ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 4 ಏಪ್ರಿಲ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 4 ಏಪ್ರಿಲ್ 2027
ಭಾನುವಾರ · ಪಾಸ್ಕ ಕಾಲದ ಎರಡನೆಯ ವಾರ
ಹಬ್ಬಗಳು ಮತ್ತು ಸಂತರು
ಪಾಸ್ಕ ಕಾಲದ ಎರಡನೆಯ ಭಾನುವಾರ (ದೈವಿಕ ಕರುಣೆಯ ಭಾನುವಾರ)
ಭಾನುವಾರ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
32ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು. 33ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು. 34ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು 35ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯಕತೆಗೆ ತಕ್ಕಂತೆ ಹಂಚಿ ಕೊಡುತ್ತಿದ್ದರು.
ಪ್ರತಿವಚನ ಕೀರ್ತನೆ
2ಇಸ್ರಾಯೇಲರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. 3ಆರೋನನ ಮನೆತನದವರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. 4ಯೆಹೋವನ ಭಕ್ತರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. 16ಯೆಹೋವನ ಬಲಗೈ ಉನ್ನತವಾಗಿದೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ. 17ನಾನು ಸಾಯುವುದಿಲ್ಲ; ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು. 18ಯೆಹೋವನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಆದರೆ ಮರಣಕ್ಕೆ ಒಪ್ಪಿಸಲಿಲ್ಲ. 22ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು; 23ಇದು ಯೆಹೋವನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ. 24ಈ ದಿನವು ಯೆಹೋವನಿಂದಲೇ ನೇಮಕವಾದದ್ದು; ಇದರಲ್ಲಿ ನಾವು ಉಲ್ಲಾಸದಿಂದ ಆನಂದಿಸೋಣ.
ಎರಡನೆಯ ವಾಚನ
1ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ. 2ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ. 3ದೇವರ ಮೇಲಿನ ಪ್ರೀತಿ ಏನೆಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವುದೇ. ಆತನ ಆಜ್ಞೆಗಳು ಕಷ್ಟಕರವಾದವುಗಳಲ್ಲ. 4ಏಕೆಂದರೆ ದೇವರಿಂದ ಹುಟ್ಟಿದವನು ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದ್ದು ನಮ್ಮ ನಂಬಿಕೆಯೇ. 5ಯೇಸುಕ್ರಿಸ್ತನು ದೇವರ ಮಗನೆಂದು ಒಪ್ಪಿಕೊಂಡು ನಂಬಿದವರಲ್ಲದೆ ಮತ್ತಾರು ಲೋಕವನ್ನು ಜಯಿಸಿದವರಾಗಿದ್ದಾರೆ? 6ಈತನು ಅಂದರೆ ಯೇಸು ಕ್ರಿಸ್ತನು ನೀರಿನಿಂದಲೂ, ರಕ್ತದಿಂದಲೂ ಬಂದಾತನು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ, ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ. ಆತ್ಮವು ಸಾಕ್ಷಿಯನ್ನು ಕೊಡುತ್ತದೆ. ಏಕೆಂದರೆ ಆತ್ಮನು ಸತ್ಯಸ್ವರೂಪನೇ.
ಸುವಾರ್ತೆ
19ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದನು. 20ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು. 21ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು. 22ಆತನು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮನನ್ನು ಪಡೆದುಕೊಳ್ಳಿರಿ. 23ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ” ಎಂದು ಹೇಳಿದನು. 24ಯೇಸು ಬಂದಾಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ದಿದುಮನೆನಿಸಿಕೊಳ್ಳುವ ತೋಮನು ಅವರ ಜೊತೆ ಇರಲಿಲ್ಲ. 25ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ನೋಡಿದ್ದೇವೆ” ಎಂದು ಹೇಳಿದರು. ಅದಕ್ಕೆ ಅವನು, “ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ” ಎಂದನು. 26ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು” 27ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು. 28ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು. 29ಯೇಸು ಆತನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ, ನೋಡದೆ ನಂಬಿದವರು ಧನ್ಯರು” ಎಂದು ಹೇಳಿದನು. 30ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳನ್ನೆಲ್ಲಾ ಈ ಗ್ರಂಥದಲ್ಲಿ ಬರೆದಿರುವುದಿಲ್ಲಾ. 31ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.
ಇಂದಿನ ಸಂತರು
- ಸಂತ ಇಸಿಡೋರ್, ಧರ್ಮಾಧ್ಯಕ್ಷ ಮತ್ತು ಧರ್ಮಸಭೆಯ ಪಂಡಿತ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು