ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 3 ಏಪ್ರಿಲ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 3 ಏಪ್ರಿಲ್ 2027
ಶನಿವಾರ · ಪಾಸ್ಕದ ಅಷ್ಟದಿನ
ಹಬ್ಬಗಳು ಮತ್ತು ಸಂತರು
ಪಾಸ್ಕದ ಅಷ್ಟದಿನದ ಶನಿವಾರ
ಮಹೋತ್ಸವ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
13ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು. 14ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು. ಮತ್ತು ಕ್ಷೇಮ ಹೊಂದಿದ ಆ ಮನುಷ್ಯನು ಅವರ ಸಂಗಡ ನಿಂತಿರುವುದನ್ನು ನೋಡಿ ಪ್ರತಿಯಾಗಿ ಏನೂ ಮಾತನಾಡಲಾರದೆ ಇದ್ದರು. 15ಆ ಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆ ಕೊಟ್ಟು,, 16“ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ. 17ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.” 18ಆಗ ಅವರನ್ನು ಕರೆಯಿಸಿ ಯೇಸುವಿನ ಹೆಸರನ್ನು ಎಲ್ಲೂ ಎತ್ತಬಾರದು ಹಾಗು ಉಪದೇಶ ಮಾಡಬಾರದು ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟರು. 19ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ; 20ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು” ಎಂದು ಉತ್ತರಕೊಟ್ಟರು. 21ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.
ಪ್ರತಿವಚನ ಕೀರ್ತನೆ
1ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿದೆ. 14ನನ್ನ ಬಲವು, ಕೀರ್ತನೆಯು ಯೆಹೋವನೇ; ಆತನಿಂದ ನನಗೆ ರಕ್ಷಣೆಯುಂಟಾಯಿತು. 15ಉತ್ಸಾಹಧ್ವನಿಯು, ಜಯಘೋಷವು ನೀತಿವಂತರ ಗುಡಾರಗಳಲ್ಲಿವೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ. 16ಯೆಹೋವನ ಬಲಗೈ ಉನ್ನತವಾಗಿದೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ. 18ಯೆಹೋವನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಆದರೆ ಮರಣಕ್ಕೆ ಒಪ್ಪಿಸಲಿಲ್ಲ. 19ನೀತಿದ್ವಾರಗಳನ್ನು ತೆರೆಯಿರಿ; ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು. 20ಇದು ಯೆಹೋವನ ಮಂದಿರದ್ವಾರವು; ಇದರೊಳಗೆ ಪ್ರವೇಶಿಸತಕ್ಕವರು ನೀತಿವಂತರೇ. 21ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ, ನಿನ್ನನ್ನು ಕೊಂಡಾಡುತ್ತೇನೆ.
ಸುವಾರ್ತೆ
9ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು. 10ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಅವರು ಶೋಕಿಸುತ್ತಾ ಅಳುತ್ತಿದ್ದರು. 11“ಆತನು ಬದುಕಿದ್ದಾನೆ ನನಗೆ ಕಾಣಿಸಿಕೊಂಡನು” ಎಂದು ಅವಳು ಹೇಳಿದ ಮಾತನ್ನು ಅವರು ನಂಬಲಿಲ್ಲ. 12ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು. 13ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಶಿಷ್ಯರು ಅವರನ್ನೂ ನಂಬಲಿಲ್ಲ. 14ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು. 15ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು