ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 26 ಮಾರ್ಚ್
ಆರ್ಥೊಡಾಕ್ಸ್ ಪಂಚಾಂಗ · ಮಾರ್ಚ್ 13 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 26 ಮಾರ್ಚ್ 2027
ಶುಕ್ರವಾರ · ಮಹಾ ಉಪವಾಸದ ಎರಡನೆಯ ವಾರ · ಸ್ವರ 1
ಹಬ್ಬಗಳು ಮತ್ತು ಸಂತರು
Translation of the relics of St Nicephorus the Patriarch of Constantinople (846)
ಮಹಾ ಉಪವಾಸ ಕಾಲ
ಕಟ್ಟುನಿಟ್ಟಿನ ಉಪವಾಸ (ಒಣ ಆಹಾರ: ರೊಟ್ಟಿ, ತರಕಾರಿ, ಹಣ್ಣು)
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಆರನೆಯ ತಾಸು
1ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನಾದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲರ ಅರಸನಾದ ಪೆಕಹ ಎಂಬುವವರು ಯೆರೂಸಲೇಮಿನ ಮೇಲೆ ದಂಡೆತ್ತಿ ಬಂದರು. ಆದರೆ ಅದನ್ನು ಜಯಿಸುವುದಕ್ಕೆ ಸಾಧ್ಯವಾಗಲಿಲ್ಲ. 2ಅರಾಮ್ಯರು ಎಫ್ರಾಯೀಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂಬ ಸುದ್ದಿಯು ದಾವೀದನ ಮನೆಗೆ ಮುಟ್ಟಿದಾಗ ಆಹಾಜನ ಮತ್ತು ಅವನ ಪ್ರಜೆಯ ಹೃದಯವು ಅರಣ್ಯದ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು. 3ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು, 4‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’” 5ಅರಾಮ್ಯರೂ, ಎಫ್ರಾಯೀಮ್ಯರೂ ಮತ್ತು ರೆಮಲ್ಯನ ಮಗನೂ ನಿನ್ನ ವಿಷಯವಾಗಿ ದುರಾಲೋಚನೆ ಮಾಡಿ, 6“ನಾವು ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ, ಒಳಗೆ ನುಗ್ಗಿಕೊಂಡು ಹೋಗಿ, ಅದರಲ್ಲಿ ಟಬೇಲನ ಮಗನನ್ನು ಅರಸನನ್ನಾಗಿ ನೇಮಿಸಿಕೊಳ್ಳೋಣ” ಎಂದುಕೊಂಡಿದ್ದಾರೆ. 7ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಇದು ನೆರವೇರುವುದಿಲ್ಲ; ಇದು ಆಗುವುದೇ ಇಲ್ಲ. 8ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ. ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು. 9ಎಫ್ರಾಯೀಮಿಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನು ತಾನೇ. ನೀವು ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ” ಎಂಬುದೇ. 10ಮತ್ತೆ ಯೆಹೋವನು ಆಹಾಜನಿಗೆ, 11“ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳು. ಅದು ಪಾತಾಳದಷ್ಟು ಆಳದಲ್ಲಿದ್ದರೂ, ಮೇಲೆ ಎತ್ತರದಲ್ಲಿದ್ದರೂ ಅದನ್ನು ಕೇಳಿಕೋ” ಎಂದು ಹೇಳಿದನು. 12ಆಗ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ, ಇಲ್ಲವೆ ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದನು. 13ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ? 14ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
ಸಂಧ್ಯಾ ಪ್ರಾರ್ಥನೆ: ವಾಚನ
32ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು. 6:1ಭೂಮಿಯ ಮೇಲೆ ಮನುಷ್ಯರ ಸಂಖ್ಯೆ ಹೆಚ್ಚಾಯಿತು. ಇವರಿಗೆ ಹುಟ್ಟಿದ ಹೆಣ್ಣುಮಕ್ಕಳು 2ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು. 3ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು. 4ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು. 5ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು. 6ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು. 7ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು. 8ಆದರೆ ನೋಹನ ನಡವಳಿಕೆ ಯೆಹೋವನಿಗೆ ಮೆಚ್ಚುಗೆಯಾದುದರಿಂದ ನೋಹನಿಗೆ ಯೆಹೋವನ ದಯೆ ದೊರಕಿತು.
ಸಂಧ್ಯಾ ಪ್ರಾರ್ಥನೆ: ವಾಚನ
20ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಉಪದೇಶವನ್ನು ಬಿಡಬೇಡ. 21ಅವುಗಳನ್ನು ಸದಾ ನಿನ್ನ ಹೃದಯದಲ್ಲಿ ಇಟ್ಟುಕೋ, ನಿನ್ನ ಕೊರಳಿಗೆ ಅವುಗಳನ್ನು ಧರಿಸಿಕೋ. 22ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು, ಮಲಗಿಕೊಂಡಾಗ ಅದು ನಿನ್ನನ್ನು ಕಾಯುವುದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತನಾಡುವುದು. 23ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ. 24ಅದು ಕೆಟ್ಟ ಸ್ತ್ರೀಯಿಂದಲೂ, ವೇಶ್ಯೆಯ ಸಿಹಿನುಡಿಯಿಂದಲೂ ನಿನ್ನನ್ನು ರಕ್ಷಿಸತಕ್ಕದ್ದಾಗಿದೆ. 25ನಿನ್ನ ಹೃದಯವು ಅವಳ ಸೌಂದರ್ಯವನ್ನು ಮೋಹಿಸದಿರಲಿ, ಅವಳು ತನ್ನ ಕಣ್ಣುರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ. 26ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವುದು, ಪರಸ್ತ್ರೀಯೋ ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು. 27ಮಡಿಲಲ್ಲಿ ಬೆಂಕಿಯನ್ನು ಇಟ್ಟುಕೊಂಡರೆ ಬಟ್ಟೆ ಸುಡುವುದಿಲ್ಲವೋ? 28ಧಗಧಗಿಸುವ ಕೆಂಡದ ಮೇಲೆ ನಡೆದರೆ ಕಾಲು ಬೇಯುವುದಿಲ್ಲವೋ? 29ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವುದು, ಯಾರು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು. 30ಕಳ್ಳನು ಹೊಟ್ಟೆಗಿಲ್ಲದೆ ಹಸಿವೆಯನ್ನು ನೀಗಿಸಲು ಕಳವು ಮಾಡಿದರೆ ಜನರು ಅಷ್ಟೇನೂ ಹೀಯಾಳಿಸರು. 31ಅವನ ತಪ್ಪು ಬಯಲಾದರೆ ಅವನು ಏಳರಷ್ಟು ಕೊಡಬೇಕಾಗುವುದು, ಅಥವಾ ತನ್ನ ಮನೆಯ ಆಸ್ತಿಯನ್ನೆಲ್ಲಾ ಕೊಟ್ಟು ತೀರಿಸಲೇಬೇಕು. 32ವ್ಯಭಿಚಾರಿಯೋ ಕೇವಲ ಬುದ್ಧಿಹೀನನು, ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು. 33ಅವನಿಗೆ ಗಾಯವೂ, ಅವಮಾನವೂ ಆಗುವವು, ಅವನ ಕೆಟ್ಟ ಹೆಸರು ಎಂದಿಗೂ ಅಳಿಸಲ್ಪಡದು. 34ಏಕೆಂದರೆ ಮತ್ಸರವು ಪತಿಗೆ ಕ್ರೋಧವನ್ನು ಉಂಟುಮಾಡುತ್ತದೆ, ಅವನು ಮುಯ್ಯಿತೀರಿಸತಕ್ಕ ದಿನದಲ್ಲಿ ವ್ಯಭಿಚಾರಿಯನ್ನು ಉಳಿಸನು. 35ಅವನು ಯಾವ ಈಡನ್ನೂ ಮುಟ್ಟನು; ಎಷ್ಟು ಲಂಚಕೊಟ್ಟರೂ ಒಪ್ಪನು. 7:1ಕಂದಾ, ನನ್ನ ಮಾತುಗಳನ್ನು ಮನಸ್ಸಿನಲ್ಲಿಟ್ಟುಕೋ, ನನ್ನ ಆಜ್ಞೆಗಳನ್ನು ನಿಧಿಯಂತೆ ಕಾಪಾಡಿಕೋ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 13 ಮಾರ್ಚ್ ಎಂದರೆ ನಾಗರಿಕ ಪಂಚಾಂಗದ 26 ಮಾರ್ಚ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು