ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 23 ಮಾರ್ಚ್
ಆರ್ಥೊಡಾಕ್ಸ್ ಪಂಚಾಂಗ · ಮಾರ್ಚ್ 10 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 23 ಮಾರ್ಚ್ 2027
ಮಂಗಳವಾರ · ಮಹಾ ಉಪವಾಸದ ಎರಡನೆಯ ವಾರ · ಸ್ವರ 1
ಹಬ್ಬಗಳು ಮತ್ತು ಸಂತರು
Martyr Quadratus and those with him at Corinth († 250-258): Cyprian, Dionysius, Anectus, Paul, Criscentus, another Dionysius, Victorinus, Victor, Niciphorus, Claudius, Diodorus, Serapion, Papius, Leonidus, and the holy women Chariessa, Nunechia, Basilissa, Nica, Calisa, Gala, Galina, Theodora, and many others
ಮಹಾ ಉಪವಾಸ ಕಾಲ
ಕಟ್ಟುನಿಟ್ಟಿನ ಉಪವಾಸ (ಒಣ ಆಹಾರ: ರೊಟ್ಟಿ, ತರಕಾರಿ, ಹಣ್ಣು)
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಆರನೆಯ ತಾಸು
7ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು. 8ಅಯ್ಯೋ, ಮನೆಗೆ ಮನೆಯನ್ನೂ, ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು, ಇತರರಿಗೆ ಸ್ವಲ್ಪ ಸ್ಥಳವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ! 9ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನು ಹೇಳುವುದೇನೆಂದರೆ, ಸೊಗಸಾದ ಅನೇಕ ದೊಡ್ಡ ಮನೆಗಳಲ್ಲಿ ಜನರು ವಾಸಮಾಡದೆ ಅವು ಖಂಡಿತವಾಗಿ ಹಾಳು ಬೀಳುವುವು. 10ಏಕೆಂದರೆ ಹತ್ತು ಎಕರೆ ಭಾಗವಾಯಿತು. ಭೂಮಿಯು ನಾಲ್ಕು ಕೊಳಗದಷ್ಟೇ ದ್ರಾಕ್ಷಾರಸವನ್ನಿಯುವುದು. ಬಿತ್ತಿದ ಒಂದು ಖಂಡುಗ ಬೀಜದಿಂದ ಕಡಿಮೆ ದವಸವು ಬರುವುದು. 11ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು, ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ! 12ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ. 13ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ. ಘನವಂತರು ಹಸಿಯುವರು ಮತ್ತು ಜನಸಮೂಹವು ಬಾಯಾರಿಕೆಯಿಂದ ಒಣಗುವುದು. 14ಹೀಗಿರುವುದರಿಂದ ಪಾತಾಳವು ಹೆಚ್ಚು ಆತುರದಿಂದ ಅಗಾಧವಾಗಿ ಬಾಯಿ ತೆರೆಯಲು, ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲವುಗಳು ಅದರೊಳಗೆ ಬಿದ್ದುಹೋಗುವವು. 15ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು. 16ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು.
ಸಂಧ್ಯಾ ಪ್ರಾರ್ಥನೆ: ವಾಚನ
8ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು. 9ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಎಂದು ಉತ್ತರ ಕೊಟ್ಟನು. 10ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ. 11ಈಗ ನೀನು ನಿನ್ನ ಕೈಯಿಂದ ಸುರಿಸಿದ, ನಿನ್ನ ತಮ್ಮನ ರಕ್ತದಿಂದ ನೆನೆದ ಈ ಭೂಮಿಯಿಂದ ನಿನಗೆ ಶಾಪ ಬಂತು. 12ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು. 13ಆಗ ಕಾಯಿನನು ಯೆಹೋವನಿಗೆ, “ನನ್ನ ಅಪರಾಧದ ಫಲ ಸಹಿಸಲಾರದಷ್ಟಾಗಿದೆ. 14ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು. 15ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು.
ಸಂಧ್ಯಾ ಪ್ರಾರ್ಥನೆ: ವಾಚನ
1ಕಂದಾ, ನನ್ನ ಜ್ಞಾನೋಪದೇಶವನ್ನು ಆಲಿಸು, ವಿವೇಕದಿಂದ ಕೂಡಿದ ನನ್ನ ಬೋಧನೆಗೆ ಕಿವಿಗೊಡು. 2ಹೀಗಾದರೆ ನೀನು ವಿವೇಚನೆಯನ್ನು ಹೊಂದಿಕೊಳ್ಳುವಿ, ನಿನ್ನ ತುಟಿಗಳು ತಿಳಿವಳಿಕೆಯನ್ನು ಕಾಪಾಡುವವು. 3ವೇಶ್ಯಸ್ತ್ರೀಯ ತುಟಿಗಳಲ್ಲಾದರೋ ಜೇನುಗರೆಯುವುದು, ಅವಳ ಮಾತು ಎಣ್ಣೆಗಿಂತಲೂ ನಯವಾಗಿದೆ. 4ಅವಳು ಕಡೆಯಲ್ಲಿ ವಿಷದಂತೆ ಕಹಿಯೂ, ಇಬ್ಬಾಯಿಕತ್ತಿಯಂತೆ ತೀಕ್ಷ್ಣವೂ ಆಗುವಳು. 5ಅವಳು ಮರಣದ ಕಡೆಗೆ ನಡೆಯುತ್ತಾ ಇಳಿದು ಹೋಗುವಳು, ಅವಳ ಹೆಜ್ಜೆಗಳು ಪಾತಾಳದ ದಾರಿಯನ್ನು ಹಿಡಿಯುವವು. 6ಅವಳ ನಡತೆಯು ಚಂಚಲವಾಗಿರುವುದರಿಂದ ಅವಳು ಜೀವದ ಮಾರ್ಗವನ್ನು ವಿವೇಚಿಸಲಾರಳು, ಅದು ಅವಳಿಗೆ ತಿಳಿದೇ ಇಲ್ಲ. 7ಹೀಗಿರಲು ಮಗನೇ, ನನ್ನ ಕಡೆಗೆ ಕಿವಿಗೊಡು, ನನ್ನ ಮಾತುಗಳಿಂದ ದೂರವಾಗಿರಬೇಡ. 8ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ! 9ಎಚ್ಚರವಹಿಸಿಕೋ, ನಿನ್ನ ಪುರುಷತ್ವವು ಪರಾಧೀನವಾಗುವುದು, ನಿನ್ನ ಆಯುಷ್ಯವು ಕ್ರೂರರ ವಶವಾಗುವುದು. 10ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳುವರು, ನೀನು ಅನ್ಯನ ಮನೆಯಲ್ಲಿ ದುಡಿಯುವಿ. 11ಕಟ್ಟಕಡೆಗೆ ನಿನ್ನ ದೇಹವೆಲ್ಲಾ ಕ್ಷೀಣವಾಗಿ ನೀನು ಅಂಗಲಾಚಿಕೊಂಡು, 12“ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು, 13ನನ್ನ ಬೋಧಕರ ಮಾತನ್ನು ಕೇಳದೆ ಹೋದೆನಲ್ಲಾ, ನನ್ನ ಉಪದೇಶಕರ ಕಡೆಗೆ ಕಿವಿಗೊಡಲಿಲ್ಲವಲ್ಲಾ! 14ನಾನು ದೇವಜನರ ಸಭೆಯ ನಡುವೆ ಎಲ್ಲಾ ಕೇಡಿಗೂ ಸಿಕ್ಕಿಕೊಳ್ಳುವ ಹಾಗೆ ಆದೆನು” ಎಂದು ಅಂದುಕೊಳ್ಳುವಿ. 15ಸ್ವಂತ ಕೊಳದ ನೀರನ್ನು, ಸ್ವಂತ ಬಾವಿಯಲ್ಲಿ ಉಕ್ಕುವ ಜಲವನ್ನು ಮಾತ್ರ ಕುಡಿ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 10 ಮಾರ್ಚ್ ಎಂದರೆ ನಾಗರಿಕ ಪಂಚಾಂಗದ 23 ಮಾರ್ಚ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು