ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 5 ಏಪ್ರಿಲ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 5 ಏಪ್ರಿಲ್ 2027
ಸೋಮವಾರ · ಪಾಸ್ಕ ಕಾಲದ ಎರಡನೆಯ ವಾರ
ಹಬ್ಬಗಳು ಮತ್ತು ಸಂತರು
ಕರ್ತನ ಶುಭಸಂದೇಶ
ಮಹೋತ್ಸವ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
10ಮತ್ತೆ ಯೆಹೋವನು ಆಹಾಜನಿಗೆ, 11“ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳು. ಅದು ಪಾತಾಳದಷ್ಟು ಆಳದಲ್ಲಿದ್ದರೂ, ಮೇಲೆ ಎತ್ತರದಲ್ಲಿದ್ದರೂ ಅದನ್ನು ಕೇಳಿಕೋ” ಎಂದು ಹೇಳಿದನು. 12ಆಗ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ, ಇಲ್ಲವೆ ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದನು. 13ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ? 14ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. 8:10ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.
ಪ್ರತಿವಚನ ಕೀರ್ತನೆ
6ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ. 7ಆಗ ನಾನು, “ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ. 8ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು. 9ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ. 10ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ; ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು; ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ.
ಎರಡನೆಯ ವಾಚನ
4ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ. 5ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “(ದೇವರೇ,) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ, 6ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ. 7ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದೆನು. 8ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ. 9ತರುವಾಯ ಆತನು “ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ. 10ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.
ಸುವಾರ್ತೆ
26ಎಲಿಸಬೇತಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ದೇವರು ಗಬ್ರಿಯೇಲನೆಂಬ ತನ್ನ ದೂತನನ್ನು ಗಲಿಲಾಯ ಸೀಮೆಯ, ನಜರೇತೆಂಬ ಊರಿಗೆ, ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದನು; 27ಆ ಕನ್ನಿಕೆಯ ಹೆಸರು ಮರಿಯಳು; ಆಕೆಗೆ ದಾವೀದನ ಮನೆತನದ ಯೋಸೇಫನೆಂಬ ಪುರುಷನೊಂದಿಗೆ ನಿಶ್ಚಿತಾರ್ಥವಾಗಿತ್ತು. 28ಆ ದೂತನು ಆಕೆಯ ಬಳಿಗೆ ಬಂದು “ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ ಕರ್ತನು ನಿನ್ನ ಸಂಗಡ ಇದ್ದಾನೆ” ಅಂದನು. 29ಆಕೆಯು ಆ ಮಾತಿಗೆ ತಬ್ಬಿಬ್ಬಾಗಿ, ಇದೆಂಥ ಆಶೀರ್ವಾದ ಎಂದು ಯೋಚನೆಮಾಡುತ್ತಿದ್ದಳು. 30ಆ ದೂತನು ಆಕೆಗೆ, “ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ. 31ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು. 32ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು. 33ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು. 34ಆಗ ಮರಿಯಳು ಆ ದೂತನಿಗೆ, “ಇದು ಹೇಗಾದೀತು? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ” ಎಂದು ಕೇಳಿದಳು. 35ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು. 36ಇಗೋ, ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡು ಮಗುವಿದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಈಗ ಆರನೆಯ ತಿಂಗಳು. 37ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ” ಅಂದನು. 38ಆಗ ಮರಿಯಳು “ಇಗೋ, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗಾಗಲಿ” ಅಂದಳು. ಆ ಮೇಲೆ ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
ಇಂದಿನ ಸಂತರು
- ಸಂತ ವಿನ್ಸೆಂಟ್ ಫೆರರ್, ಧರ್ಮಗುರು
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು