರದ ನಿಮಿತ್ತವಾಗಿ ಕೆಡವಬೇಡ. ಎಲ್ಲಾ ಪದಾರ್ಥಗಳೂ ಶುದ್ಧವೇ; ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವುದು ಕೆಟ್ಟದ್ದು. 21ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು. 22ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ಅದು ನಿನ್ನ ಮಟ್ಟಿಗೆ ಮಾತ್ರ ಇರಲಿ. ತಾನು ಒಪ್ಪಿದ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು. 23ಸಂಶಯಪಟ್ಟು ಊಟಮಾಡುವವನು ಸಂಶಯದಿಂದ ತಿನ್ನುವ ಕಾರಣ ತನ್ನ ಊಟದ ವಿಷಯದಲ್ಲಿ ನಂಬಿಕೆಯಿಲ್ಲದೆ ದೋಷಿಯಾಗಿದ್ದಾನೆ. ನಂಬಿಕೆಯ ಆಧಾರವಿಲ್ಲದಿರುವುದೆಲ್ಲವೂ ಪಾಪವೇ ಆಗಿದೆ. 16:25ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ, 27ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್.
ಸುವಾರ್ತೆ (ಮೃತರು)
27ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ. 28“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. 29ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. 30ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.
ಸುವಾರ್ತೆ
1“ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯುವುದಿಲ್ಲ. 2“ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 3ಆದರೆ ನೀನು ದಾನ ಕೊಡುವಾಗ ನಿನ್ನ ಬಲಗೈ ದಾನಕೊಟ್ಟದ್ದು ಎಡಗೈಗೂ ತಿಳಿಯದಿರಲಿ. 4ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು. 5“ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 6ನೀನು ಪ್ರಾರ್ಥನೆಮಾಡುವಾಗ ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು. 7ಆದರೆ ಪ್ರಾರ್ಥನೆಮಾಡುವಾಗ ಅನ್ಯಜನಗಳ ಹಾಗೆ ಹೇಳಿದ್ದನ್ನೇ ಸುಮ್ಮನೆ ಮತ್ತೆ ಮತ್ತೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ಭಾವಿಸುತ್ತಾರೆ. 8ಆದುದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವುದಕ್ಕಿಂತ ಮೊದಲೇ ನಿಮಗೆ ಏನೇನು ಅಗತ್ಯವೆಂಬುದು ಆತನಿಗೆ ತಿಳಿದಿದೆ. 9ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು, 10“ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ. 11ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು. 12ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ನಮ್ಮ ತಪ್ಪುಗಳನ್ನು ಕ್ಷಮಿಸು. 13ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 28 ಫೆಬ್ರವರಿ ಎಂದರೆ ನಾಗರಿಕ ಪಂಚಾಂಗದ 13 ಮಾರ್ಚ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು