Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 1 ಏಪ್ರಿಲ್

ಆರ್ಥೊಡಾಕ್ಸ್ ಪಂಚಾಂಗ · ಮಾರ್ಚ್ 19 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 1 ಏಪ್ರಿಲ್ 2027

ಗುರುವಾರ · ಮಹಾ ಉಪವಾಸದ ಮೂರನೆಯ ವಾರ · ಸ್ವರ 2

ಹಬ್ಬಗಳು ಮತ್ತು ಸಂತರು

Holy Martyrs Chrysanthus and Daria and with them Martyrs Claudius the Tribune with his wife Hilaria and their sons Jason and Maurus, and Diodorus the Priest and Marianus the Deacon at Rome († 283)

ಮಹಾ ಉಪವಾಸ ಕಾಲ

ಕಟ್ಟುನಿಟ್ಟಿನ ಉಪವಾಸ (ಒಣ ಆಹಾರ: ರೊಟ್ಟಿ, ತರಕಾರಿ, ಹಣ್ಣು)

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಆರನೆಯ ತಾಸು

ಯೆಶಾ 11:10–12:2

10ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು. 11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು. 12ಅವನು ಜನಾಂಗಗಳಲ್ಲಿ ಧ್ವಜವನ್ನೆತ್ತಿ, ಇಸ್ರಾಯೇಲರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ, ಯೆಹೂದದಿಂದ ಚದರಿದವರನ್ನೂ ಭೂಮಿಯ ನಾಲ್ಕು ಕಡೆಗಳಿಂದಲೂ ಕೂಡಿಸುವನು. 13ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗುವುದು. ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು. ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದವು ಎಫ್ರಾಯೀಮನ್ನು ವಿರೋಧಿಸುವುದಿಲ್ಲ. 14ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು. ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು. 15ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೆಟಿಸ್ ನದಿಯ ಮೇಲೆ ಕೈ ಜಾಡಿಸಿ, ತನ್ನ ಬಿಸಿಗಾಳಿಯಿಂದ ಅದನ್ನು ಏಳು ನದಿಗಳನ್ನಾಗಿ ಒಡೆದು, ಜನರ ಪಾದರಕ್ಷೆಗಳು ನೆನೆಯದಂತೆ ಅವರನ್ನು ದಾಟಿಸುವನು. 16ಇದಲ್ಲದೆ ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ, ತಪ್ಪಿಸಿಕೊಂಡು ಬರುವ ಆತನ ಉಳಿದ ಜನರಿಗೆ ಆತನ ರಾಜಮಾರ್ಗವು ಸಿದ್ಧವಾಗುವುದು. 12:1ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ. 2ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”

ಸಂಧ್ಯಾ ಪ್ರಾರ್ಥನೆ: ವಾಚನ

ಆದಿ 7:11–8:3

11ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು. 12ನಲ್ವತ್ತು ದಿನ ಹಗಲಿರುಳು ಭೂಮಿಯ ಮೇಲೆ ಬಿರುಮಳೆ ಸುರಿಯಿತು. 13ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯೆಫೆತರೆಂಬ ಅವನ ಮಕ್ಕಳು, ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು. 14ಎಲ್ಲಾ ಪ್ರಾಣಿಗಳಲ್ಲಿ ಅಂದರೆ ಸಕಲ ಜಾತಿಯ ಮೃಗ, ಪಶು, ಕ್ರಿಮಿಕೀಟಗಳಲ್ಲಿಯೂ ಪಕ್ಷಿ ಮೊದಲಾದ ರೆಕ್ಕೆಯಿರುವ ಎಲ್ಲಾ ಜೀವಿಗಳಲ್ಲಿಯೂ 15ಎರಡೆರಡು ತಮ್ಮ ತಮ್ಮ ಜಾತಿಗನುಸಾರವಾಗಿ ನೋಹನ ಬಳಿಗೆ ಬಂದು ನಾವೆಯಲ್ಲಿ ಸೇರಿದವು. 16ದೇವರು ನೋಹನಿಗೆ ಅಪ್ಪಣೆ ಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗೆ ಇಟ್ಟು ಬಾಗಿಲನ್ನು ಮುಚ್ಚಿದನು. 17ಜಲಪ್ರಳಯವು ನಲ್ವತ್ತು ದಿನ ಭೂಮಿಯ ಮೇಲೆ ಬಂದು ನೀರು ಹೆಚ್ಚುತ್ತಾ ನಾವೆಯನ್ನು ಮೇಲಕ್ಕೆ ಎತ್ತಲು ಅದು ನೀರಿನ ಮೇಲೆ ತೇಲಾಡಿತು. 18ನೀರು ಪ್ರಬಲವಾಗಿ ಭೂಮಿಯ ಮೇಲೆ ಹೆಚ್ಚಲು ನಾವೆಯು ಅದರ ಮೇಲೆ ಚಲಿಸಿತು. 19ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾಗಿದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಹೋದವು. 20ನೀರು ಆ ಬೆಟ್ಟಗಳಿಂತಲೂ ಹದಿನೈದು ಮೊಳ ಮೇಲಕ್ಕೆ ಹೆಚ್ಚಲು ಅವುಗಳು ಸಂಪೂರ್ಣ ಮುಚ್ಚಿಹೋದುದರಿಂದ, 21ಪಶು, ಪಕ್ಷಿ, ಮೃಗ, ಕ್ರಿಮಿಕೀಟಗಳು ಮನುಷ್ಯರ ಸಹಿತವಾಗಿ ಭೂಮಿಯ ಮೇಲೆ ಚಲಿಸುವ ಸಕಲ ಭೂಜಂತುಗಳೆಲ್ಲವೂ ನಾಶವಾದವು. 22ಮೂಗಿನಿಂದ ಉಸಿರಾಡುವ ಭೂಜಂತುಗಳೆಲ್ಲವೂ ಸತ್ತವು. 23ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು. 24ಪ್ರಳಯದ ನೀರು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲವಾಗಿ ನಿಂತಿತು. 8:1ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು. 2ಭೂಮಿಯ ಅಡಿಯಲ್ಲಿದ್ದ ಸಾಗರದ ಸೆಲೆಗಳೂ ಆಕಾಶದ ತೂಬುಗಳೂ ಮುಚ್ಚಿಕೊಂಡವು. ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತು ಹೋಯಿತು. ಭೂಮಿಯ ಮೇಲಿದ್ದ ನೀರು ಕ್ರಮೇಣವಾಗಿ ತಗ್ಗುತ್ತಾ ಬಂತು. 3ಹೀಗೆ ನೂರೈವತ್ತು ದಿನಗಳಾದ ಮೇಲೆ ನೀರು ಕಡಿಮೆಯಾಯಿತು.

ಸಂಧ್ಯಾ ಪ್ರಾರ್ಥನೆ: ವಾಚನ

ಜ್ಞಾನೋ 10:1–22

1ಜ್ಞಾನಿಯಾದ ಮಗನಿಂದ ತಂದೆಗೆ ಆನಂದ, ಅಜ್ಞಾನಿಯಾದ ಮಗನಿಂದ ತಾಯಿಗೆ ದುಃಖ. 2ಅನ್ಯಾಯದ ಸಂಪತ್ತು ವ್ಯರ್ಥ, ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು. 3ಯೆಹೋವನು ನೀತಿವಂತರನ್ನು ಹಸಿವೆಗೊಳಿಸನು, ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ. 4ಜೋಲುಗೈ ದಾರಿದ್ರ್ಯ, ಚುರುಕು ಕೈ ತರುವುದು ಐಶ್ವರ್ಯ. 5ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು, ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು. 6ಶಿಷ್ಟನ ತಲೆ ಆಶೀರ್ವಾದದ ನೆಲೆ, ದುಷ್ಟನ ಬಾಯಿಗೆ ಬಲಾತ್ಕಾರವೇ ಮುಚ್ಚಳ. 7ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ, ದುಷ್ಟರ ನಾಮವು ನಿರ್ನಾಮಕಾಸ್ಪದ. 8ಜ್ಞಾನಹೃದಯನು ಆಜ್ಞೆಗಳನ್ನು ಪಾಲಿಸುವನು, ಹರಟೆಯ ಮೂರ್ಖನು ಕೆಡವಲ್ಪಡುವನು. 9ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು. 10ಕಣ್ಣು ಮಿಟಕಿಸುವವನು ಕಷ್ಟಕ್ಕೆ ಕಾರಣನು, ಧೈರ್ಯದಿಂದ ಗದರಿಸುವವನು ಸಮಾಧಾನಕರನು. 11ಶಿಷ್ಟನ ಬಾಯಿ ಜೀವದ ಬುಗ್ಗೆ, ದುಷ್ಟನ ಬಾಯಲ್ಲಿ ಬಲಾತ್ಕಾರವು ತುಂಬಿ ತುಳುಕುತ್ತದೆ. 12ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ. 13ವಿವೇಕಿಯ ತುಟಿಗಳಿಂದ ಜ್ಞಾನ, ಬುದ್ಧಿಹೀನನ ಬೆನ್ನಿಗೆ ಬೆತ್ತ. 14ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವುದಿಲ್ಲ, ಮೂರ್ಖನ ಭಾಷಣ ನಾಶನಕ್ಕೆ ಸಮೀಪ. 15ಐಶ್ವರ್ಯವಂತನಿಗೆ ಐಶ್ವರ್ಯವು ಬಲವಾದ ಕೋಟೆ, ಬಡವನಿಗೆ ಅವನ ಬಡತನವೇ ನಾಶನ. 16ಶಿಷ್ಟನ ದುಡಿತ ಜೀವಾಸ್ಪದ, ದುಷ್ಟನ ಆದಾಯ ಪಾಪಾಸ್ಪದ. 17ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು, ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು. 18ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ, ಚಾಡಿಗಾರನು ಜ್ಞಾನಹೀನ. 19ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ. 20ಶಿಷ್ಟರ ನಾಲಿಗೆ ಚೊಕ್ಕ ಬೆಳ್ಳಿ, ದುಷ್ಟನ ಹೃದಯ ಮೌಲ್ಯವಿಲ್ಲದ್ದು. 21ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ. 22ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 19 ಮಾರ್ಚ್ ಎಂದರೆ ನಾಗರಿಕ ಪಂಚಾಂಗದ 1 ಏಪ್ರಿಲ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು