Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 18 ಮಾರ್ಚ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 18 ಮಾರ್ಚ್ 2027

ಗುರುವಾರ · ತಪಸ್ಸು ಕಾಲದ ಐದನೆಯ ವಾರ

ಹಬ್ಬಗಳು ಮತ್ತು ಸಂತರು

ತಪಸ್ಸು ಕಾಲದ ಐದನೆಯ ವಾರದ ಗುರುವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ನೇರಳೆ

ಯೆರೂಸಲೇಮಿನ ಸಂತ ಸಿರಿಲ್, ಧರ್ಮಾಧ್ಯಕ್ಷ ಮತ್ತು ಧರ್ಮಸಭೆಯ ಪಂಡಿತ · ಸ್ಮರಣೋಲ್ಲೇಖ

ದಿನದ ವಾಚನಗಳು

ಮೊದಲನೆಯ ವಾಚನ

ಆದಿ 17:3–9

3ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ, 4“ನಾನು ನಿನ್ನೊಂದಿಗೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅದೇನೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪುರುಷನಾಗುವಿ, 5ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವುದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇಮಿಸಿರುವುದರಿಂದ ನಿನಗೆ ಇನ್ನು ಮೇಲೆ ಅಬ್ರಹಾಮ ಎಂದು ಹೆಸರಿರುವುದು. 6ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರು ಹುಟ್ಟುವರು. 7ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು. 8ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು. 9ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರು ತಲತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು.

ಪ್ರತಿವಚನ ಕೀರ್ತನೆ

ಕೀರ್ತ 105:4–9

4ಯೆಹೋವನನ್ನೂ, ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ. 5ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು, 6ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ನೀವು ನೆನಪುಮಾಡಿಕೊಳ್ಳಿರಿ. 7ಯೆಹೋವನೆಂಬಾತನೇ ನಮ್ಮ ದೇವರು; ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ. 8ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ, ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ. 9ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ತನ್ನ ವಾಗ್ದಾನಗಳನ್ನು ಕೊಟ್ಟನು.

ಸುವಾರ್ತೆ

ಯೋಹಾ 8:51–59

51ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು. 52ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ? 53ಸತ್ತುಹೋದ ನಮ್ಮ ತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು, ನಿನ್ನನ್ನೇ ನೀನು ಯಾರೆಂದು ಭಾವಿಸಿಕೊಳ್ಳುತ್ತಿದ್ದೀ?” ಎಂದು ಕೇಳಿದರು. 54ಯೇಸು “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ, ನೀವು ಆತನನ್ನು ನಿಮ್ಮ ದೇವರು ಅನ್ನುತ್ತೀರಿ, 55ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ. ನಾನಂತೂ ಆತನನ್ನು ಬಲ್ಲೆನು, ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು. ಆದರೆ ನಾನು ಆತನನ್ನು ತಿಳಿದಿದ್ದೇನೆ. ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ. 56ನಿಮ್ಮ ಮೂಲಪುರುಷನಾದ ಅಬ್ರಹಾಮನು ನನ್ನ ದಿನವನ್ನು ತಾನು ನೋಡುತ್ತೇನೆಂದು ಉಲ್ಲಾಸಪಟ್ಟನು ಮತ್ತು ಅದನ್ನು ನೋಡಿ ಸಂತೋಷಪಟ್ಟನು” ಎಂದು ಹೇಳಿದನು. 57ಅದಕ್ಕೆ ಯೆಹೂದ್ಯರು, “ನಿನಗೆ ಇನ್ನೂ ಐವತ್ತು ವರ್ಷವಾಗಿಲ್ಲ, ನೀನು ಅಬ್ರಹಾಮನನ್ನು ನೋಡಿದ್ದೀಯಾ?” ಅಂದರು. 58ಯೇಸು, “ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ; ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ” ಎಂದನು. 59ಆಗ ಅವರು ಆತನ ಮೇಲೆ ಎಸೆಯಲು, ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಮರೆಯಾಗಿ ದೇವಾಲಯದೊಳಗಿನಿಂದ ಹೊರಗೆ ಹೊರಟು ಹೋದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು