ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 27 ಮಾರ್ಚ್
ಆರ್ಥೊಡಾಕ್ಸ್ ಪಂಚಾಂಗ · ಮಾರ್ಚ್ 14 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 27 ಮಾರ್ಚ್ 2027
ಶನಿವಾರ · ಮಹಾ ಉಪವಾಸದ ಎರಡನೆಯ ವಾರ · ಸ್ವರ 1
ಹಬ್ಬಗಳು ಮತ್ತು ಸಂತರು
ಮೃತರ ಸ್ಮರಣೆಯ ಶನಿವಾರ
ಮಹಾ ಉಪವಾಸ ಕಾಲ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ (ಮೃತರು)
13ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ. 14ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ. 15ನಾವು ಕರ್ತನ ಮಾತಿನ ಆಧಾರದ ಮೇಲೆ ನಿಮಗೆ ಹೇಳುವುದೇನಂದರೆ, ಕರ್ತನು ಪುನರಾಗಮಿಸುವವರೆಗೆ ಜೀವದಿಂದುಳಿದಿರುವ ನಾವು ಮರಣ ಹೊಂದಿದವರಿಗಿಂತ ಮುಂದಾಗುವುದಿಲ್ಲ. 16ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು. 17ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.
ಪತ್ರಿಕೆ
12ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ. 13ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ. 14ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ. 15“ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ, ಪೂರ್ವಿಕರು ಮೊಂಡುತನದಿಂದ ಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.” 16ಆತನು ನುಡಿದದ್ದನ್ನು ಕೇಳಿ ವಿರೋಧಿಸಿದವರು ಯಾರು? ಮೋಶೆಯ ಮೂಲಕ ಐಗುಪ್ತದೊಳಗಿಂದ ಹೊರಗೆ ಕರೆತರಲ್ಪಟ್ಟವರೆಲ್ಲರೂ ಅಲ್ಲವೇ?
ಸುವಾರ್ತೆ (ಮೃತರು)
24ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ. 25ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು. 26ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ. 27ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ. 28ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗ ಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ, 29ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು. 30“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.
ಸುವಾರ್ತೆ
35ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು. 36ಸೀಮೋನನೂ ಅವನ ಸಂಗಡ ಇದ್ದವರೂ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು, 37ಆತನನ್ನು ಕಂಡಾಗ “ಎಲ್ಲರೂ ನಿನ್ನನ್ನು ಎದುರುನೋಡುತ್ತಿದ್ದಾರೆ” ಎಂದರು. 38ಆತನು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ” ಎಂದು ಹೇಳಿದನು. 39ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು. 40ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, “ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು. 41ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. 42ಕೂಡಲೆ ಅವನ ಕುಷ್ಠವು ಹೋಗಿ, ಅವನು ಶುದ್ಧನಾದನು. 43ಆಗ ಯೇಸು ಅವನಿಗೆ, “ಯಾರಿಗೂ ಏನೂ ಹೇಳಬೇಡ ನೋಡು; 44ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿರುವಂಥವುಗಳನ್ನು ಅರ್ಪಿಸು. ಅದು ಜನರಿಗೆ ಸಾಕ್ಷಿಯಾಗಿರಲಿ ಎಂದು ಖಂಡಿತವಾಗಿ” ಹೇಳಿ ಅವನನ್ನು ಕೂಡಲೆ ಕಳುಹಿಸಿ ಬಿಟ್ಟನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 14 ಮಾರ್ಚ್ ಎಂದರೆ ನಾಗರಿಕ ಪಂಚಾಂಗದ 27 ಮಾರ್ಚ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು