ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 8 ಏಪ್ರಿಲ್
ಆರ್ಥೊಡಾಕ್ಸ್ ಪಂಚಾಂಗ · ಮಾರ್ಚ್ 26 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 8 ಏಪ್ರಿಲ್ 2027
ಗುರುವಾರ · ಮಹಾ ಉಪವಾಸದ ನಾಲ್ಕನೆಯ ವಾರ · ಸ್ವರ 3
ಹಬ್ಬಗಳು ಮತ್ತು ಸಂತರು
Synaxis of the Archangel Gabriel
ಮಹಾ ಉಪವಾಸ ಕಾಲ
ಕಟ್ಟುನಿಟ್ಟಿನ ಉಪವಾಸ (ಒಣ ಆಹಾರ: ರೊಟ್ಟಿ, ತರಕಾರಿ, ಹಣ್ಣು)
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಆರನೆಯ ತಾಸು
14ಆದುದರಿಂದ ಯೆರೂಸಲೇಮಿನ ಈ ಜನರನ್ನು ಆಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ, 15ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ. 16ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು. 17ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು. 18ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವುದು. 19ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು; ಹೊತ್ತಾರೆಯಿಂದ ಹೊತ್ತಾರೆಗೆ ಹಗಲು ರಾತ್ರಿಯೂ ಹಾದುಹೋಗುವುದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವುದರಿಂದ ಭಯವಾಗುವುದು. 20ಒಬ್ಬನು ಕಾಲುಚಾಚಿಕೊಂಡು ಮಲಗುವನೆಂದರೆ ಹಾಸಿಗೆಯ ಉದ್ದವೂ ಸಾಲುವುದಿಲ್ಲ; ಮುದುರಿಕೊಂಡು ಮಲಗುವನೆಂದರೆ ಹೊದಿಕೆಯ ಅಗಲವೂ ಸಾಲುವುದಿಲ್ಲ.” 21ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡೆಸಬೇಕೆಂತಲೂ, ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವನು. 22ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ.
ಸಂಧ್ಯಾ ಪ್ರಾರ್ಥನೆ: ವಾಚನ
32ಜನಾಂಗಗಳ ಸಂತತಿಯ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ. 11:1ಆಗ ಭೂಲೋಕದವರೆಲ್ಲರಿಗೂ ಒಂದೇ ಭಾಷೆ; ಒಂದೇ ಮಾತು ಇತ್ತು. ಭಾಷಾಭೇದಗಳೇನೂ ಇರಲಿಲ್ಲ. 2ಜನರು ಪೂರ್ವ ದಿಕ್ಕಿಗೆ ಪ್ರಯಾಣಮಾಡುತ್ತಿರುವಾಗ ಶಿನಾರ್ ದೇಶದ ಬಯಲು ಸೀಮೆಯನ್ನು ಕಂಡು ಅಲ್ಲೇ ನೆಲೆಸಿದರು. 3“ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು. 4ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. 5ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ, ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು. 6ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ. 7ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು. 8ಯೆಹೋವನು ಅದೇ ಪ್ರಕಾರ ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿ ಬಿಟ್ಟನು. ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು. 9ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.
ಸಂಧ್ಯಾ ಪ್ರಾರ್ಥನೆ: ವಾಚನ
19ಇಷ್ಟಸಿದ್ಧಿ ಮನಸ್ಸಿಗೆ ಸಿಹಿ, ಕೆಟ್ಟದ್ದನ್ನು ಬಿಡುವುದು ಮೂಢರಿಗೆ ಕಹಿ. 20ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು. 21ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು, ಮಂಗಳವು ಸಜ್ಜನರಿಗೆ ಪ್ರತಿಫಲವಾಗುವುದು. 22ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು. 23ಬಡವರಿಗೆ ಬಂಜರು ಭೂಮಿಯೂ ಬಹು ಬೆಳೆಯನ್ನೀಯುವುದು, ಅನ್ಯಾಯದಿಂದ ಹಾಳಾದ ಸುದ್ದಿಯು ಉಂಟು. 24ಬೆತ್ತ ಹಿಡಿಯದ ತಂದೆ ಮಗನಿಗೆ ಶತ್ರು, ಸುಶಿಕ್ಷಣವನ್ನು ನೀಡುವ ತಂದೆ ಮಗನಿಗೆ ಮಿತ್ರ. 25ಶಿಷ್ಟನು ಹೊಟ್ಟೆತುಂಬಾ ಉಣ್ಣುವನು, ದುಷ್ಟನ ಹೊಟ್ಟೆ ಹಸಿದಿರುವುದು. 14:1ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ನಾಶಮಾಡುವಳು. 2ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು, ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು. 3ಮೂರ್ಖನ ಮಾತುಗಳು ಅವನ ಬೆನ್ನಿಗೆ ಬೆತ್ತ, ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು. 4ಎತ್ತುಗಳಿಲ್ಲದಿರುವಾಗ ಗೋದಲಿಯು ಶುದ್ಧ, ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ವೃದ್ಧಿಯಾಗುವುದು. 5ಸತ್ಯಸಾಕ್ಷಿಯು ಸುಳ್ಳಾಡನು, ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು. 6ಧರ್ಮನಿಂದಕನಲ್ಲಿ ಹುಡುಕಿದರೂ ಜ್ಞಾನವು ಸಿಕ್ಕದು, ವಿವೇಕಿಗೆ ತಿಳಿವಳಿಕೆಯು ಸುಲಭವಾಗಿ ದೊರೆಯುವುದು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 26 ಮಾರ್ಚ್ ಎಂದರೆ ನಾಗರಿಕ ಪಂಚಾಂಗದ 8 ಏಪ್ರಿಲ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು