ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 9 ಏಪ್ರಿಲ್
ಆರ್ಥೊಡಾಕ್ಸ್ ಪಂಚಾಂಗ · ಮಾರ್ಚ್ 27 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 9 ಏಪ್ರಿಲ್ 2027
ಶುಕ್ರವಾರ · ಮಹಾ ಉಪವಾಸದ ನಾಲ್ಕನೆಯ ವಾರ · ಸ್ವರ 3
ಹಬ್ಬಗಳು ಮತ್ತು ಸಂತರು
Martyr Matrona of Thessalonica (3rd-4th C)
ಮಹಾ ಉಪವಾಸ ಕಾಲ
ಕಟ್ಟುನಿಟ್ಟಿನ ಉಪವಾಸ (ಒಣ ಆಹಾರ: ರೊಟ್ಟಿ, ತರಕಾರಿ, ಹಣ್ಣು)
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಆರನೆಯ ತಾಸು
13ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ. 14ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು. 15ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಡುವುದಕ್ಕೆ, ಅಗಾಧಕ್ಕೆ ಹೋಗಿ, “ನಮ್ಮನ್ನು ಯಾರು ನೋಡುವರು? ಯಾರು ತಿಳಿದಾರು?” ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡೆಸುವವರ ಗತಿಯನ್ನು ಏನು ಹೇಳಲಿ! 16ಅಯ್ಯೋ, ನೀವು ಎಂಥಾ ಮೂರ್ಖರು! ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು. ಕೆಲಸ ಮಾಡಿದವನಿಗೆ ಮಾಡಲ್ಪಟ್ಟದ್ದು, “ಆತನು ಕೆಲಸ ಮಾಡಲಿಲ್ಲ” ಎಂದು ಹೇಳುವುದೋ? ಇಲ್ಲವೇ, ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸಲ್ಪಟ್ಟದ್ದು, “ಆತನಿಗೆ ವಿವೇಕವಿಲ್ಲ” ಎಂದು ಹೇಳುವುದೋ? 17ಇನ್ನು ಸ್ವಲ್ಪ ಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು, ಈಗಿನ ತೋಟವು ಅರಣ್ಯವಾಗಿ ಕಾಣಿಸುವುದು. 18ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು. 19ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು. 20ಏಕೆಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು. 21ಸುಳ್ಳುಸಾಕ್ಷಿಯಿಂದ ತಪ್ಪು ಹೊರಿಸುವವರೂ, ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ, ನ್ಯಾಯವಂತನ ನ್ಯಾಯವನ್ನು ಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲರೂ ನಿರ್ಮೂಲವಾಗುವರು. 22ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ, “ಯಾಕೋಬ್ಯರು, ಇನ್ನು ನಾಚಿಕೆಪಡುವುದಿಲ್ಲ, ಅವರ ಮುಖವು ಇನ್ನು ಕಳೆಗುಂದುವುದಿಲ್ಲ. 23ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡೆಸುವ ಕೆಲಸವನ್ನು ನೋಡಿ, ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾಮಿಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲರ ದೇವರಿಗೆ ನಡುಗುವರು.
ಸಂಧ್ಯಾ ಪ್ರಾರ್ಥನೆ: ವಾಚನ
1ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು. 2ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ. 3ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು. 4ಯೆಹೋವನು ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು. 5ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ತಮ್ಮನ ಮಗನಾದ ಲೋಟನನ್ನೂ, ತಾನೂ ಲೋಟನೂ ಹಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ, ದಾಸ ದಾಸಿಯರನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ಬಂದನು. 6ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು. 7ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.
ಸಂಧ್ಯಾ ಪ್ರಾರ್ಥನೆ: ವಾಚನ
15ಮೂಢನು ಯಾವ ಮಾತನ್ನಾದರೂ ನಂಬುವನು, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು. 16ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು. 17ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು. 18ಮೂರ್ಖರಿಗೆ ಮೂರ್ಖತನವೇ ಸ್ವತ್ತು, ಜಾಣರಿಗೆ ಜ್ಞಾನವೇ ಕಿರೀಟ. 19ಕೆಟ್ಟವರು ಒಳ್ಳೆಯವರಿಗೆ ಬಾಗುವರು, ದುಷ್ಟರು ಶಿಷ್ಟರ ಬಾಗಿಲಲ್ಲಿ ಅಡ್ಡಬೀಳುವರು. 20ಬಡವನು ನೆರೆಯವನಿಗೂ ಅಸಹ್ಯ, ಧನವಂತನಿಗೆ ಬಹು ಜನ ಮಿತ್ರರು. 21ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು. 22ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು. 23ಶ್ರಮೆಯಿಂದ ಸಮೃದ್ಧಿ, ಹರಟೆಯಿಂದ ಕೊರತೆ. 24ಜ್ಞಾನಿಗಳ ಜ್ಞಾನಕಿರೀಟವೇ ಅವರ ಶ್ರೇಷ್ಠ ಸಂಪತ್ತು, ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ. 25ಸತ್ಯಸಾಕ್ಷಿಯು ಪ್ರಾಣರಕ್ಷಕ, ಸುಳ್ಳುಸಾಕ್ಷಿಯು ವಂಚಕ. 26ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 27 ಮಾರ್ಚ್ ಎಂದರೆ ನಾಗರಿಕ ಪಂಚಾಂಗದ 9 ಏಪ್ರಿಲ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು