ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 20 ಮಾರ್ಚ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 20 ಮಾರ್ಚ್ 2027
ಶನಿವಾರ · ತಪಸ್ಸು ಕಾಲದ ಐದನೆಯ ವಾರ
ಹಬ್ಬಗಳು ಮತ್ತು ಸಂತರು
ತಪಸ್ಸು ಕಾಲದ ಐದನೆಯ ವಾರದ ಶನಿವಾರ
ವಾರದ ದಿನ · ಆರಾಧನಾ ಬಣ್ಣ: ನೇರಳೆ
ದಿನದ ವಾಚನಗಳು
ಮೊದಲನೆಯ ವಾಚನ
21ಇದನ್ನೂ ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ಇಸ್ರಾಯೇಲರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ, ಎಲ್ಲಾ ಕಡೆಯಿಂದಲೂ ಒಟ್ಟಗೂಡಿಸಿ, ಸ್ವದೇಶಕ್ಕೆ ಕರೆದು ತರುವೆನು. 22ಅಲ್ಲಿ ಇಸ್ರಾಯೇಲಿನ ಪರ್ವತಗಳ ಮೇಲೆ ಒಂದೇ ಜನಾಂಗವನ್ನಾಗಿ ಮಾಡುವೆನು. ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು. ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ. 23ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಅಶುದ್ಧ ಮಾಡಿಕೊಳ್ಳುವುದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು. ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು. 24“ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು. 25ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು. 26ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು. 27ಹೌದು, ನನ್ನ ವಾಸಸ್ಥಾನವು ಅವರ ಮಧ್ಯದಲ್ಲಿರುವುದು; ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು. 28ನನ್ನ ಪವಿತ್ರಾಲಯವು ಅವರ ಮಧ್ಯೆ ಶಾಶ್ವತವಾಗಿರುವಾಗ ಯೆಹೋವನಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಅನ್ಯಜನಾಂಗದವರು ತಿಳಿದುಕೊಳ್ಳುವರು.”
ಪ್ರತಿವಚನ ಕೀರ್ತನೆ
10ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರ ದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲರನ್ನು ಚದರಿಸಿದಾತನು, ‘ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು’ ಎಂದು ಪ್ರಕಟಿಸಿರಿ. ಯೆಹೋವನು ಯಾಕೋಬ್ಯರನ್ನು ವಿಮೋಚಿಸಿದ್ದಾನಲ್ಲಾ, 11ಅವರಿಗಿಂತ ಬಲಿಷ್ಠರ ಕೈಯಿಂದ ಅವರನ್ನು ಬಿಡಿಸಿದ್ದಾನಷ್ಟೆ. 12ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು. 13ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರು ಮತ್ತು ವೃದ್ಧರು ಜೊತೆಯಾಗಿ ಹರ್ಷಿಸುವರು. ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನು ಉಂಟುಮಾಡಿ, ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.
ಸುವಾರ್ತೆ
45ಆದುದರಿಂದ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯವನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು. 46ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ ಕಾರ್ಯಗಳನ್ನು ಅವರಿಗೆ ಹೇಳಿದರು. 47ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ. 48ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶ ಮಾಡಿಕೊಂಡಾರು” ಎಂದರು. 49ಆಗ ಅವರಲ್ಲಿ ಆ ವರ್ಷಕ್ಕೆ ಮಹಾಯಾಜಕನಾಗಿದ್ದ ಕಾಯಫನೆಂಬುವನು ಅವರಿಗೆ, “ನಿಮಗೇನೂ ತಿಳಿಯುತ್ತಿಲ್ಲ. 50ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಆಲೋಚಿಸುವುದೂ ಇಲ್ಲ” ಎಂಬುದಾಗಿ ಹೇಳಿದನು. 51ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ, ಆದರೆ ತಾನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ, ಯೇಸು ಆ ಜನರಿಗೋಸ್ಕರ ಹಾಗೂ 52ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು 53ಅವರು ಆ ದಿನದಿಂದ ಆತನನ್ನು ಕೊಲ್ಲುವುದಕ್ಕೆ ಆಲೋಚಿಸುತ್ತಿದ್ದರು. 54ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ, ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ, ಎಫ್ರಾಯೀಮ್ ಎಂಬ ಊರಲ್ಲಿ ತನ್ನ ಶಿಷ್ಯರ ಜೊತೆ ಇದ್ದನು. 55ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ, ಬಹು ಜನರು ತಮ್ಮನ್ನು ಶುದ್ಧ ಮಾಡಿಕೊಳ್ಳುವುದಕ್ಕಾಗಿ ಹಬ್ಬಕ್ಕಿಂತ ಮೊದಲೇ ಹಳ್ಳಿಗಳಿಂದ ಯೆರೂಸಲೇಮಿಗೆ ಬಂದರು. 56ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು, “ಅವನು ಹಬ್ಬಕ್ಕೆ ಬಾರದೇ ಇದ್ದಾನೋ? ನಿಮಗೆ ಹೇಗೆ ತೋರುತ್ತದೆ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಾ ಇದ್ದರು. 57ಆಗ ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಹಿಡಿಯಬೇಕೆಂಬುದಾಗಿ ಯೋಚಿಸಿ, ಅವನಿರುವ ಸ್ಥಳವು ಯಾರಿಗಾದರೂ ಗೊತ್ತಾದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು