Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 17 ಮಾರ್ಚ್

ಆರ್ಥೊಡಾಕ್ಸ್ ಪಂಚಾಂಗ · ಮಾರ್ಚ್ 4 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 17 ಮಾರ್ಚ್ 2027

ಬುಧವಾರ · ಮಹಾ ಉಪವಾಸದ ಮೊದಲನೆಯ ವಾರ · ಸ್ವರ 8

ಹಬ್ಬಗಳು ಮತ್ತು ಸಂತರು

Venerable Gerasimus of the Jordan († 451)

ಮಹಾ ಉಪವಾಸ ಕಾಲ

ಕಟ್ಟುನಿಟ್ಟಿನ ಉಪವಾಸ (ಒಣ ಆಹಾರ: ರೊಟ್ಟಿ, ತರಕಾರಿ, ಹಣ್ಣು)

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಆರನೆಯ ತಾಸು

ಯೆಶಾ 2:3–11

3ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು. 4ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ. 5ಯಾಕೋಬಿನ ವಂಶದವರೇ ಬನ್ನಿರಿ, ಯೆಹೋವನ ಜ್ಞಾನದ ಬೆಳಕಿನಲ್ಲಿ ನಡೆಯೋಣ. 6ಯಾಕೋಬಿನ ಮನೆತನದವರು ಪೂರ್ವದೇಶಗಳಲ್ಲಿ ಮಂತ್ರತಂತ್ರಗಳಲ್ಲಿ ಮಗ್ನರೂ, ಫಿಲಿಷ್ಟಿಯರ ಹಾಗೆ ಕಣಿ ಹೇಳುವವರೂ, ಅನ್ಯದೇಶಗಳವರ ಸಂಗಡ ಒಪ್ಪಂದ ಮಾಡುವವರೂ ಆಗಿರುವುದರಿಂದ ಯೆಹೋವನೇ ಈ ನಿನ್ನ ಜನರನ್ನು ಕೈಬಿಟ್ಟಿದ್ದೀ. 7ಅವರ ದೇಶವು ಬೆಳ್ಳಿಬಂಗಾರಗಳಿಂದ ತುಂಬಿದೆ. ಅವರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲ. ಅವರ ದೇಶವು ಅಶ್ವಬಲದಿಂದ ತುಂಬಿದೆ. ಅವರ ರಥಗಳಿಗೆ ಮಿತಿಯೇ ಇಲ್ಲ. 8ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ. ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ. 9ಹೀಗಿರಲು ಜನರು ಅಧರ್ಮಿಗಳಾಗಲಿ, ಉತ್ತಮರಾಗಲಿ ತಗ್ಗಿಸಲ್ಪಡುವರು, ಪ್ರತಿ ಮನುಷ್ಯನು ಬಿದ್ದುಹೋಗುವನು. ನೀನು ಅವರನ್ನು ಸ್ವೀಕರಿಸಬೇಡ. 10ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಭೂಮಿಯಲ್ಲಿ ಅವಿತುಕೋ. 11ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.

ಸಂಧ್ಯಾ ಪ್ರಾರ್ಥನೆ: ವಾಚನ

ಆದಿ 1:24–2:3

24ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು. 25ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. 26ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು. 27ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.” 28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು. 29ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ 30ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು. 31ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು. 2:1ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು. 2ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. 3ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.

ಸಂಧ್ಯಾ ಪ್ರಾರ್ಥನೆ: ವಾಚನ

ಜ್ಞಾನೋ 2:1–22

1ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ, 2ನಿನ್ನ ಕಿವಿಯನ್ನು ಜ್ಞಾನದ ಕಡೆಗೂ, ಹೃದಯವನ್ನು ವಿವೇಕದ ಕಡೆಗೂ ತಿರುಗಿಸು; 3ಬುದ್ಧಿಗಾಗಿ ಮೊರೆಯಿಟ್ಟು, ವಿವೇಕಕ್ಕಾಗಿ ಕೂಗಿಕೋ. 4ಅದನ್ನು ಬೆಳ್ಳಿಯಂತೆಯು ಮತ್ತು ನಿಕ್ಷೇಪದಂತೆಯು ಹುಡುಕು; 5ಆಗ ನೀನು ಯೆಹೋವನ ಭಯವನ್ನು ಅರಿತು, ದೈವಜ್ಞಾನವನ್ನು ಪಡೆದುಕೊಳ್ಳುವಿ. 6ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ. 7ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು. ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು, 8ನ್ಯಾಯಮಾರ್ಗವನ್ನು ರಕ್ಷಿಸುತ್ತಾ, ತನ್ನ ಭಕ್ತರ ದಾರಿಯನ್ನು ನೋಡಿಕೊಳ್ಳುವನು. 9ಹೀಗಿರಲು ನೀನು ನೀತಿ, ನ್ಯಾಯ, ಧರ್ಮವನ್ನೂ ಅಂದರೆ ಸಕಲ ಸನ್ಮಾರ್ಗಗಳನ್ನು ತಿಳಿದುಕೊಳ್ಳುವಿ. 10ಜ್ಞಾನವು ನಿನ್ನ ಹೃದಯದೊಳಗೆ ಪ್ರವೇಶಿಸುವುದು, ತಿಳಿವಳಿಕೆಯು ನಿನ್ನ ಆತ್ಮಕ್ಕೆ ಹಿತಕರವಾಗಿರುವುದು. 11ಬುದ್ಧಿಯು ನಿನಗೆ ಕಾವಲಾಗಿರುವುದು, ವಿವೇಕವು ನಿನ್ನನ್ನು ಕಾಪಾಡುವುದು. 12ಇದರಿಂದ ನೀನು ದುರ್ಮಾರ್ಗದಿಂದಲೂ, ಕೆಟ್ಟ ಮಾತನಾಡುವವರಿಂದಲೂ ತಪ್ಪಿಸಿಕೊಳ್ಳುವಿ. 13ಅವರಾದರೋ ಕತ್ತಲೆಯ ಮಾರ್ಗಗಳನ್ನು ಹಿಡಿಯಬೇಕೆಂದು, ಧರ್ಮಮಾರ್ಗಗಳನ್ನು ತೊರೆದುಬಿಡುವರು. 14ಅವರು ಕೆಟ್ಟದ್ದನ್ನು ಮಾಡುವುದರಲ್ಲಿ ಸಂತೋಷಿಸಿ, ಕೆಟ್ಟವರ ದುಷ್ಟತನದಲ್ಲಿ ಆನಂದಿಸುವರು. 15ಅವರ ಮಾರ್ಗಗಳು ವಕ್ರವಾಗಿವೆ. ಅವರ ನಡತೆಗಳು ದುರ್ನಡತೆಗಳೇ. 16ವಿವೇಕವು ನಿನ್ನನ್ನು ಜಾರಳಿಂದ ಅಂದರೆ ಸವಿಮಾತನಾಡುವ ಪರಸ್ತ್ರೀಯಿಂದ ತಪ್ಪಿಸುವುದು. 17ಅವಳು ತನ್ನ ಯೌವನಕಾಲದ ಕಾಂತನನ್ನು ತ್ಯಜಿಸಿ, ತನ್ನ ದೇವರ ಮುಂದೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಟ್ಟಿದ್ದಾಳೆ. 18ಅವಳ ಮನೆಯು ಪಾತಾಳಕ್ಕೆ ಇಳಿಯುವ ದಾರಿ, ಅವಳ ಮಾರ್ಗಗಳು ಪ್ರೇತಲೋಕಕ್ಕೆ ಹೋಗುತ್ತವೆ. 19ಅವಳ ಬಳಿಗೆ ಹೋಗುವವರು ಯಾರೂ ಹಿಂದಿರುಗುವುದಿಲ್ಲ, ಅವರಿಗೆ ಜೀವದ ಮಾರ್ಗವು ದೊರೆಯುವುದೇ ಇಲ್ಲ. 20ಒಳ್ಳೆಯವರ ನಡತೆಯನ್ನು ಅನುಸರಿಸುವಂತೆ ವಿವೇಕವು ನಿನ್ನನ್ನು ಪ್ರೇರೇಪಿಸಿ, ನೀತಿವಂತರ ದಾರಿಗಳನ್ನು ಹಿಡಿಯುವ ಹಾಗೆ ಮಾಡುವುದು. 21ಯಥಾರ್ಥವಂತರು ದೇಶದಲ್ಲಿ ಸ್ವತಂತ್ರರಾಗಿರುವರು, ನಿರ್ದೋಷಿಗಳು ಅದರಲ್ಲಿ ನೆಲೆಯಾಗಿರುವರು. 22ದುಷ್ಟರಾದರೋ ದೇಶದೊಳಗಿಂದ ತೆಗೆದುಹಾಕಲ್ಪಡುವರು, ದ್ರೋಹಿಗಳು ನಿರ್ಮೂಲರಾಗುವರು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 4 ಮಾರ್ಚ್ ಎಂದರೆ ನಾಗರಿಕ ಪಂಚಾಂಗದ 17 ಮಾರ್ಚ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು