ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 30 ಮಾರ್ಚ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 30 ಮಾರ್ಚ್ 2027
ಮಂಗಳವಾರ · ಪಾಸ್ಕದ ಅಷ್ಟದಿನ
ಹಬ್ಬಗಳು ಮತ್ತು ಸಂತರು
ಪಾಸ್ಕದ ಅಷ್ಟದಿನದ ಮಂಗಳವಾರ
ಮಹೋತ್ಸವ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
36“ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು. 37ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು; 38ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ. 39ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು. 40ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು, “ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿರಿ” ಎಂದು ಅವರನ್ನು ಎಚ್ಚರಿಸಿದನು. 41ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.
ಪ್ರತಿವಚನ ಕೀರ್ತನೆ
4ಯೆಹೋವನ ವಚನವು ಯಥಾರ್ಥವಾದದ್ದು; ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ. 5ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ. 18ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ. 19ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು. 20ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; ನಮ್ಮ ಸಹಾಯವೂ, ಗುರಾಣಿಯೂ ಆತನೇ. 22ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ; ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
ಸುವಾರ್ತೆ
11ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು. ಹೀಗೆ ಆಕೆ ಅಳುತ್ತಿರುವಾಗ ಸಮಾಧಿಯೊಳಗೆ ಬಗ್ಗಿ ನೋಡಲು, 12ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೇವದೂತರನ್ನು ಕಂಡಳು, ಅವರಲ್ಲಿ ಒಬ್ಬನು ಯೇಸುವಿನ ತಲೆಯ ಕಡೆಯಲ್ಲಿ ಮತ್ತೊಬ್ಬನು ಆತನು ಪಾದಗಳಿದ್ದ ಕಡೆಯಲ್ಲಿ ಕುಳಿತಿದ್ದರು. 13ಅವರು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು. 14ಆಕೆಯು ಹೀಗೆ ಹೇಳಿ ಹಿಂದಕ್ಕೆ ತಿರುಗಿದಾಗ ಯೇಸು ನಿಂತಿರುವುದನ್ನು ಕಂಡಳು, ಆದರೆ ಆತನು ಯೇಸುವೇ ಎಂದು ಆಕೆಗೆ ತಿಳಿಯಲಿಲ್ಲ. 15ಯೇಸು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ?” ಎಂದು ಕೇಳಲು, ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ, “ಅಯ್ಯಾ, ನೀನು ಆತನನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು, ನಾನು ಆತನನ್ನು ತೆಗೆದುಕೊಂಡು ಹೋಗುತ್ತೇನೆ” ಎಂದು ಹೇಳಿದಳು. 16ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು, ಆಕೆಯು ಅವನ ಕಡೆಗೆ ತಿರುಗಿ ಇಬ್ರಿಯ ಭಾಷೆಯಲ್ಲಿ ಆತನಿಗೆ, “ರಬ್ಬೂನಿ” ಎಂದಳು. ಹಾಗೆಂದರೆ ಗುರುವೇ ಎಂದರ್ಥ. 17ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು. 18ಮಗ್ದಲದ ಮರಿಯಳು ಹೋಗಿ “ನಾನು ಕರ್ತನನ್ನು ನೋಡಿದ್ದೇನೆ,” ಆತನು ಇಂಥಿಂಥದನ್ನು ನನಗೆ ಹೇಳಿದನು ಎಂದು ಶಿಷ್ಯರಿಗೆ ತಿಳಿಸಿದಳು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು