ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 28 ಮಾರ್ಚ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 28 ಮಾರ್ಚ್ 2027
ಭಾನುವಾರ · ಪಾಸ್ಕದ ಅಷ್ಟದಿನ
ಹಬ್ಬಗಳು ಮತ್ತು ಸಂತರು
ಪಾಸ್ಕ ಭಾನುವಾರ — ಕರ್ತನ ಪುನರುತ್ಥಾನ
ಮಹೋತ್ಸವ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
34ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; “ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ, 37ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಯೋಹಾನನು ಸಾರಿದ ತರುವಾಯ ಈ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ, ಯೂದಾಯದಲ್ಲೆಲ್ಲಾ ಪ್ರಬಲವಾಯಿತು. 38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ. 39ಆತನು ಯೆಹೂದ್ಯರ ಸೀಮೆಯಲ್ಲಿಯೂ, ಯೆರೂಸಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ. 40ಆತನನ್ನು ಮರದ ಕಂಬಕ್ಕೆ ತೂಗುಹಾಕಿ ಕೊಂದರು. ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ, ಪ್ರತ್ಯಕ್ಷನಾಗುವಂತೆ ಮಾಡಿದನು. 41ಆತನು ಎಲ್ಲರಿಗೂ ಪ್ರತ್ಯಕ್ಷನಾಗದೆ, ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಊಟ ಮಾಡಿದೆವು. 42ಆತನೇ ಜೀವವಿರುವವರಿಗೂ, ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬುದನ್ನು ಜನರಿಗೆ ಸಾರಿ, ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು. 43ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು.
ಪ್ರತಿವಚನ ಕೀರ್ತನೆ
1ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿದೆ. 2ಇಸ್ರಾಯೇಲರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. 16ಯೆಹೋವನ ಬಲಗೈ ಉನ್ನತವಾಗಿದೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ. 17ನಾನು ಸಾಯುವುದಿಲ್ಲ; ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು. 22ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು; 23ಇದು ಯೆಹೋವನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ.
ಎರಡನೆಯ ವಾಚನ
ಅಥವಾ: 1 ಕೊರಿ 5:6–8
1ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ. 2ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ. 3ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ. 4ನಿಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.
ಸುವಾರ್ತೆ
1ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ಉರುಳಿ ಹೋಗಿರುವುದನ್ನು ಕಂಡಳು. 2ಆಗ ಆಕೆಯು ಸೀಮೋನ್ ಪೇತ್ರನ ಬಳಿಗೂ ಮತ್ತು ಯೇಸುವಿಗೆ ಪ್ರಿಯನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು” ಹೇಳಿದಳು 3ಆಗ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಹೊರಟು ಸಮಾಧಿಯ ಕಡೆಗೆ ಹೋದರು. 4ಅವರಿಬ್ಬರೂ ಜೊತೆಯಾಗಿ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ವೇಗವಾಗಿ ಓಡಿ ಮೊದಲೇ ಸಮಾಧಿಗೆ ಬಂದನು. 5ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಹೋಗಲಿಲ್ಲ. 6ಸೀಮೋನ್ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ, ಆ ನಾರುಬಟ್ಟೆಗಳು ಬಿದ್ದಿರುವುದನ್ನೂ 7ಆತನ ತಲೆಯ ಮೇಲಿದ್ದ ಕೈವಸ್ತ್ರವು, ಆ ನಾರು ಬಟ್ಟೆಗಳೊಂದಿಗೆ ಇರದೇ, ಸುತ್ತಿ ಒಂದು ಕಡೆಯಲ್ಲಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ನೋಡಿದನು. 8ಆಗ ಸಮಾಧಿಯ ಬಳಿಗೆ ಮೊದಲು ಬಂದಿದ್ದ ಆ ಮತ್ತೊಬ್ಬ ಶಿಷ್ಯನು ಸಹ ಒಳಗೆ ಹೋಗಿ ಬಗ್ಗಿ ನೋಡಿ ನಂಬಿದನು. 9ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬುದಾಗಿ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು