ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 6 ಏಪ್ರಿಲ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 6 ಏಪ್ರಿಲ್ 2027
ಮಂಗಳವಾರ · ಪಾಸ್ಕ ಕಾಲದ ಎರಡನೆಯ ವಾರ
ಹಬ್ಬಗಳು ಮತ್ತು ಸಂತರು
ಪಾಸ್ಕ ಕಾಲದ ಎರಡನೆಯ ವಾರದ ಮಂಗಳವಾರ
ವಾರದ ದಿನ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
32ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು. 33ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು. 34ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು 35ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯಕತೆಗೆ ತಕ್ಕಂತೆ ಹಂಚಿ ಕೊಡುತ್ತಿದ್ದರು. 36ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ. 37ಅವನು ತನಗಿದ್ದ ಭೂಮಿಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಒಪ್ಪಿಸಿದನು.
ಪ್ರತಿವಚನ ಕೀರ್ತನೆ
1ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ. 2ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಯುಗಯುಗಾಂತರದಿಂದಲೂ ನೀನು ಇರುವಿ. 5ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
ಸುವಾರ್ತೆ
7‘ನೀವು ಹೊಸದಾಗಿ ಹುಟ್ಟಬೇಕು’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ 8ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದವರೆಲ್ಲರೂ ಅದರಂತೆಯೇ” ಎಂದನು. 9ಅದಕ್ಕೆ ನಿಕೊದೇಮನು “ಇದೆಲ್ಲಾ ಹೇಗೆ ಸಾಧ್ಯ?” ಎಂದಾಗ, 10ಯೇಸು ಅವನಿಗೆ ಹೇಳಿದ್ದೇನಂದರೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಈ ಸಂಗತಿಗಳು ತಿಳಿಯುವುದಿಲ್ಲವೋ? 11ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ನೋಡಿದ್ದಕ್ಕೆ ಸಾಕ್ಷಿ ಕೊಡುತ್ತೇವೆ. ಆದರೂ ನೀವು ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ. 12ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ? 13ಪರಲೋಕದಿಂದ ಇಳಿದು ಬಂದವನೇ, ಅಂದರೆ, ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ. 14ಇದಲ್ಲದೆ ಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು. 15ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು