Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 8 ಏಪ್ರಿಲ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 8 ಏಪ್ರಿಲ್ 2027

ಗುರುವಾರ · ಪಾಸ್ಕ ಕಾಲದ ಎರಡನೆಯ ವಾರ

ಹಬ್ಬಗಳು ಮತ್ತು ಸಂತರು

ಪಾಸ್ಕ ಕಾಲದ ಎರಡನೆಯ ವಾರದ ಗುರುವಾರ

ವಾರದ ದಿನ · ಆರಾಧನಾ ಬಣ್ಣ: ಬಿಳಿ

ದಿನದ ವಾಚನಗಳು

ಮೊದಲನೆಯ ವಾಚನ

ಅ. ಕೃ 5:27–33

27ಅಪೊಸ್ತಲರನ್ನು ಕರತಂದು ಹಿರೀಸಭೆಯ ಮುಂದೆ ನಿಲ್ಲಿಸಲು ಮಹಾಯಾಜಕನು ಅವರನ್ನು ವಿಚಾರಣೆಮಾಡುತ್ತಾ, 28“ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು. 29ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ. 30ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪೂರ್ವಿಕರ ದೇವರು ಎಬ್ಬಿಸಿದನು. 31ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು. 32ಈ ಕಾರ್ಯಗಳಿಗೆ ನಾವು ಸಾಕ್ಷಿ ಹಾಗೂ ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನು ಸಾಕ್ಷಿ” ಎಂದು ಹೇಳಿದರು. 33ಸಭಿಕರು ಈ ಮಾತನ್ನು ಕೇಳಿ ರೌದ್ರಗೊಂಡು ಅವರನ್ನು ಕೊಲ್ಲಿಸಬೇಕೆಂದು ಆಲೋಚಿಸಿದರು.

ಪ್ರತಿವಚನ ಕೀರ್ತನೆ

ಕೀರ್ತ 34:1, 8, 16–19

1ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಟಾಗ ರಚಿಸಿದ ಕೀರ್ತನೆ. ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು. 8ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು. 16ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು. 17ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ. 18ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ. 19ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.

ಸುವಾರ್ತೆ

ಯೋಹಾ 3:31–36

31ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು. 32ತಾನು ಕಂಡು ಕೇಳಿದ್ದಕ್ಕೆ ಸಾಕ್ಷಿ ಕೊಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ. 33ಆತನ ಸಾಕ್ಷಿಯನ್ನು ಸ್ವೀಕರಿಸಿದವನು ದೇವರು ಸತ್ಯವಂತನೆಂದು ದೃಢಪಡಿಸುವವನಾಗಿದ್ದಾನೆ. 34ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ. 35ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ. 36ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು