ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 15 ಮಾರ್ಚ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 15 ಮಾರ್ಚ್ 2027
ಸೋಮವಾರ · ತಪಸ್ಸು ಕಾಲದ ಐದನೆಯ ವಾರ
ಹಬ್ಬಗಳು ಮತ್ತು ಸಂತರು
ತಪಸ್ಸು ಕಾಲದ ಐದನೆಯ ವಾರದ ಸೋಮವಾರ
ವಾರದ ದಿನ · ಆರಾಧನಾ ಬಣ್ಣ: ನೇರಳೆ
ದಿನದ ವಾಚನಗಳು
ಮೊದಲನೆಯ ವಾಚನ
ಈ ಅನುವಾದದಲ್ಲಿ ಇಲ್ಲ
ಪ್ರತಿವಚನ ಕೀರ್ತನೆ
1ದಾವೀದನ ಕೀರ್ತನೆ. ಯೆಹೋವನು ನನಗೆ ಕುರುಬನು; ಕೊರತೆಪಡೆನು. 2ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ. 3ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ. 4ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ. 5ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ. 6ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.
ಸುವಾರ್ತೆ
1ಯೇಸು ಎಣ್ಣೆಮರಗಳ ಗುಡ್ಡಕ್ಕೆ ಹೋದನು. 2ಬೆಳಗಿನಜಾವದಲ್ಲಿ ಆತನು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು. ಆತನು ಕುಳಿತುಕೊಂಡು ಅವರಿಗೆ ಬೋಧಿಸಿದನು. 3ಶಾಸ್ತ್ರಿಗಳೂ ಮತ್ತು ಫರಿಸಾಯರೂ ವ್ಯಭಿಚಾರದಲ್ಲಿ ಸಿಕ್ಕಿಬಿದ್ದ ಒಬ್ಬ ಹೆಂಗಸನ್ನು ಹಿಡಿದು ಆತನ ಬಳಿಗೆ ತಂದು ಆಕೆಯನ್ನು ಅವರ ಗುಂಪಿನ ಮಧ್ಯದಲ್ಲಿ ನಿಲ್ಲಿಸಿ; 4ಯೇಸುವಿಗೆ, “ಬೋಧಕನೇ, ಈ ಸ್ತ್ರೀ ವ್ಯಭಿಚಾರ ಮಾಡುತ್ತಿರುವಾಗಲೇ ಸಿಕ್ಕಿಬಿದ್ದಳು. 5ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯು ಧರ್ಮಶಾಸ್ತ್ರದಲ್ಲಿ ನಮಗೆ ಆಜ್ಞಾಪಿಸಿದ್ದಾನೆ. ಈಕೆಯ ವಿಷಯದಲ್ಲಿ ನೀನು ಏನು ಹೇಳುತ್ತೀ?” ಎಂದು ಆತನನ್ನು ಕೇಳಿದರು. 6ಅವರು ಆತನನ್ನು ಪರೀಕ್ಷಿಸುವವರಾಗಿ ಆತನ ಮೇಲೆ ತಪ್ಪುಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು. 7ಅವರು ಆತನನ್ನು ಬಿಡದೆ ಪ್ರಶ್ನಿಸುತ್ತಿರುವಾಗ, ಆತನು ನೆಟ್ಟಗೆ ಕುಳಿತುಕೊಂಡು, ಅವರಿಗೆ, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲು ಎಸೆಯಲಿ” ಎಂದು ಹೇಳಿದನು 8ತಿರುಗಿ ಆತನು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು. 9ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಎಲ್ಲರೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬನೇ ಉಳಿದನು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು. 10ಯೇಸು ನೆಟ್ಟಗೆ ಕುಳಿತುಕೊಂಡು ಆಕೆಗೆ, “ಸ್ತ್ರೀಯೇ, ಅವರು ಎಲ್ಲಿಗೆ ಹೋದರು? ನಿನ್ನನ್ನು ಖಂಡಿಸುವುದಕ್ಕೆ ಯಾರೂ ಉಳಿಯಲಿಲ್ಲವೋ?” ಎಂದನು. 11ಅದಕ್ಕೆ ಆಕೆಯು “ಕರ್ತನೇ, ಯಾರೂ ಶಿಕ್ಷೆ ವಿಧಿಸಲಿಲ್ಲ” ಎಂದಳು. ಯೇಸು ಆಕೆಗೆ “ನಾನೂ ಸಹ ನಿನ್ನನ್ನು ಶಿಕ್ಷೆ ವಿಧಿಸುವುದಿಲ್ಲ, ಹೋಗು, ಇನ್ನು ಮುಂದೆ ಪಾಪಮಾಡಬೇಡ” ಎಂದು ಹೇಳಿದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು