Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 31 ಮಾರ್ಚ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 31 ಮಾರ್ಚ್ 2027

ಬುಧವಾರ · ಪಾಸ್ಕದ ಅಷ್ಟದಿನ

ಹಬ್ಬಗಳು ಮತ್ತು ಸಂತರು

ಪಾಸ್ಕದ ಅಷ್ಟದಿನದ ಬುಧವಾರ

ಮಹೋತ್ಸವ · ಆರಾಧನಾ ಬಣ್ಣ: ಬಿಳಿ

ದಿನದ ವಾಚನಗಳು

ಮೊದಲನೆಯ ವಾಚನ

ಅ. ಕೃ 3:1–10

1ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು. 2ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು. 3ಅವನು ದೇವಾಲಯದೊಳಕ್ಕೆ ಹೋಗುತ್ತಿರುವ ಪೇತ್ರ ಮತ್ತು ಯೋಹಾನರನ್ನು ಕಂಡು ಭಿಕ್ಷೆ ಬೇಡಿದನು. 4ಪೇತ್ರ, ಯೋಹಾನರಿಬ್ಬರೂ ಅವನನ್ನು ದೃಷ್ಟಿಸಿ ನೋಡಿದರು. ಪೇತ್ರನು ಅವನಿಗೆ “ನಮ್ಮನ್ನು ನೋಡು” ಅಂದನು. 5ಅವನು ಅವರಿಂದ ಏನಾದರೂ ದೊರಕೀತೆಂದು ನಿರೀಕ್ಷಿಸಿ, ಅವರನ್ನು ಲಕ್ಷ್ಯವಿಟ್ಟು ನೋಡಿದನು. 6ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ, 7ಅವನನ್ನು ಬಲಗೈಹಿಡಿದು ಎತ್ತಿದನು. ತಕ್ಷಣವೇ ಅವನ ಅಂಗಾಲುಗಳಿಗೆ, ಮುಂಗಾಲುಗಳಿಗೆ ಹಾಗು ಹಿಮ್ಮಡಿಗಳಿಗೂ ಬಲಬಂದಿತು. 8ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ, ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು. 9ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರು ನೋಡಿ; 10ಇವನು ದೇವಾಲಯದ ಸುಂದರ ದ್ವಾರವೆಂಬ ಬಾಗಿಲಿನಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದವನೆಂದು ಗುರುತುಹಿಡಿದು, ಅವನಿಗೆ ಸಂಭವಿಸಿರುವ ಅದ್ಭುತಕಾರ್ಯಕ್ಕೆ ವಿಸ್ಮಯಗೊಂಡು ಬಹಳ ಬೆರಗಾದರು.

ಪ್ರತಿವಚನ ಕೀರ್ತನೆ

ಕೀರ್ತ 105:1–4, 6–9

1ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ; ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ. 2ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ. 3ಆತನ ಪರಿಶುದ್ಧ ನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ. 4ಯೆಹೋವನನ್ನೂ, ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ. 6ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ನೀವು ನೆನಪುಮಾಡಿಕೊಳ್ಳಿರಿ. 7ಯೆಹೋವನೆಂಬಾತನೇ ನಮ್ಮ ದೇವರು; ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ. 8ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ, ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ. 9ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ತನ್ನ ವಾಗ್ದಾನಗಳನ್ನು ಕೊಟ್ಟನು.

ಸುವಾರ್ತೆ

ಲೂಕ 24:13–35

13ಅದೇ ದಿನದಲ್ಲಿ ಶಿಷ್ಯರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳು ಮೈಲು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಾ, 14ಸಂಭವಿಸಿದ ಈ ಎಲ್ಲಾ ಕಾರ್ಯಗಳ ವಿಷಯವಾಗಿ ಸಂಭಾಷಣೆಮಾಡುತ್ತಿದ್ದರು. 15ಅವರು ಸಂಭಾಷಣೆಯಲ್ಲಿ ಚರ್ಚಿಸುತ್ತಿರುವಾಗ ಯೇಸು ತಾನೇ ಹತ್ತಿರಕ್ಕೆ ಬಂದು ಅವರ ಜೊತೆಯಲ್ಲಿ ಸಾಗಿದನು. 16ಅವರ ಕಣ್ಣುಕಟ್ಟಿದಂತೆ ಇದುದ್ದರಿಂದ ಅವರು ಆತನ ಗುರುತನ್ನು ಹಿಡಿಯಲಿಲ್ಲ. 17ಯೇಸು, “ನೀವು ಮಾರ್ಗದಲ್ಲಿ ಹೋಗುತ್ತಾ ಚರ್ಚಿಸಿ ಮಾತನಾಡಿಕೊಳ್ಳುವ ಈ ಸಂಗತಿಗಳೇನು” ಎಂದು ಕೇಳಲು, ಅವರು ದುಃಖದ ಮುಖವುಳ್ಳವರಾಗಿ ನಿಂತರು. 18ಅವರಲ್ಲಿ ಕ್ಲೆಯೋಫನೆಂಬವನು ಆತನಿಗೆ, “ಯೆರೂಸಲೇಮಿಗೆ ಬಂದ ಪರಸ್ಥಳದವರೆಲ್ಲರಿಗೂ ಈ ದಿನಗಳಲ್ಲಿ ನಡೆದಿರುವ ಸಂಗತಿಗಳು ಗೊತ್ತಿರಲಾಗಿ ನಿನಗೆ ಮಾತ್ರ ಗೊತ್ತಿಲ್ಲವೋ?” ಎಂದು ಕೇಳಲು, 19ಆತನು ಅವರನ್ನು, “ಯಾವ ಸಂಗತಿಗಳು” ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು. 20ಆತನನ್ನು ಮುಖ್ಯಯಾಜಕರೂ ನಮ್ಮ ಅಧಿಕಾರಿಗಳೂ ಮರಣದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿಸಿದರು. 21ನಾವಾದರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಇಂದಿಗೆ ಮೂರನೆಯ ದಿನ. 22ಆದರೆ ನಮ್ಮಲ್ಲಿ ಕೆಲವು ಮಂದಿ ಸ್ತ್ರೀಯರು ಬೆಳಗಾಗುವಾಗ ಸಮಾಧಿಯ ಬಳಿಗೆ ಹೋಗಿ ಆತನ ದೇಹವನ್ನು ಕಾಣದೇ, ಅಲ್ಲಿಂದ ಬಂದು ತಮಗೆ ದೇವದೂತರ ದರ್ಶನವಾಯಿತೆಂತಲೂ, ಆತನು ಬದುಕಿದ್ದಾನೆಂದು ಅವರು ಹೇಳಿದರೆಂತಲೂ ತಿಳಿಸಿ ನಮಗೆ ಅತ್ಯಾಶ್ಚರ್ಯವನ್ನುಂಟುಮಾಡಿದರು. 24ನಮ್ಮ ಸಂಗಡ ಇದ್ದವರಲ್ಲಿ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದ ಪ್ರಕಾರವೇ ಕಂಡರು. ಆತನನ್ನು ಮಾತ್ರ ಕಾಣಲಿಲ್ಲ” ಎಂದು ಹೇಳಿದರು. 25ಯೇಸು ಅವರಿಗೆ, “ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ, 26ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ” ಎಂದು ಹೇಳಿದನು. 27ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು. 28ಅವರು ಹೋಗುತ್ತಿರುವ ಹಳ್ಳಿಯ ಸಮೀಪಕ್ಕೆ ಬಂದಾಗ ಆತನು ಅವರನ್ನು ದಾಟಿ ಇನ್ನೂ ಮುಂದಕ್ಕೆ ಹೋಗುವವನಂತೆ ತೋರ್ಪಡಿಸಿಕೊಂಡನು. 29ಆದರೆ ಅವರು, “ನಮ್ಮ ಸಂಗಡ ಇರು. ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂದಿತು” ಎಂದು ಆತನಿಗೆ ಹೇಳಿ ಬಲವಂತ ಮಾಡಲು, ಆತನು ಅವರ ಕೂಡ ಇರುವುದಕ್ಕೆ ಹೋದನು. 30ಆತನು ಅವರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ, ಮುರಿದು ಅವರಿಗೆ ಕೊಡುತ್ತಿರಲಾಗಿ, 31ಅವರ ಕಣ್ಣುಗಳು ತೆರೆದವು. ಆಗ ಅವರು ಆತನ ಗುರುತು ಹಿಡಿದರು. ಆತನು ಅವರ ಕಣ್ಣಿಗೆ ಕಾಣದಂತೆ ಮಾಯವಾದನು. 32ಆಗ ಅವರು ಒಬ್ಬರಿಗೊಬ್ಬರು, “ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?” ಎಂದು ಹೇಳಿಕೊಂಡು, 33ಅದೇ ಗಳಿಗೆಯಲ್ಲಿ ಎದ್ದು ಯೆರೂಸಲೇಮಿಗೆ ಹಿಂತಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡ ಇದ್ದವರೂ ಒಟ್ಟಾಗಿ ಕೂಡಿಕೊಂಡಿದ್ದರು. 34“ಕರ್ತನು ಎದ್ದದ್ದು ನಿಜ. ಆತನು ಸೀಮೋನನಿಗೆ ಕಾಣಿಸಿಕೊಂಡನು” ಎಂದು ಹೇಳುತ್ತಿದ್ದರು. 35ಆಗ ಅವರಿಬ್ಬರು ದಾರಿಯಲ್ಲಿ ನಡೆದ ಸಂಗತಿಯನ್ನೂ ರೊಟ್ಟಿ ಮುರಿಯುವುದರಲ್ಲಿ ತಾವು ಆತನ ಗುರುತು ಹಿಡಿದೆವೆಂಬುದನ್ನೂ ವಿವರಿಸಿದರು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು