Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 15 ಮಾರ್ಚ್

ಆರ್ಥೊಡಾಕ್ಸ್ ಪಂಚಾಂಗ · ಮಾರ್ಚ್ 2 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 15 ಮಾರ್ಚ್ 2027

ಸೋಮವಾರ · ಮಹಾ ಉಪವಾಸದ ಮೊದಲನೆಯ ವಾರ · ಸ್ವರ 8

ಹಬ್ಬಗಳು ಮತ್ತು ಸಂತರು

ಮಹಾ ಉಪವಾಸದ ಆರಂಭ

ಮಹಾ ಉಪವಾಸ ಕಾಲ

ಆಹಾರದಿಂದ ಸಂಪೂರ್ಣ ದೂರ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಆರನೆಯ ತಾಸು

ಯೆಶಾ 1:1–20

1ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ. 2ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ. 3ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ. 4ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ. 5ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ. 6ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ. 7ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು. 8ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ. 9ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು. 10ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ. 11ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು. 12ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; ನನ್ನ ಆಲಯದ ಪ್ರಾಕಾರವನ್ನು ಪ್ರವೇಶಿಸಲು ಯಾರು ನಿಮ್ಮನ್ನು ಕೇಳಿಕೊಂಡರು? 13ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು. 14ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ. 15ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ. 16ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ, 17ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.” 18“ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು. 19ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ. 20ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.

ಸಂಧ್ಯಾ ಪ್ರಾರ್ಥನೆ: ವಾಚನ

ಆದಿ 1:1–13

1ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು. 2ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು. 3ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು. 4ದೇವರು ಆ ಬೆಳಕನ್ನು ಒಳ್ಳೆಯದೆಂದು ಕಂಡನು. 5ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು. 6ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು. 7ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು. ಅದು ಹಾಗೆಯೇ ಆಯಿತು. 8ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು. 9ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು. 10ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು. 11ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು. 12ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು 13ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು.

ಸಂಧ್ಯಾ ಪ್ರಾರ್ಥನೆ: ವಾಚನ

ಜ್ಞಾನೋ 1:1–20

1ಇಸ್ರಾಯೇಲರ ಅರಸನಾಗಿದ್ದ ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು. 2ಇವುಗಳಿಂದ ಜನರು ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದು, ಬುದ್ಧಿವಾದಗಳನ್ನು ಗ್ರಹಿಸಿಕೊಳ್ಳುವರು. 3ಅವರು ವಿವೇಕಮಾರ್ಗದಲ್ಲಿ ಅಂದರೆ ನೀತಿ, ನ್ಯಾಯ ಮತ್ತು ಧರ್ಮಮಾರ್ಗಗಳಲ್ಲಿ ಶಿಕ್ಷಿತರಾಗುವರು. 4ಈ ನುಡಿಗಳು ಮೂಢರಿಗೆ ಜಾಣತನವನ್ನೂ, ಯೌವನಸ್ಥರಿಗೆ ತಿಳಿವಳಿಕೆಯನ್ನು ಮತ್ತು ಬುದ್ಧಿಯನ್ನು ಉಂಟುಮಾಡುವವು. 5ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು. 6ಇವು ಗಾದೆ, ಸಾಮ್ಯ, ಜ್ಞಾನಿಗಳ ನುಡಿ ಮತ್ತು ಒಗಟುಗಳನ್ನು ತಿಳಿಯಲು ಸಾಧನವಾಗಿವೆ. 7ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು. 8ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ. 9ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ, ಕೊರಳಿಗೆ ಹಾರದಂತಿರುವುದು. 10ಮಗನೇ, ಪಾಪಿಗಳು ದುಷ್ಪ್ರೇರಣೆಯನ್ನು ಮಾಡಿದರೆ ನೀನು ಒಪ್ಪಲೇ ಬೇಡ. 11ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ. 12ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ, ನಾವೂ ಇವರನ್ನು ಜೀವದೊಡನೆ ನುಂಗಿಬಿಡೋಣ. 13ಸಕಲವಿಧವಾದ ಅಮೂಲ್ಯ ಸಂಪತ್ತನ್ನು ಕಂಡುಹಿಡಿದು, ಕೊಳ್ಳೆಮಾಡಿ ನಮ್ಮ ಮನೆಗಳಲ್ಲಿ ತುಂಬಿಕೊಳ್ಳೋಣ. 14ನಮ್ಮ ಸಂಗಡ ಚೀಟು ಹಾಕು; ನಮ್ಮೆಲ್ಲರ ಹಣದ ಚೀಲ ಒಂದೇ ಆಗಿರಲಿ” ಎಂದು ಹೇಳಿದರೆ, 15ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು, ಅವರ ಮಾರ್ಗದಲ್ಲಿ ನೀನು ಹೆಜ್ಜೆಯಿಡಬೇಡ. 16ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು. 17ಪಕ್ಷಿಗಳ ಕಣ್ಣೆದುರಿಗೆ ಬಲೆಯನ್ನೊಡ್ಡುವುದು ವ್ಯರ್ಥ. 18ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವುದಕ್ಕೆ ಕಾದಿರುತ್ತಾರೆ. 19ಸೂರೆಮಾಡುವವರೆಲ್ಲರ ದಾರಿಯು ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವುದು. 20ಜ್ಞಾನವೆಂಬಾಕೆಯು ಬೀದಿಗಳಲ್ಲಿ ಕೂಗುತ್ತಾಳೆ, ಚೌಕಗಳಲ್ಲಿ ಧ್ವನಿಮಾಡುತ್ತಾಳೆ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 2 ಮಾರ್ಚ್ ಎಂದರೆ ನಾಗರಿಕ ಪಂಚಾಂಗದ 15 ಮಾರ್ಚ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು