ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 7 ಏಪ್ರಿಲ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 7 ಏಪ್ರಿಲ್ 2027
ಬುಧವಾರ · ಪಾಸ್ಕ ಕಾಲದ ಎರಡನೆಯ ವಾರ
ಹಬ್ಬಗಳು ಮತ್ತು ಸಂತರು
ಪಾಸ್ಕ ಕಾಲದ ಎರಡನೆಯ ವಾರದ ಬುಧವಾರ
ಸ್ಮರಣೆ · ಆರಾಧನಾ ಬಣ್ಣ: ಬಿಳಿ
ಸಂತ ಜಾನ್ ಬ್ಯಾಪ್ಟಿಸ್ಟ್ ಡಿ ಲಾ ಸಾಲ್, ಧರ್ಮಗುರು · ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
17ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು, 18ಅಸೂಯೆ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು. 19ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು, 20“ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ” ಅಂದನು. 21ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು. 22ಓಲೇಕಾರರು ಹೋಗಿ ಅವರನ್ನು ಸೆರೆಮನೆಯಲ್ಲಿ ಕಾಣದೆ ಹಿಂತಿರುಗಿ ಬಂದು, 23“ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ” ಎಂದು ತಿಳಿಸಿದರು. 24ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು. 25ಅಷ್ಟರಲ್ಲಿ ಒಬ್ಬನು ಬಂದು; “ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು” ಅವರಿಗೆ ತಿಳಿಸಿದನು. 26ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.
ಪ್ರತಿವಚನ ಕೀರ್ತನೆ
1ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಟಾಗ ರಚಿಸಿದ ಕೀರ್ತನೆ. ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು. 2ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; ಇದನ್ನು ದೀನರು ಕೇಳಿ ಸಂತೋಷಿಸುವರು. 3ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ. 4ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು. 5ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ. 6ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು. 7ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ. 8ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.
ಸುವಾರ್ತೆ
16“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು. 17ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ. 18ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ. 19ಆ ತೀರ್ಪು ಏನೆಂದರೆ ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು. 20ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ. 21ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.”
ಇಂದಿನ ಸಂತರು
- ಸಂತ ಜಾನ್ ಬ್ಯಾಪ್ಟಿಸ್ಟ್ ಡಿ ಲಾ ಸಾಲ್, ಧರ್ಮಗುರು
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು