Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 10 ಏಪ್ರಿಲ್

ಆರ್ಥೊಡಾಕ್ಸ್ ಪಂಚಾಂಗ · ಮಾರ್ಚ್ 28 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 10 ಏಪ್ರಿಲ್ 2027

ಶನಿವಾರ · ಮಹಾ ಉಪವಾಸದ ನಾಲ್ಕನೆಯ ವಾರ · ಸ್ವರ 3

ಹಬ್ಬಗಳು ಮತ್ತು ಸಂತರು

ಮೃತರ ಸ್ಮರಣೆಯ ಶನಿವಾರ

ಮಹಾ ಉಪವಾಸ ಕಾಲ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ (ಮೃತರು)

1 ಕೊರಿ 15:47–57

47ಮೊದಲನೆಯ ಮನುಷ್ಯನು ಮಣ್ಣಿನಿಂದ ಮಾಡಲ್ಪಟ್ಟವನು; ಭೂಮಿಗೆ ಸೇರಿದವನು, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು. 48ಮಣ್ಣಿನಿಂದ ಹುಟ್ಟಿದವನು ಎಂಥವನೋ ಮಣ್ಣಿಗೆ ಸಂಬಂಧಪಟ್ಟವರೂ ಅಂಥವರೇ ಆಗಿರುತ್ತಾರೆ; ಪರಲೋಕದಿಂದ ಬಂದಾತನು ಎಂಥವನೋ ಪರಲೋಕಕ್ಕೆ ಸಂಬಂಧಪಟ್ಟವರೂ ಅಂಥವರೇ. 49ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು. 50ಸಹೋದರರೇ, ನಾನು ಹೇಳುವುದೇನಂದರೆ, ರಕ್ತ ಮಾಂಸಗಳು ದೇವರ ರಾಜ್ಯವನ್ನು ವಶಪಡಿಸಿಕೊಳ್ಳಲಾರದು; ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ. 51ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು. 52ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು. 53ನಶಿಸುವಂಥ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವುದೂ, ಮರಣಕ್ಕೆ ಅಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದೂ ಅಗತ್ಯವಾಗಿದೆ. 54ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು. 55“ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?” 56ಸಾವಿನ ವಿಷಕೊಂಡಿ ಪಾಪವೇ; ಪಾಪದ ಶಕ್ತಿಯ ಆಧಾರವು ಧರ್ಮಶಾಸ್ತ್ರವಿಧಿಗಳೇ. 57ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸದಾಕಾಲ ಮಹಿಮೆಯುಂಟಾಗಲಿ.

ಪತ್ರಿಕೆ

ಇಬ್ರಿ 6:9–12

9ಪ್ರಿಯರೇ, ಈ ರೀತಿಯಾಗಿ ನಾವು ಮಾತನಾಡಿದರೂ ನಿಮ್ಮ ವಿಷಯವಾಗಿಯೂ ರಕ್ಷಣೆಗೆ ಸಂಬಂಧಿಸಿದವುಗಳಲ್ಲಿಯೂ ನೀವು ಉತ್ತಮರಾಗಿದ್ದೀರೆಂದು ನಂಬಿದ್ದೇವೆ. 10ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ. 11ನಿರೀಕ್ಷೆಯ ಸಂಪೂರ್ಣ ನಿಶ್ಚಯತ್ವವನ್ನು ಹೊಂದುವುದಕ್ಕಾಗಿ ಅಂತ್ಯದವರೆಗೂ ನೀವು ಅದೇ ಶ್ರದ್ಧೆಯನ್ನು ತೋರಿಸಬೇಕೆಂದು ನಾನು ಬಹಳವಾಗಿ ಅಪೇಕ್ಷಿಸುತ್ತೇವೆ. 12ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.

ಸುವಾರ್ತೆ (ಮೃತರು)

ಯೋಹಾ 5:24–30

24ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ. 25ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು. 26ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ. 27ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ. 28ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗ ಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ, 29ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು. 30“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.

ಸುವಾರ್ತೆ

ಮಾರ್ಕ 7:31–37

31ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು. 32ಆಗ ಕೆಲವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರೆದುಕೊಂಡು ಬಂದು, ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು. 33ಆತನು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿ ಇಟ್ಟನು ಮತ್ತು ಉಗುಳಿ ನಂತರ ಅವನ ನಾಲಿಗೆಯನ್ನು ಮುಟ್ಟಿ, 34ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, “ಎಪ್ಫಥಾ” ಎಂದು ಹೇಳಿದನು. ಆ ಶಬ್ದಕ್ಕೆ “ತೆರೆಯಲಿ” ಎಂದರ್ಥ. 35ಹೇಳುತ್ತಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು; ಅವನು ಸ್ಪಷ್ಟವಾಗಿ ಮಾತನಾಡಿದನು. 36ಆಗ ಆತನು, ಇದನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಕಟ್ಟಪ್ಪಣೆ ಮಾಡಿದನು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಪ್ರಚಾರ ಮಾಡಿದರು. 37ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 28 ಮಾರ್ಚ್ ಎಂದರೆ ನಾಗರಿಕ ಪಂಚಾಂಗದ 10 ಏಪ್ರಿಲ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು