ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮಾರ್ಚ್ 2027 › 31 ಮಾರ್ಚ್
ಆರ್ಥೊಡಾಕ್ಸ್ ಪಂಚಾಂಗ · ಮಾರ್ಚ್ 18 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 31 ಮಾರ್ಚ್ 2027
ಬುಧವಾರ · ಮಹಾ ಉಪವಾಸದ ಮೂರನೆಯ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Holy Hierarch Cyrill, Archbishop of Jerusalem († 386)
ಮಹಾ ಉಪವಾಸ ಕಾಲ
ಕಟ್ಟುನಿಟ್ಟಿನ ಉಪವಾಸ (ಒಣ ಆಹಾರ: ರೊಟ್ಟಿ, ತರಕಾರಿ, ಹಣ್ಣು)
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಆರನೆಯ ತಾಸು
12ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.” 13ಏಕೆಂದರೆ ಅವನು ತನ್ನೊಳಗೆ, “ನನ್ನ ಜ್ಞಾನ, ಭುಜಬಲಗಳಿಂದಲೇ ಇದನ್ನು ಮಾಡಿದ್ದೇನೆ. ನಾನೇ ವಿವೇಕವುಳ್ಳ ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ, ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ. 14ಜನಗಳ ಆಸ್ತಿಪಾಸ್ತಿಯು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ. ಪಕ್ಷಿಯು ಇಟ್ಟುಹೋದ ಮೊಟ್ಟೆಗಳನ್ನು ಸಂಗ್ರಹಿಸಿಕೊಳ್ಳುವವನಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ. ರೆಕ್ಕೆಯಾಡಿಸಿ, ಬಾಯಿ ತೆರೆದು ಕಿಚುಗುಟ್ಟುವವರು ಯಾರೂ ಇಲ್ಲ” ಎಂದು ಅಂದುಕೊಂಡನು. 15ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು. 16ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು. 17ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು. ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು. 18ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು. 19ಅದರ ವನವೃಕ್ಷಗಳ ಸಂಖ್ಯೆಯು ಒಂದು ಚಿಕ್ಕಮಗುವೂ ಸಹ ಎಣಿಸಿ ಬರೆಯುವಷ್ಟು ಕಡಿಮೆಯಾಗುವುದು. 20ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.
ಸಂಧ್ಯಾ ಪ್ರಾರ್ಥನೆ: ವಾಚನ
6ಭೂಮಿಯ ಮೇಲೆ ಜಲಪ್ರಳಯವುಂಟಾದಾಗ ನೋಹನು ಆರುನೂರು ವರ್ಷದವನಾಗಿದ್ದನು. 7ಆಗ ನೋಹನು ಪ್ರಳಯದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಿದನು. 8ದೇವರು ನೋಹನಿಗೆ ಅಪ್ಪಣೆಕೊಟ್ಟಂತೆ ಶುದ್ಧ, ಅಶುದ್ಧ, ಪಶು ಪಕ್ಷಿಗಳಲ್ಲಿಯೂ ಕ್ರಿಮಿಕೀಟಗಳಲ್ಲಿಯೂ 9ಗಂಡು ಹೆಣ್ಣುಗಳು ಜೋಡಿ ಜೋಡಿಯಾಗಿ ಬಂದು ದೇವರ ಅಪ್ಪಣೆಯಂತೆ ನೋಹನ ನಾವೆಯಲ್ಲಿ ಸೇರಿದವು.
ಸಂಧ್ಯಾ ಪ್ರಾರ್ಥನೆ: ವಾಚನ
12ನೀನು ಜ್ಞಾನವಂತನಾದರೆ ನಿನ್ನ ಜ್ಞಾನವು ನಿನಗೇ ಲಾಭಕರ, ಧರ್ಮನಿಂದಕನಾದರೆ ನೀನೇ ಅದರ ಫಲವನ್ನು ಅನುಭವಿಸುವಿ. 13ಅಜ್ಞಾನವೆಂಬವಳಾದರೋ ಕೂಗಾಟದವಳು, ಮೂಢಳು, ಏನೂ ತಿಳಿಯದವಳು. 14ಅವಳು ತನ್ನ ಮನೆಯ ಬಾಗಿಲಿನಲ್ಲಿ, ಪಟ್ಟಣದ ರಾಜಮಾರ್ಗಗಳಲ್ಲಿ ಪೀಠದ ಮೇಲೆ ಕುಳಿತುಕೊಂಡವಳಾಗಿ, 15ತಮ್ಮ ಮಾರ್ಗವನ್ನು ಹಿಡಿದು, ಹೋಗಿ ಬರುವವರನ್ನು ನೋಡಿ, 16“ಮೂಢನಾಗಿರುವವನು ಈ ಕಡೆಗೆ ತಿರುಗಲಿ” ಎಂದು ಕೂಗಿ, 17“ಕದ್ದ ನೀರು ಸಿಹಿಯಾಗಿದೆ, ಗುಟ್ಟಾಗಿ ತಿನ್ನುವ ತಿಂಡಿಯು ರುಚಿಯಾಗಿದೆ” ಎಂದು ಬುದ್ಧಿಹೀನನಿಗೆ ಹೇಳುತ್ತಾಳೆ. 18ಆ ಮನೆಯು ಪ್ರೇತ ನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 18 ಮಾರ್ಚ್ ಎಂದರೆ ನಾಗರಿಕ ಪಂಚಾಂಗದ 31 ಮಾರ್ಚ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು