ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 2 ಏಪ್ರಿಲ್
ಆರ್ಥೊಡಾಕ್ಸ್ ಪಂಚಾಂಗ · ಮಾರ್ಚ್ 20 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 2 ಏಪ್ರಿಲ್ 2027
ಶುಕ್ರವಾರ · ಮಹಾ ಉಪವಾಸದ ಮೂರನೆಯ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Venerable Fathers slain at the Monastery of Saint Sabbas: John, Sergius, Patrick and others († 796)
ಮಹಾ ಉಪವಾಸ ಕಾಲ
ಕಟ್ಟುನಿಟ್ಟಿನ ಉಪವಾಸ (ಒಣ ಆಹಾರ: ರೊಟ್ಟಿ, ತರಕಾರಿ, ಹಣ್ಣು)
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಆರನೆಯ ತಾಸು
2ಶತ್ರುಗಳು ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ, ಬೋಳು ಬೆಟ್ಟದ ಮೇಲೆ ಧ್ವಜವೆತ್ತಿ ಕೂಗಿರಿ, ಅವರನ್ನು ಕೈಬೀಸಿ ಕರೆಯಿರಿ. 3ನಾನು ಆರಿಸಿಕೊಂಡ ಪರಿಶುದ್ಧರಿಗೆ ಅಪ್ಪಣೆ ಕೊಟ್ಟಿದ್ದೇನೆ. ಹೌದು, ನನ್ನ ಜಯದಲ್ಲಿ ಹೆಮ್ಮೆಪಡುವವರು, ನನ್ನ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆದಿದ್ದೇನೆ. 4ಆಹಾ, ಬಹುಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! ಇಗೋ, ಜನಾಂಗಗಳ ಆರ್ಭಟವು ಒಟ್ಟಿಗೆ ಕೂಡಿಕೊಂಡ ಅನೇಕ ರಾಜ್ಯಗಳ ಆರ್ಭಟದಂತೆ ಇದೆ! ಯೆಹೋವನು ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡುತ್ತಾನೆ. 5ಯೆಹೋವನು ತಾನು ನ್ಯಾಯ ತೀರಿಸುವ ಆಯುಧಗಳೊಡನೆ ದೂರ ದೇಶದಿಂದ ಅಂದರೆ, ಆಕಾಶ ಮಂಡಲದ ಕಟ್ಟಕಡೆಯಿಂದ ಭೂಮಿಯನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾನೆ. 6ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು. 7ಆದುದರಿಂದ ಎಲ್ಲರ ಕೈಗಳು ಜೋಲು ಬೀಳುವುದು. ಎಲ್ಲರ ಹೃದಯವು ಕರಗಿ ನೀರಾಗುವುದು. 8ಅವರು ಭಯಪಡುವರು. ಪ್ರಸವ ವೇದನೆಯಲ್ಲಿರುವ ಸ್ತ್ರೀಯಂತೆ ಯಾತನೆ, ಸಂಕಟಗಳನ್ನು ಅನುಭವಿಸುವರು. ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು. ಅವರ ಮುಖಗಳು ತಲ್ಲಣಗೊಂಡು ಬೆಂಕಿಯಿಂದ ಉರಿಯುವವು. 9ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ, ಪಾಪಿಗಳನ್ನು ನಿರ್ಮೂಲಮಾಡುವುದಕ್ಕೆ ಆತನ ಕೋಪೋದ್ರೇಕದಿಂದಲೂ, ತೀಕ್ಷ್ಣವಾದ ರೋಷದಿಂದಲೂ ಕ್ರೂರವಾಗಿರುವುದು. 10ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ಪ್ರಕಾಶಿಸುವುದಿಲ್ಲ. 11ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು. 12ಮನುಷ್ಯರನ್ನು ಚೊಕ್ಕ ಬಂಗಾರಕ್ಕಿಂತಲೂ ಮತ್ತು ಓಫೀರಿನ ಬಂಗಾರಕ್ಕಿಂತಲೂ ವಿರಳವಾಗುವಂತೆ ಮಾಡುವೆನು. 13ಆದುದರಿಂದ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ತೀಕ್ಷ್ಣರೋಷದಿಂದ ಆಕಾಶಮಂಡಲವನ್ನು ನಡುಗಿಸಿ, ಭೂಲೋಕವನ್ನು ಅದರ ಸ್ಥಳದಿಂದ ಕದಲಿಸಿ ನಡುಗಿಸುವೆನು.
ಸಂಧ್ಯಾ ಪ್ರಾರ್ಥನೆ: ವಾಚನ
4ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟದಲ್ಲಿ ನಿಂತಿತು. 5ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂದಿತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು. 6ನಲ್ವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು ಕಾಗೆಯೊಂದನ್ನು ಹೊರಕ್ಕೆ ಬಿಟ್ಟನು. 7ಭೂಮಿಯ ಮೇಲಿದ್ದ ನೀರು ಒಣಗುವ ತನಕ ಆ ಕಾಗೆ ಹೋಗುತ್ತಾ ಬರುತ್ತಾ ಇತ್ತು. 8ಹೀಗಿರಲಾಗಿ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನೋಹನು ಪಾರಿವಾಳವೊಂದನ್ನು ಹೊರಕ್ಕೆ ಬಿಟ್ಟನು. 9ಆದರೆ ನೀರು ಭೂಮಿಯ ಮೇಲೆಲ್ಲಾ ಇದ್ದುದರಿಂದ ಪಾರಿವಾಳವು ಕಾಲಿಡುವುದಕ್ಕೆ ಸ್ಥಳ ಕಾಣದೆ ತಿರುಗಿ ನಾವೆಗೆ ಬಂದಿತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು. 10ಅವನು ಇನ್ನೂ ಏಳು ದಿನಗಳ ನಂತರ ಪಾರಿವಾಳವನ್ನು ತಿರುಗಿ ಹೊರಕ್ಕೆ ಬಿಟ್ಟನು. 11ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ಹಿಂತಿರುಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೆ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದು ಹೋಯಿತೆಂದು ತಿಳಿದುಕೊಂಡನು. 12ಮತ್ತೆ ಏಳು ದಿನದ ಮೇಲೆ ಪಾರಿವಾಳವನ್ನು ಬಿಡಲು ಅದು ಅವನ ಬಳಿಗೆ ಹಿಂತಿರುಗಿ ಬರಲೇ ಇಲ್ಲ. 13ಆರುನೂರ ಒಂದನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಾಕ್ಷಿಯನ್ನು ತೆಗೆದು ನೋಡಲಾಗಿ, ಆಹಾ, ಭೂಮಿಯು ಪೂರ್ಣವಾಗಿ ಒಣಗಿತ್ತು. 14ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿ ಒಣಗಿತ್ತು. 15ಆಗ ದೇವರು ನೋಹನಿಗೆ, 16“ನೀನು, ನಿನ್ನ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ; 17ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ” ಎಂದು ಹೇಳಿದನು. 18ನೋಹನು ಹೆಂಡತಿ ಮಕ್ಕಳು ಸೊಸೆಯರು ಸಹಿತವಾಗಿ ಹೊರಗೆ ಬಂದನು. 19ಎಲ್ಲಾ ಮೃಗಗಳು, ಪಶು ಪಕ್ಷಿಗಳು, ಕ್ರಿಮಿಕೀಟಗಳ ಸಹಿತವಾಗಿ ತಮ್ಮತಮ್ಮ ಜಾತಿಗನುಸಾರವಾಗಿ ನಾವೆಯಿಂದ ಹೊರಗೆ ಬಂದವು. 20ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು. 21ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.
ಸಂಧ್ಯಾ ಪ್ರಾರ್ಥನೆ: ವಾಚನ
31ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವುದು, ನೀಚನ ನಾಲಿಗೆ ಕತ್ತರಿಸಲ್ಪಡುವುದು. 32ಶಿಷ್ಟನ ತುಟಿಯಲ್ಲಿ ಹಿತವಚನ, ದುಷ್ಟನ ಬಾಯಲ್ಲಿ ನೀಚವಚನ. 11:1ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ. 2ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ, ದೀನತೆಯಲ್ಲಿ ಸುಜ್ಞಾನ. 3ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ, ವಂಚಕರಿಗೆ ವಕ್ರತೆಯು ನಾಶನ. 4ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ. 5ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವುದು, ದುಷ್ಟನು ತನ್ನ ದೋಷದಿಂದಲೇ ಬಿದ್ದುಹೋಗುವನು. 6ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು, ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು. 7ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವುದು, ಬಲದ ಮೇಲಣ ನಂಬಿಕೆಯು ಬಿದ್ದುಹೋಗುವುದು. 8ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು. 9ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು, ಶಿಷ್ಟನು ತಿಳಿವಳಿಕೆಯಿಂದ ಉದ್ಧಾರವಾಗುವನು. 10ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ. 11ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಉನ್ನತಿಗೆ ಬರುವುದು, ಕೆಟ್ಟವರ ಬಾಯಿಂದ ಕೆಡವಲ್ಪಡುವುದು. 12ನೆರೆಯವನನ್ನು ಹೀನೈಸುವವನು ಬುದ್ಧಿಹೀನನು, ವಿವೇಕಿಯು ಮೌನವಾಗಿರುವನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 20 ಮಾರ್ಚ್ ಎಂದರೆ ನಾಗರಿಕ ಪಂಚಾಂಗದ 2 ಏಪ್ರಿಲ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು