ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 6 ಏಪ್ರಿಲ್
ಆರ್ಥೊಡಾಕ್ಸ್ ಪಂಚಾಂಗ · ಮಾರ್ಚ್ 24 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 6 ಏಪ್ರಿಲ್ 2027
ಮಂಗಳವಾರ · ಮಹಾ ಉಪವಾಸದ ನಾಲ್ಕನೆಯ ವಾರ · ಸ್ವರ 3
ಹಬ್ಬಗಳು ಮತ್ತು ಸಂತರು
Forefeast of the Annunciation
ಮಹಾ ಉಪವಾಸ ಕಾಲ
ಕಟ್ಟುನಿಟ್ಟಿನ ಉಪವಾಸ (ಒಣ ಆಹಾರ: ರೊಟ್ಟಿ, ತರಕಾರಿ, ಹಣ್ಣು)
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಆರನೆಯ ತಾಸು
1ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ, ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು. 2ಏಕೆಂದರೆ ನೀನು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ, ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಲಾರದ ಹಾಳು ಊರನ್ನಾಗಿಯೂ ಮಾಡಿದ್ದಿ. 3ಆದಕಾರಣ ಬಲಿಷ್ಠವಾದ ಜನಾಂಗವು ನಿನ್ನನ್ನು ಘನಪಡಿಸುವುದು, ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವುದು. 4ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ, ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ. 5ಮೋಡಗಳು ಒಣನೆಲದ ಕಾವನ್ನು ತಂಪಾಗಿಸುವಂತೆ ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೆ ಕಡಿಮೆಯಾಗುವುದೋ ಹಾಗೆ ನಿನ್ನಿಂದ ಭೀಕರರ ಉತ್ಸಾಹ ಗಾನವು ಕ್ರಮೇಣ ನಿಂತುಹೋಗುವುದು. 6ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು. 7ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ, ಸಕಲ ದೇಶದವರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವನು. 8ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ. 9ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು.
ಸಂಧ್ಯಾ ಪ್ರಾರ್ಥನೆ: ವಾಚನ
8ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ, 9“ಕೇಳಿರಿ ನಾನು ನಿಮ್ಮೊಂದಿಗೂ, ನಿಮ್ಮ ತರುವಾಯ ನಿಮ್ಮ ಸಂತತಿಯವರೊಂದಿಗೂ, ಒಡಂಬಡಿಕೆ ಮಾಡಿಕೊಳ್ಳುವೆನು. 10ನಿಮ್ಮೊಂದಿಗೆ ನಾವೆಯಿಂದ ಹೊರಟು ಬಂದ ಪಶು ಪಕ್ಷಿ, ಮೃಗ, ಸಕಲ ಭೂಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ. 11ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ” ಎಂದು ಹೇಳಿದನು. 12ದೇವರು ಪುನಃ ಹೇಳಿದ್ದೇನಂದರೆ, “ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಈ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಈ ಕಾಮನಬಿಲ್ಲೇ ಗುರುತಾಗಿರುವುದು. 13ನನಗೂ ಭೂಜೀವಿಗಳಿಗೂ ಮಾಡಿಕೊಂಡ ಒಡಂಬಡಿಕೆಗೆ ಇದೇ ಗುರುತಾಗಿರಲಿ. 14ನಾನು ಭೂಲೋಕದ ಮೇಲೆ ಮೇಘಗಳನ್ನು ಕವಿಸುವಾಗ ಆ ಕಾಮನಬಿಲ್ಲು ಮೇಘಗಳಲ್ಲಿ ಕಂಡುಬರುವುದು. 15ಆಗ ನಾನು ನಿಮ್ಮನ್ನೂ, ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ. 16ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು” ಅಂದನು. 17ಮತ್ತು ದೇವರು ನೋಹನಿಗೆ, “ನನಗೂ ಎಲ್ಲಾ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು” ಎಂದು ಹೇಳಿದನು.
ಸಂಧ್ಯಾ ಪ್ರಾರ್ಥನೆ: ವಾಚನ
8ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು, ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು. 9ಹೊಟ್ಟೆಗಿಲ್ಲದ ಡಾಂಭಿಕನಿಗಿಂತಲೂ ಸೇವಕನುಳ್ಳ ಸಾಧಾರಣ ಮನುಷ್ಯನ ಸ್ಥಿತಿಯೇ ಲೇಸು. 10ಶಿಷ್ಟನು ತನ್ನ ಪಶುಗಳ ಕ್ಷೇಮವನ್ನು ಲಕ್ಷಿಸುತ್ತಾನೆ, ದುಷ್ಟನ ವಾತ್ಸಲ್ಯವೋ ಕ್ರೂರತನವೇ. 11ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು, ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ. 12ಕೆಡುಕರ ಕೊಳ್ಳೆಯು ದುಷ್ಟರಿಗೆ ಇಷ್ಟ, ಆದರೆ ಶಿಷ್ಟರ ಬುಡ ಫಲದಾಯಕ. 13ದುಷ್ಟನು ತನ್ನ ತುಟಿಗಳ ದೋಷದಿಂದ ಬೋನಿಗೆ ಬೀಳುವನು, ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು. 14ಬಾಯಿಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನು ಅನುಭವಿಸುವನು, ಅವನ ಕೈಕೆಲಸದ ಫಲವು ಅವನಿಗೆ ಪ್ರಾಪ್ತವಾಗುವುದು. 15ಮೂರ್ಖನ ನಡತೆ ಅವನ ದೃಷ್ಟಿಗೆ ಸರಿ, ಜ್ಞಾನಿಯು ಉಚಿತಾಲೋಚನೆಯನ್ನು ಗಮನಿಸುವನು. 16ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು, ಜಾಣನು ಅವಮಾನವನ್ನು ಮರೆಮಾಡುವನು. 17ಸತ್ಯವನ್ನಾಡುವವನು ನ್ಯಾಯವನ್ನು ತೋರ್ಪಡಿಸುವನು, ಸುಳ್ಳುಸಾಕ್ಷಿಯು ಅಸತ್ಯವನ್ನು ನುಡಿಯುವನು. 18ಕತ್ತಿ ತಿವಿದ ಹಾಗೆ ದುಡುಕಿ ಮಾತನಾಡುವವರುಂಟು, ಜ್ಞಾನವಂತರ ಮಾತು ಸ್ವಸ್ಥತೆಯನ್ನು ತರುವುದು. 19ಸತ್ಯದ ತುಟಿ ಶಾಶ್ವತ, ಸುಳ್ಳಿನ ನಾಲಿಗೆ ಕ್ಷಣಿಕ. 20ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ, ಹಿತೋಪದೇಶಕರ ಮನಸ್ಸಿನಲ್ಲಿ ಉಲ್ಲಾಸ. 21ಸಜ್ಜನರಿಗೆ ಯಾವ ಹಾನಿಯೂ ಸಂಭವಿಸದು, ದುರ್ಜನರಿಗೆ ಕೇಡು ತುಂಬಿ ತುಳುಕುವುದು. 22ಸುಳ್ಳುತುಟಿ ಯೆಹೋವನಿಗೆ ಅಸಹ್ಯವಾಗಿವೆ. ಸತ್ಯವಂತರು ಆತನಿಗೆ ಆನಂದ ತರುತ್ತಾರೆ.
ಸಂಧ್ಯಾ ಪ್ರಾರ್ಥನೆ: ವಾಚನ (ಶುಭಸಂದೇಶ)
10ಆಗ ಯಾಕೋಬನು ಹಾರಾನಿಗೆ ಹೋಗಬೇಕೆಂದು ಬೇರ್ಷೆಬದಿಂದ ಹೊರಟನು. 11ಅವನು ಪ್ರಯಾಣಾರ್ಥವಾಗಿ ಹೋಗುತ್ತಿರುವಾಗ ಹೊತ್ತು ಮುಳುಗಿದ್ದರಿಂದ ಆ ರಾತ್ರಿ ಅಲ್ಲಿಯೇ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು. 12ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು. 13ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು. 14ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು. 15ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು. 16ಯಾಕೋಬನು ನಿದ್ದೆಯಿಂದ ಎಚ್ಚೆತ್ತು, “ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ನೆಲೆಸಿದ್ದಾನೆ. ಇದು ನನಗೆ ತಿಳಿಯದೆ ಹೋಯಿತು” ಎಂದನು. 17ಅವನು ಭಯಪಟ್ಟವನಾಗಿ, “ಈ ಸ್ಥಳವು ಪವಿತ್ರವಾದ್ದದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು” ಎಂದನು.
ಸಂಧ್ಯಾ ಪ್ರಾರ್ಥನೆ: ವಾಚನ (ಶುಭಸಂದೇಶ)
27ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಿಂದ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನು” ಇದು ಕರ್ತನಾದ ಯೆಹೋವನ ನುಡಿ. 44:1ತರುವಾಯ ಆ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ತಿರುಗಿ ಕರೆದುಕೊಂಡು ಬಂದನು. ಅದು ಮುಚ್ಚಲ್ಪಟ್ಟಿತ್ತು. 2ಆಗ ಯೆಹೋವನು ನನಗೆ, “ಈ ಬಾಗಿಲು ಮುಚ್ಚಲ್ಪಟ್ಟಿರಬೇಕು, ಇದನ್ನು ತೆರೆಯಬಾರದು, ಇದರಿಂದ ಯಾರೂ ಪ್ರವೇಶಿಸಬಾರದು. ಇಸ್ರಾಯೇಲಿನ ದೇವರಾದ ಯೆಹೋವನು ಇದರಿಂದ ಪ್ರವೇಶಿಸಿದ್ದಾನೆ. ಆದುದರಿಂದ ಇದು ಮುಚ್ಚಿರಬೇಕು. 3ಇಸ್ರಾಯೇಲಿನ ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಊಟ ಮಾಡುವುದಕ್ಕಾಗಿ ಇಲ್ಲಿ ಕುಳಿತುಕೊಳ್ಳಬಹುದು. ಅವನು ಹೆಬ್ಬಾಗಿಲ ಪಡಸಾಲೆಯ ಮಾರ್ಗವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು” ಎಂದು ಹೇಳಿದನು. 4ಬಳಿಕ ಆ ಪುರುಷನು ಉತ್ತರದಿಕ್ಕಿನ ಹೆಬ್ಬಾಗಿಲಿನ ಮಾರ್ಗವಾಗಿ ನನ್ನನ್ನು ಆಲಯದ ಮುಂದೆ ಕರೆದುಕೊಂಡು ತಂದನು; ಆಹಾ, ನಾನು ನೋಡಿದ ಯೆಹೋವನ ಮಹಿಮೆಯೂ, ಯೆಹೋವನ ಆಲಯವನ್ನು ತುಂಬಿಕೊಂಡಿತು. ಅದನ್ನು ನೋಡಿ ನಾನು ಬೋರಲು ಬಿದ್ದೆನು.
ಸಂಧ್ಯಾ ಪ್ರಾರ್ಥನೆ: ವಾಚನ (ಶುಭಸಂದೇಶ)
1ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು, ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ. 2ಆಕೆ ಪಶುಗಳನ್ನು ಕೊಯಿಸಿ ಪಾನದ್ರವ್ಯಗಳೊಡನೆ ದ್ರಾಕ್ಷಾರಸವನ್ನು ಬೆರಸಿ, ಔತಣವನ್ನು ಸಿದ್ಧಪಡಿಸಿದ್ದಾಳೆ. 3ಆಕೆಯು ತನ್ನ ದಾಸಿಯರನ್ನು ಕಳುಹಿಸಿ, ಪಟ್ಟಣದ ರಾಜಮಾರ್ಗಗಳ ಮುಖ್ಯಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ. 4ಆಕೆಯು ಬುದ್ಧಿಹೀನರಿಗೆ, “ಮೂಢನಾಗಿರುವವನು ಈ ಕಡೆಗೆ ತಿರುಗಲಿ, 5ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರೆಸಿರುವ ದ್ರಾಕ್ಷಾರಸವನ್ನು ಕುಡಿಯಿರಿ. 6ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ. 7ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು. 8ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು. 9ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳಿವಳಿಕೆಯನ್ನು ಪಡೆಯುವನು. 10ಯೆಹೋವನ ಭಯವೇ ಜ್ಞಾನಕ್ಕೆ ಮೂಲವು, ಪರಿಶುದ್ಧ ದೇವರ ತಿಳಿವಳಿಕೆಯೇ ವಿವೇಕವು. 11ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಷ್ಯದ ವರ್ಷಗಳು ವೃದ್ಧಿಯಾಗುವವು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 24 ಮಾರ್ಚ್ ಎಂದರೆ ನಾಗರಿಕ ಪಂಚಾಂಗದ 6 ಏಪ್ರಿಲ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು