Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 17 ಮಾರ್ಚ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 17 ಮಾರ್ಚ್ 2027

ಬುಧವಾರ · ತಪಸ್ಸು ಕಾಲದ ಐದನೆಯ ವಾರ

ಹಬ್ಬಗಳು ಮತ್ತು ಸಂತರು

ತಪಸ್ಸು ಕಾಲದ ಐದನೆಯ ವಾರದ ಬುಧವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ನೇರಳೆ

ಸಂತ ಪ್ಯಾಟ್ರಿಕ್, ಧರ್ಮಾಧ್ಯಕ್ಷ · ಸ್ಮರಣೋಲ್ಲೇಖ

ದಿನದ ವಾಚನಗಳು

ಮೊದಲನೆಯ ವಾಚನ

ದಾನಿ 3:14–20, 24–25, 28

14ಹಾಗೆ ಅವರನ್ನು ಹಿಡಿದು ತರಲು ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ, ನೀವು ನನ್ನ ದೇವರನ್ನು ಸೇವಿಸದೆ, ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವುದು ಬೇಕೆಂದೇ ಮಾಡಿದ್ದೋ? 15“ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು. 16ಇದನ್ನು ಕೇಳಿ ಶದ್ರಕ್ ಮೇಶಕ್, ಅಬೇದ್ನೆಗೋ ಎಂಬುವವರು ರಾಜನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ. 17‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು. 18ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಆರಾಧಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ’” ಎಂದು ಉತ್ತರಕೊಟ್ಟರು. 19ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು. 20ಇದಲ್ಲದೆ ತನ್ನ ಸೈನ್ಯದ ಕೆಲವು ಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು. 24ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳಿಗೆ, “ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ?” ಎಂದು ಕೇಳಲು ಅವರು ರಾಜನಿಗೆ, “ಅರಸನೇ, ಹೌದು, ಹಾಕಿರುವುದು ಸತ್ಯ” ಎಂದು ಉತ್ತರಕೊಟ್ಟರು. 25ಅದಕ್ಕೆ ಅವನು, “ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ” ಎಂದು ಹೇಳಿದನು. 28ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.

ಪ್ರತಿವಚನ ಕೀರ್ತನೆ

ಈ ಅನುವಾದದಲ್ಲಿ ಇಲ್ಲ

ಸುವಾರ್ತೆ

ಯೋಹಾ 8:31–42

31ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ. 32ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು. 33ಅದಕ್ಕವರು ಆತನಿಗೆ, “ನಾವು ಅಬ್ರಹಾಮನ ಸಂತಾನದವರು ಮತ್ತು ನಾವು ಎಂದೂ ಯಾರಿಗೂ ದಾಸರಾಗಿಲ್ಲ, ನಿಮಗೆ ಬಿಡುಗಡೆಯಾಗುವುದೆಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು. 34ಅದಕ್ಕೆ ಯೇಸು, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ. 35ದಾಸನು ಮನೆಯಲ್ಲಿ ಶಾಶ್ವತವಾಗಿ ಇರುವುದಿಲ್ಲ, ಆದರೆ ಮಗನು ಶಾಶ್ವತವಾಗಿ ಇರುತ್ತಾನೆ. 36ಆದುದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿಯೂ ನಿಮಗೆ ಬಿಡುಗಡೆಯಾಗುವುದು. 37ನೀವು ಅಬ್ರಹಾಮನ ಸಂತಾನದವರೆಂದು ನಾನು ಬಲ್ಲೆನು, ಆದರೂ ನನ್ನ ವಾಕ್ಯಕ್ಕೆ ನಿಮ್ಮಲ್ಲಿ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವುದಕ್ಕೆ ನೋಡುತ್ತಿದ್ದೀರಿ. 38ನಾನು ತಂದೆಯ ಬಳಿಯಲ್ಲಿ ನೋಡಿದ್ದನ್ನೇ ಮಾತನಾಡುತ್ತೇನೆ, ನೀವು ತಂದೆಯಿಂದ ಕೇಳಿದ್ದನ್ನೇ ಮಾಡಿರಿ” ಎಂದನು. 39ಅದಕ್ಕೆ ಅವರು, “ನಮ್ಮ ತಂದೆಯು ಅಬ್ರಹಾಮನೇ” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದೀರಿ. 40ಆದರೂ, ನೀವು ಹಾಗೆ ಮಾಡದೇ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾದ ನನ್ನನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದೀರಿ. ಅಬ್ರಹಾಮನು ಹೀಗೆ ಮಾಡಲಿಲ್ಲ. 41ನೀವು ನಿಮ್ಮ ತಂದೆಯ ಕಾರ್ಯಗಳನ್ನು ಮಾಡುತ್ತಿದ್ದೀರಿ” ಎಂದನು. ಅದಕ್ಕವರು, “ನಾವು ವ್ಯಭಿಚಾರದಿಂದ ಹುಟ್ಟಿದವರಲ್ಲ. ನಮಗೆ ಒಬ್ಬನೇ ತಂದೆ, ಆತನು ದೇವರೇ” ಎಂದರು. 42ಯೇಸು ಅವರಿಗೆ, “ದೇವರು ನಿಮಗೆ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ, ಏಕೆಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ, ಆದರೆ ದೇವರೇ ನನ್ನನ್ನು ಕಳುಹಿಸಿದ್ದಾನೆ.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು