Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 4 ಏಪ್ರಿಲ್

ಆರ್ಥೊಡಾಕ್ಸ್ ಪಂಚಾಂಗ · ಮಾರ್ಚ್ 22 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 4 ಏಪ್ರಿಲ್ 2027

ಭಾನುವಾರ · ಸ್ವರ 3

ಹಬ್ಬಗಳು ಮತ್ತು ಸಂತರು

ಮಹಾ ಉಪವಾಸದ ಮೂರನೆಯ ಭಾನುವಾರ

ಅಮೂಲ್ಯ ಶಿಲುಬೆಯ ವಂದನೆ

ಮಹಾ ಉಪವಾಸ ಕಾಲ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಉದಯಕಾಲದ 11ನೇ ಸುವಾರ್ತೆ

ಯೋಹಾ 21:15–25

15ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು. 16ಆತನು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು. 17ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು. 18“ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು” ಎಂದು ಹೇಳಿದನು. 19ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. 20ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ. 21ಇವನನ್ನು ಪೇತ್ರನು ನೋಡಿ ಯೇಸುವಿಗೆ, “ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?” ಎಂದು ಕೇಳಲು, 22ಯೇಸು ಅವನಿಗೆ “ನಾನು ಬರುವ ತನಕ ಇವನು ಉಳಿದಿರಬೇಕೆಂಬುದು ನನಗೆ ಮನಸ್ಸಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. 23ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದನು. 24ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು. 25ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.

ಪತ್ರಿಕೆ

ಇಬ್ರಿ 4:14–5:6

14ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ. 15ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ. 16ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ. 5:1ಮನುಷ್ಯರೊಳಗಿಂದ ಪ್ರತಿಯೊಬ್ಬ ಮಹಾಯಾಜಕನೂ ಆರಿಸಲ್ಪಟ್ಟು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ನಡೆಸುವುದಕ್ಕಾಗಿ ನೇಮಿಸಲಾಗಿದ್ದು. ಅವನು ಪಾಪಗಳ ನಿವಾರಣೆಗಾಗಿ ಕಾಣಿಕೆಗಳನ್ನು ಮತ್ತು ಯಜ್ಞಗಳನ್ನು ಸಮರ್ಪಿಸಬೇಕು. 2ತಾನೂ ಸಹ ಬಲಹೀನನಾಗಿರುವುದರಿಂದ ಅವನು ಅಜ್ಞಾನಿಗಳಿಗೂ ಮತ್ತು ಮಾರ್ಗತಪ್ಪಿದವರಿಗೂ ದಯಾಪರನಾಗಿ ನಡೆದುಕೊಳ್ಳುವುದಕ್ಕೆ ಶಕ್ತನಾಗಿರುವನು. 3ಆದ್ದರಿಂದ, ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪನಿವಾರಣೆಗಾಗಿ ಯಜ್ಞಗಳನ್ನು ಸಮರ್ಪಿಸಬೇಕು. 4ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ. 5ಅದೇ ರೀತಿಯಾಗಿ ಕ್ರಿಸ್ತನು, ಸಹ ತನ್ನನ್ನು ಘನಪಡಿಸಿಕೊಂಡು ತಾನೇ ಮಹಾಯಾಜಕನನ್ನಾಗಿ ಮಾಡಿಕೊಳ್ಳಲಿಲ್ಲ. ಆದರೆ “ನೀನು ನನ್ನ ಮಗನು, ಈ ಹೊತ್ತು ನಾನು ನಿನಗೆ ತಂದೆಯಾದೆನು” ಎಂದು ದೇವರೇ ಹೇಳಿದನು. 6ಆತನು ಇನ್ನೊಂದು ಕಡೆಯಲ್ಲಿ, “ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನು” ಎಂದು ಹೇಳುತ್ತಾನೆ.

ಸುವಾರ್ತೆ

ಮಾರ್ಕ 8:34–9:1

34ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. 35ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು. 36ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು? 37ಒಬ್ಬನು ತನ್ನ ಪ್ರಾಣಕ್ಕೆ ಬದಲಾಗಿ ಏನು ಈಡು ಕೊಡಲಾದೀತು? 38ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು. 9:1ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 22 ಮಾರ್ಚ್ ಎಂದರೆ ನಾಗರಿಕ ಪಂಚಾಂಗದ 4 ಏಪ್ರಿಲ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು