Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 20 ಮಾರ್ಚ್

ಆರ್ಥೊಡಾಕ್ಸ್ ಪಂಚಾಂಗ · ಮಾರ್ಚ್ 7 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 20 ಮಾರ್ಚ್ 2027

ಶನಿವಾರ · ಮಹಾ ಉಪವಾಸದ ಮೊದಲನೆಯ ವಾರ · ಸ್ವರ 8

ಹಬ್ಬಗಳು ಮತ್ತು ಸಂತರು

Hieromartyrs Basil, Ephraim, Eugene, Elpidius, Agathodorus, Aetherius, and Kapiton of Cherson (4th C)

ಮಹಾ ಉಪವಾಸ ಕಾಲ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಇಬ್ರಿ 1:1–12

1ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ. 2ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು. 3ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು. 4ಈತನು ದೇವದೂತರಿಗಿಂತಲೂ ಉನ್ನತನಾಗಿದ್ದು. ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನು. 5ಹೇಗೆಂದರೆ, ದೇವರು ತನ್ನ ದೇವದೂತರೊಳಗೆ ಯಾರಿಗಾದರೂ ಎಂದಾದರೂ ಈ ರೀತಿಯಾಗಿ ಹೇಳಿದ್ದುಂಟೋ?, “ನೀನು ನನ್ನ ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.” “ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು.” 6ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ. 7ದೇವದೂತರ ವಿಷಯದಲ್ಲಿ, “ದೇವರು ತನ್ನ ದೂತರನ್ನು ಗಾಳಿಯನ್ನಾಗಿಯೂ, ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ” ಎಂದು ಹೇಳಿದ್ದಾನೆ. 8ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ. 9ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ. 10“ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ. ಆಕಾಶವು ನಿನ್ನ ಕೈಕೆಲಸವಾಗಿದೆ, 11ಅವು ನಾಶವಾಗುವವು. ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು. 12ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು ಅವು ವಸ್ತ್ರದಂತೆ ಬದಲಾಗುವವು. ನೀನಾದರೂ ಅನನ್ಯನು. ನಿನ್ನ ವರ್ಷಗಳಿಗೆ ಅಂತ್ಯವೇ ಇಲ್ಲ” ಎಂತಲೂ ಹೇಳುತ್ತಾನೆ.

ಪತ್ರಿಕೆ (ಸಂತ ಥಿಯೊಡೋರ್)

2 ತಿಮೊ 2:1–10

1ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು. 2ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು. 3ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಕಷ್ಟವನ್ನನುಭವಿಸು. 4ಯುದ್ಧಕ್ಕೆ ಹೋಗುವ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ. 5ಇದಲ್ಲದೆ ಯಾವನಾದರೂ ಸ್ಪರ್ಧೆಯಲ್ಲಿ ಎದುರಾಳಿಯೊಡನೆ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ ಅವನಿಗೆ ಜಯಮಾಲೆಯು ದೊರಕುವುದಿಲ್ಲ. 6ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಪಟ್ಟ ಕೃಷಿಕನಿಗೆ ದೊರೆಯುತ್ತದೆ. 7ನಾನು ಹೇಳುವುದನ್ನು ಯೋಚಿಸು. ಕರ್ತನು ಎಲ್ಲಾದರಲ್ಲಿಯೂ ನಿನಗೆ ವಿವೇಕವನ್ನು ದಯಪಾಲಿಸುವನು. 8ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ, ಇದೇ ನಾನು ಸಾರುವ ಸುವಾರ್ತೆ. 9ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ. 10ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.

ಸುವಾರ್ತೆ

ಮಾರ್ಕ 2:23–3:5

23ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ, ಆತನ ಶಿಷ್ಯರು ತೆನೆಗಳನ್ನು ಮುರಿದು ತಿಂದರು. 24ಫರಿಸಾಯರು ಆತನನ್ನು, “ನೋಡು, ಇವರು ಸಬ್ಬತ್ ದಿನದಲ್ಲಿ ಧರ್ಮಸಮ್ಮತವಲ್ಲದ್ದನ್ನು ಏಕೆ ಮಾಡುತ್ತಾರೆ?” ಎಂದು ಕೇಳಿದರು. 25ಆಗ ಯೇಸು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಆಹಾರವಿಲ್ಲದೆ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಎಂದಾದರೂ ಓದಲಿಲ್ಲವೋ? 26ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ನುಡಿಯುತ್ತಾ, 27“ಸಬ್ಬತ್ ದಿನವು ಮನುಷ್ಯರಿಗೋಸ್ಕರ ಮಾಡಲಾಯಿತೇ ಹೊರತು ಮನುಷ್ಯರನ್ನು ಸಬ್ಬತ್ ದಿನಕ್ಕಾಗಿ ಮಾಡಲಿಲ್ಲ. 28ಹೀಗಿರಲಾಗಿ ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ” ಎಂದು ಯೇಸು ಹೇಳಿದನು. 3:1ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ ಕೈ ಬತ್ತಿಹೋದ ಮನುಷ್ಯನೊಬ್ಬನಿದ್ದನು. 2ಕೆಲವರು ಯೇಸುವಿನ ಮೇಲೆ ತಪ್ಪುಹೊರಿಸುವುದಕ್ಕೆ, ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚುಹಾಕಿ ನೋಡುತ್ತಾ ಇದ್ದರು. 3ಆತನು ಕೈಬತ್ತಿದ್ದವನಿಗೆ, “ಎದ್ದು ನಡುವೆ ನಿಂತುಕೋ” ಎಂದು ಹೇಳಿದನು. 4ಆಗ ಅವರಿಗೆ, “ಸಬ್ಬತ್ ದಿನದಲ್ಲಿ ಧರ್ಮಸಮ್ಮತವಾದದು ಯಾವುದು? ಮೇಲನ್ನು ಮಾಡುವುದೋ, ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ, ತೆಗೆಯುವುದೋ?” ಎಂದು ಹೇಳಲು ಅವರು ಸುಮ್ಮನಿದ್ದರು. 5ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.

ಸುವಾರ್ತೆ (ಸಂತ ಥಿಯೊಡೋರ್)

ಯೋಹಾ 15:17–16:2

17ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಾನು ನಿಮಗೆ ಆಜ್ಞಾಪಿಸುತ್ತಿದ್ದೇನೆ. 18“ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ. 19ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ. 20ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು. 21ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು. 22ನಾನು ಬಾರದೆ ಮತ್ತು ಅವರ ಸಂಗಡ ಮಾತನಾಡದೆ ಹೋಗಿದ್ದಾರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಅವರ ಪಾಪಕ್ಕಾಗಿ ಈಗ ಯಾವ ನೆಪವೂ ಇಲ್ಲ. 23ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾನೆ. 24ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ 25‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು. 26ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು. 27ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ. 16:1“ನೀವು ನಂಬಿಕೆಯಿಂದ ಎಡವಿ ಬಿದ್ದು ಹೋಗಬಾರದೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. 2ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 7 ಮಾರ್ಚ್ ಎಂದರೆ ನಾಗರಿಕ ಪಂಚಾಂಗದ 20 ಮಾರ್ಚ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು