ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 30 ಮಾರ್ಚ್
ಆರ್ಥೊಡಾಕ್ಸ್ ಪಂಚಾಂಗ · ಮಾರ್ಚ್ 17 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 30 ಮಾರ್ಚ್ 2027
ಮಂಗಳವಾರ · ಮಹಾ ಉಪವಾಸದ ಮೂರನೆಯ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Venerable Alexis the Man of God († 411)
ಮಹಾ ಉಪವಾಸ ಕಾಲ
ಕಟ್ಟುನಿಟ್ಟಿನ ಉಪವಾಸ (ಒಣ ಆಹಾರ: ರೊಟ್ಟಿ, ತರಕಾರಿ, ಹಣ್ಣು)
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಆರನೆಯ ತಾಸು
9ಗರ್ವದಿಂದಲೂ, ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ, ಎಫ್ರಾಯೀಮ್ಯರಿಗೂ, ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವುದು. ಅದೇನೆಂದರೆ, 10“ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿ ಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು” ಎಂಬುದೇ. 11ಆದುದರಿಂದ ಯೆಹೋವನು ರೆಚೀನಿನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸಿದ್ದಾನೆ. 12ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ. 13ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ. 14ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು. 15ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು. 16ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ಅವರಿಂದ ನಡೆಸಲ್ಪಟ್ಟವರು ನಾಶವಾಗಿದ್ದಾರೆ. 17ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ. 18ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ, ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ. 19ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ. 20ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ. ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು. 21ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮ ಮನಸ್ಸೆಯನ್ನು ತಿಂದುಬಿಡುತ್ತದೆ. ಈ ಎರಡೂ ಒಟ್ಟಾಗಿ ಯೆಹೂದಕ್ಕೆ ವಿರುದ್ಧವಾಗಿರುವುದು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು. 10:1ಅಯ್ಯೋ, ಅನ್ಯಾಯವಾದ ತೀರ್ಪುಗಳನ್ನು ತೀರಿಸಿ, ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ. 2ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ, ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ. 3ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ? 4ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
ಸಂಧ್ಯಾ ಪ್ರಾರ್ಥನೆ: ವಾಚನ
1ಆಗ ಯೆಹೋವನು ನೋಹನಿಗೆ, “ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ. 2ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು. 3ಪಕ್ಷಿಗಳಲ್ಲಿಯೂ ಏಳೇಳು ಗಂಡು ಹೆಣ್ಣುಗಳನ್ನು ತೆಗೆದುಕೊಳ್ಳಬೇಕು. ಹೀಗೆ ಆಯಾ ಜಾತಿಯನ್ನು ಭೂಮಿಯ ಮೇಲೆ ಉಳಿಸಿ ಕಾಪಾಡಬೇಕು. 4ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಎಂದು ಹೇಳಿದನು. 5ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ನೋಹನು ಮಾಡಿದನು.
ಸಂಧ್ಯಾ ಪ್ರಾರ್ಥನೆ: ವಾಚನ
32ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ. 33ನನ್ನ ಉಪದೇಶವನ್ನು ಕೇಳಿರಿ, ಅದನ್ನು ಬಿಡದೆ ಜ್ಞಾನವಂತರಾಗಿರಿ. 34ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಿಲಿನ ನಿಲವುಗಳ ಹತ್ತಿರವಿದ್ದು, ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು. 35ಯಾವನು ನನ್ನನ್ನು ಹೊಂದುತ್ತಾನೋ ಅವನು ಜೀವವನ್ನು ಹೊಂದುತ್ತಾನೆ; ಅವನು ಯೆಹೋವನ ದಯೆಗೆ ಗುರಿಯಾಗುವನು. 36ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.” 9:1ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು, ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ. 2ಆಕೆ ಪಶುಗಳನ್ನು ಕೊಯಿಸಿ ಪಾನದ್ರವ್ಯಗಳೊಡನೆ ದ್ರಾಕ್ಷಾರಸವನ್ನು ಬೆರಸಿ, ಔತಣವನ್ನು ಸಿದ್ಧಪಡಿಸಿದ್ದಾಳೆ. 3ಆಕೆಯು ತನ್ನ ದಾಸಿಯರನ್ನು ಕಳುಹಿಸಿ, ಪಟ್ಟಣದ ರಾಜಮಾರ್ಗಗಳ ಮುಖ್ಯಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ. 4ಆಕೆಯು ಬುದ್ಧಿಹೀನರಿಗೆ, “ಮೂಢನಾಗಿರುವವನು ಈ ಕಡೆಗೆ ತಿರುಗಲಿ, 5ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರೆಸಿರುವ ದ್ರಾಕ್ಷಾರಸವನ್ನು ಕುಡಿಯಿರಿ. 6ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ. 7ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು. 8ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು. 9ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳಿವಳಿಕೆಯನ್ನು ಪಡೆಯುವನು. 10ಯೆಹೋವನ ಭಯವೇ ಜ್ಞಾನಕ್ಕೆ ಮೂಲವು, ಪರಿಶುದ್ಧ ದೇವರ ತಿಳಿವಳಿಕೆಯೇ ವಿವೇಕವು. 11ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಷ್ಯದ ವರ್ಷಗಳು ವೃದ್ಧಿಯಾಗುವವು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 17 ಮಾರ್ಚ್ ಎಂದರೆ ನಾಗರಿಕ ಪಂಚಾಂಗದ 30 ಮಾರ್ಚ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು